• Home
 • »
 • News
 • »
 • kalburgi
 • »
 • Kalaburagi: ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 4 ಸಾವಿರ ಸಿಗುತ್ತೆ!

Kalaburagi: ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 4 ಸಾವಿರ ಸಿಗುತ್ತೆ!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ತರಬೇತಿ 4 ವರ್ಷ ಅವಧಿಯವರೆಗೆ ನಡೆಯಲ್ಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಲಾ ಮಾಸಿಕ 4,000 ರೂ.ಗಳ ತರಬೇತಿ ಭತ್ಯೆ ನಿಗದಿ ಮಾಡಲಾಗಿದೆ‌.

 • News18 Kannada
 • Last Updated :
 • Gulbarga, India
 • Share this:

  ಕಲಬುರಗಿ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಸರ್ಕಾರ ಬಂಪರ್ ಆಫರ್ ನೀಡಿದೆ. ಕಾನೂನು ಪದವಿ ಪಡೆದವರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 2022-23ನೇ ಸಾಲಿನಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಹ್ವಾನಿಸಲಾದ ಅರ್ಜಿಯನ್ನು ಕಾನೂನು ಪದವಿ (Law Degree) ಪಡೆದ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲಬುರಗಿ (Kalaburagi News) ಜಿಲ್ಲಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


  ಯಾರೆಲ್ಲ ಅರ್ಜಿ ಸಲ್ಲಿಸಬಹುದು?
  ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಜನಾಂಗಕ್ಕೆ ಸೇರಿದ ಅರ್ಹ ಕಾನೂನು ಪದವಿ ಪಡೆದ ಅಭ್ಯರ್ಥಿಗಳು ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.


  ಈ ಹಿಂದೆ ಆಯ್ಕೆಯಾದ 14 ಅಭ್ಯರ್ಥಿಗಳ ತರಬೇತಿ ಅವಧಿಯು 2022ರ ಅಕ್ಟೋಬರ್ 31 ಮುಕ್ತಾಯಗೊಳ್ಳಲಿದೆ. ಆದ್ದರಿಂದ ಖಾಲಿ 14 ಸ್ಥಾನಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


  ಎಷ್ಟು ಸ್ಥಾನಕ್ಕೆ ಅರ್ಜಿ ಸಲ್ಲಿಸಬಹುದು?
  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಈ ಹಿಂದೆ ಆಯ್ಕೆಯಾದ 14 ಅಭ್ಯರ್ಥಿಗಳ ತರಬೇತಿ ಅವಧಿಯು 2022ರ ಅಕ್ಟೋಬರ್ 31 ರಂದು ಮುಕ್ತಾಯಗೊಳ್ಳಲಿದೆ. ಈ ಹಿನ್ನಲೆ ಖಾಲಿಯಾದ 14 ಸ್ಥಾನಗಳಿಗೆ ಮಾತ್ರ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಈ ನಿಟ್ಟಿನಲ್ಲಿ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ.


  ಇದನ್ನೂ ಓದಿ: Rotti Jatre: ರೊಟ್ಟಿ ಜಾತ್ರೆ! 24 ಗಂಟೆ ಎಷ್ಟು​ ಬೇಕೋ ಅಷ್ಟು ರೊಟ್ಟಿ ಸವಿಯಿರಿ!


  ಏನೆಲ್ಲಾ ಅರ್ಹತೆಗಳನ್ನು ಒಳಗೊಂಡಿರಬೇಕು?
  ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಅಭ್ಯರ್ಥಿಗಳು ಇದನ್ನು ಅವಶ್ಯಕವಾಗಿ ಪಾಲಿಸಬೇಕು. 3 ವರ್ಷದೊಳಗೆ ಅಭ್ಯರ್ಥಿಗಳು ವಕೀಲ ವೃತ್ತಿ ಕೈಗೊಳ್ಳಲು ನಿಗದಿಪಡಿಸಿದ ಕಾನೂನು ಪದವಿ ಮುಗಿಸಿರಬೇಕು. ತರಬೇತಿ 4 ವರ್ಷ ಅವಧಿಯವರೆಗೆ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಲಾ ಮಾಸಿಕ 4,000 ರೂ.ಗಳ ತರಬೇತಿ ಭತ್ಯೆ ನಿಗದಿ ಮಾಡಲಾಗಿದೆ‌.


  ಇದನ್ನೂ ಓದಿ: Kalaburagi: ಈ ಡಾಕ್ಟರ್ ಫೀಸ್ 10 ರೂಪಾಯಿ ಮಾತ್ರ!


  ತಡಮಾಡದೆ ಅರ್ಹ ಅಭ್ಯರ್ಥಿಗಳು ಅಕ್ಟೊಬರ್ 31ರ ಒಳಗಾಗಿ ಅರ್ಜಿ ಸಲ್ಲಿಸಿ ಸರ್ಕಾರ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲಬುರಗಿ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.


  ವರದಿ: ಶ್ರೀಕಾಂತ ಬಿರಾಳ, ಕಲಬುರಗಿ

  Published by:ಗುರುಗಣೇಶ ಡಬ್ಗುಳಿ
  First published: