ಕಲಬುರಗಿ: ನಗರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮಾರ್ಚ್ 28 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು (Direct Interview) ಹಮ್ಮಿಕೊಳ್ಳಲಾಗಿದೆ. ಈ ಕುರಿತು ಕಲಬುರಗಿ (Jobs In Kalaburagi) ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಅಧಿಕೃತ ಮಾಹಿತಿ ನೀಡಿದ್ದಾರೆ.
ಸಂದರ್ಶನದ ಹೆಸರು | ನೇರ ಸಂದರ್ಶನ |
ದಿನಾಂಕ | ಮಾರ್ಚ್ 28 |
ಭಾಗವಹಿಸುವ ಕಂಪನಿಗಳ ವಿವರ | ಕಲಬುರಗಿಯ ಎಸ್.ಬಿ.ಐ ಲೈಫ್ ಇನ್ಸುರೆನ್ಸ್ ಯೂನಿಟ್, ಲೈಫ್ ಮಿತ್ರಾ, ಎ.ಬಿ. ಪವರ್ ಸಿಸ್ಟಮ್ |
ದೂರವಾಣಿ ಸಂಖ್ಯೆ | 08472-274846 |
* ಲೈಫ್ ಮಿತ್ರಾ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 30 ರಿಂದ 60 ವರ್ಷದೊಳಗಿರಬೇಕು. ಮಠ ಮಲ್ಟಿ ಮೈಂಡ್ಸ್ನಲ್ಲಿ ಟೆಲಿ ಕಾಲರ್ ಹುದ್ದೆಗೆ ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
* ಎ.ಬಿ. ಪವರ್ ಸಿಸ್ಟಮ್ನಲ್ಲಿ ಎಫ್.ಎಸ್.ಇ. ಕೋ-ಆರ್ಡಿನೇಟರ್ ಹುದ್ದೆಗೆ ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30ವರ್ಷದೊಳಗಿರಬೇಕು. ಎಫ್.ಎಸ್.ಇ. (ಫೀಲ್ಡ್ ಸರ್ವೀಸ್ ಇಂಜಿನಿಯರಿಂಗ್) ಹುದ್ದೆಗೆ ಐ.ಟಿ.ಐ. (ಎಲ್ಲಾ ಟ್ರೇಡ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್, ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಇದನ್ನೂ ಓದಿ: Kalaburagi: ಈ ಶಾಲೆಯಲ್ಲಿ ಪ್ರತಿನಿತ್ಯ ಎರಡು ಗಂಟೆಯಷ್ಟೇ ಪಾಠ!
ಭತ್ಯೆ ಸೌಲಭ್ಯ ಇಲ್ಲ
ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು. ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಇದನ್ನೂ ಓದಿ: Kalaburagi: ಏನೂ ಸಮಸ್ಯೆಯಿಲ್ಲ, ಎಲ್ಲರಿಗೂ ಸಮೃದ್ಧಿ ಸಿಗುತ್ತೆ! ಇದು ಬೀರಲಿಂಗೇಶ್ವರ ಭವಿಷ್ಯ
ಹೆಚ್ಚಿನ ಮಾಹಿತಿಗಾಗಿ
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ