ಕಲಬುರಗಿ: ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವೊಂದು ಇಲ್ಲಿದೆ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯು ಸುವರ್ಣಾವಕಾಶ ಒಂದು ಕಲ್ಪಿಸಿಕೊಟ್ಟಿದೆ. ಡಿಪ್ಲೊಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಸ್ಟೇಡಿಯಂ ಹತ್ತಿರಯಿರುವ ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ನಡೆಸಲಾಗುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.) ಯಲ್ಲಿ 2023-24ನೇ ಸಾಲಿನಲ್ಲಿ ಡಿಪ್ಲೊಮಾ ಇನ್ ಟೂಲ್ ಆಯಂಡ್ ಡೈ ಮೇಕಿಂಗ್ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಈ ಕುರಿತು ಕಲಬುರಗಿ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಅಧಿಕೃತ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Yellow Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಏನೆಲ್ಲ ಸೌಲಭ್ಯಗಳು ದೊರೆಯಲಿವೆ?
ಈ ಕೋರ್ಸಿನ ಅವಧಿಯು 4 ವರ್ಷ ಇದ್ದು, ಇದರಲ್ಲಿ 3 ವರ್ಷದ ಬೋಧನಾ ತರಬೇತಿ ಹಾಗೂ 1 ವರ್ಷದ ಕಡ್ಡಾಯ ವೇತನ ಸಹಿತ ಕೈಗಾರಿಕಾ ತರಬೇತಿ ಒಳಗೊಂಡಿರುತ್ತದೆ. ಎಐಸಿಟಿಇಯಿಂದ ಅನುಮೋದನೆಗೊಂಡಿದೆ.
ಇದನ್ನೂ ಓದಿ: Free Hostel: ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ಸೌಲಭ್ಯ, ಈಗಲೇ ಹೀಗೆ ಅರ್ಜಿ ಸಲ್ಲಿಸಿ
ಕೆ.ಜಿ.ಟಿ.ಟಿ.ಐ. ಈ ಸಂಸ್ಥೆಯು ಸುಸಜ್ಜಿತ ಮೂಲಸೌಕರ್ಯಗಳು, ಆಧುನಿಕ ಯಂತ್ರೋಪಕರಣಗಳನ್ನು ಹೊಂದಿದ್ದು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಹಾಸ್ಟೆಲ್ ಸೌಲಭ್ಯ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಆಸಕ್ತ ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8884886172, 9902345676 ಹಾಗೂ 9535460505 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ