ಕಲಬುರಗಿ: ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಇಲ್ಲಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ಕಾಲೇಜುಗಳಲ್ಲಿ ವಾಣಿಜ್ಯ ಮತ್ತು ವಿಜ್ಞಾನ ಕೋರ್ಸುಗಳಿಗೆ ಪ್ರವೇಶ ಪಡೆಯಲು ಅರ್ಹ ಆಸಕ್ತಿಯುಳ್ಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೋರ್ಸ್ ಹೆಸರು | ವಾಣಿಜ್ಯ ಮತ್ತು ವಿಜ್ಞಾನ |
ಯಾವ ಕಾಲೇಜುಗಳಲ್ಲಿ ಮೀಸಲಾತಿ? | ಕಲಬುರಗಿಯ ಹಲವು ಕಾಲೇಜುಗಳು |
ಅರ್ಜಿ ಸಲ್ಲಿಸುವ ವಿಧಾನ | ಕಾಲೇಜುಗಳಲ್ಲೇ ಅರ್ಜಿ ಪಡೆಯಬೇಕು |
ವೆಬ್ಸೈಟ್ ವಿಳಾಸ | https://dom.karnataka.gov.xn--in-bvhzbav6dza8fzbya2ddb/ |
ಯಾವ ಕಾಲೇಜುಗಳಲ್ಲಿ ಮೀಸಲಾತಿ?
ಚಿತ್ತಾಪುರ ತಾಲೂಕಿನ ದಂಡೋತಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ವಾಣಿಜ್ಯ ಮತ್ತು ವಿಜ್ಞಾನ ಕೋರ್ಸ್‍ಗಳಿಗೆ, ಕಲಬುರಗಿ ತಾಲೂಕಿನ ಸಾವಳಗಿ (ಬಿ) ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ವಿಜ್ಞಾನ ಕೋರ್ಸ್ ಹಾಗೂ ಕಲಬುರಗಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ಸಿ.ಬಿ.ಎಸ್.ಸಿ) ಯಲ್ಲಿ ವಿಜ್ಞಾನ ಕೋರ್ಸ್‍ಗಳಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಆಸಕ್ತಿಯುಳ್ಳ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಯಾ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ವಸತಿ ಕಾಲೇಜುಗಳಲ್ಲಿ ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು 2023ರ ಮೇ 25ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: Free Education In Kalaburagi: ವಿದ್ಯಾರ್ಥಿಗಳೇ ಗಮನಿಸಿ, ಉಚಿತ ಶಿಕ್ಷಣ ಪಡೆಯಲು ಈಗಲೇ ಇಲ್ಲಿ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ. ಅಥವಾ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ-9742305668 ಗಳಿಗೆ ಹಾಗೂ ಇಲಾಖೆಯ ವೆಬ್ಸೈಟ್ ಸಂಪರ್ಕಿಸಲು ಕೋರಲಾಗಿದೆ.
ಇದನ್ನೂ ಓದಿ: Kalaburagi News: ಕಿವುಡು ಮಕ್ಕಳ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ, ಹೀಗೆ ಅಪ್ಲೈ ಮಾಡಿ
ದೂರವಾಣಿ ಸಂಖ್ಯೆ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08472-247260, ಸಹಾಯವಾಣಿ ಸಂಖ್ಯೆ 8277799990, ದಂಡೋತಿ-9972564776, ಸಾವಳಗಿ (ಬಿ)-8904564776 ಹಾಗೂ ಈ ಸಂಖ್ಯೆಯನ್ನು ಸಹ ಸಂಪರ್ಕಿಸಬಹುದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ