• Home
  • »
  • News
  • »
  • kalburgi
  • »
  • Free Sewing Machine: ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ, ಈಗಲೇ ಹೀಗೆ ಅಪ್ಲೈ ಮಾಡಿ

Free Sewing Machine: ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನ, ಈಗಲೇ ಹೀಗೆ ಅಪ್ಲೈ ಮಾಡಿ

ಹೊಲಿಗೆ ಯಂತ್ರ (ಸಾಂದರ್ಭಿಕ ಚಿತ್ರ)

ಹೊಲಿಗೆ ಯಂತ್ರ (ಸಾಂದರ್ಭಿಕ ಚಿತ್ರ)

ಅರ್ಹ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ 2023ರ ಫೆಬ್ರವರಿ 20 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

  • Share this:

    ಕಲಬುರಗಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ವಿತರಣೆ (Free Sewing Machine) ಯೋಜನೆಯಡಿ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು (Seva Sindhu)  ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.


    ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ-ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿದ ಸಮುದಾಯಗಳಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ.ಗಳು ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳ ಒಳಗಿರಬೇಕು.


    ಹೀಗಿರಬೇಕು ವಯೋಮಿತಿ
    ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಒಬ್ಬ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು.




    ಇದನ್ನೂ ಓದಿ: Shiva Temple: ಎಲ್ಲೆಡೆ ಬರಗಾಲ ಬಂದ್ರೂ ಇಲ್ಲಿ ಮಾತ್ರ ನೀರು ಬತ್ತಲ್ಲ! ಶಿವಲಿಂಗದ ಅಡಿಯಿಂದಲೇ ಒಸರುತ್ತಂತೆ ಜೀವಜಲ!


    ಅರ್ಹ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ 2023ರ ಫೆಬ್ರವರಿ 20 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


    ಇದನ್ನೂ ಓದಿ: Kalaburgi: ಯೂಟ್ಯೂಬ್ ನೋಡಿ ಯೋಗ ಕಲಿತಳು ಈ ಪುಟಾಣಿ!


    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
    ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್‍ನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ, ನಿಗಮದ ಸಹಾಯವಾಣಿ ಸಂಖ್ಯೆ: 080-22374832, 805077004 & 6, 7090400100/ 7090400900 ಅಥವಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು, ಕಚೇರಿ ದೂರವಾಣಿ ಸಂಖ್ಯೆ: 08472-278635ಗೆ ಸಂಪರ್ಕಿಸಲು ಕೋರಲಾಗಿದೆ.

    Published by:ಗುರುಗಣೇಶ ಡಬ್ಗುಳಿ
    First published: