ಕಲಬುರಗಿ: ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಕಲಬುರಗಿ ಬಾಕಿ ವೃಂದದಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರರು ಗ್ರೇಡ್-3 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ (Jobs In Kalaburagi) ಮಾಡಲು ಏಪ್ರಿಲ್ 16 ಕೊನೆಯ ದಿನವಾಗಿದೆ.
ಹುದ್ದೆಯ ಹೆಸರು | ಶೀಘ್ರ ಲಿಪಿಗಾರರು ಗ್ರೇಡ್-3 ಹುದ್ದೆಗಳ |
ವೇತನ ಶ್ರೇಣಿ | 27,650 ವೇತನ ಶ್ರೇಣಿ |
ಕೊನೆಯ ದಿನಾಂಕ | ಏಪ್ರಿಲ್ 16 |
ವಯೋಮಿತಿ | 18 |
ಹುದ್ದೆಗಳ ಸಂಖ್ಯೆ | 3 |
ಈ ನಿಯಮಗಳಿವೆ
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಈ ನಿಯಮ ಅನ್ವಯ ಮಾಡಲಾಗಿದೆ. ನಿಗದಿ ಮಾಡಿರುವ ಕೊನೆಯ ದಿನಾಂಕದಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕಿದೆ. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಕ್ರೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತ ಹೊಂದಿರಬೇಕಿದೆ.
ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ್ ಗ್ರೇಡ್) ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸೀನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯವನ್ನು ಐಚ್ಛಿಕ ವಿಷಯವಾಗಿ ಅಭ್ಯಾಸ ಮಾಡಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿದೆ.
ಲಿಪ್ಯಂತರ ಪರೀಕ್ಷೆ ಇರುತ್ತೆ
ಅರ್ಜಿ ಸಲ್ಲಿಕೆ ಮಾಡಿ ಅಭ್ಯರ್ಥಿಗಳಿಗೆ ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿಯಲ್ ಮತ್ತು ಇತರೆ ಹುದ್ದೆಗಳು) (ನೇಮಕಾತಿ) ನಿಯಮಗಳು 1982 ಮತ್ತು (ತಿದ್ದುಪಡಿ) ನಿಯಮಗಳು 2007ರ ಅನ್ವಯ ಅಭ್ಯರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತ 5 ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಗಣಕಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುತ್ತದೆ.
ಇದನ್ನೂ ಓದಿ: Kalaburagi: ಕಲಬುರಗಿಯಲ್ಲಿ 4 ಹೊಸ ಬಸ್ ನಿಲ್ದಾಣ, 6 ಸಾವಿರ ಹೊಸ ಬಸ್ ಖರೀದಿ
ವಯೋಮಿತಿ ವಿವರಗಳು ಹೀಗಿವೆ
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಮಾಡುವ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35, 2ಎ/ 2ಬಿ/ 3ಎ/ 3ಬಿಗೆ 38 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳನ್ನು ನಿಗದಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿ ಇರುವವರಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಎಸ್‌ಬಿಐ ಬ್ಯಾಂಕ್‌ನ ಎಸ್. ಐ. ಐ. ಕಲೆಕ್ಟ್ ಮೂಲಕ ಶುಲ್ಕವನ್ನು ಪಾವತಿ ಮಾಡಬೇಕು. ಶುಲ್ಕ ಪಾವತಿ ಮಾಡದ ಅರ್ಜಿಗಳನ್ನು ತಿರಸ್ಕಾರ ಮಾಡಲಾಗುತ್ತದೆ.
ಇದನ್ನೂ ಓದಿ: Kalaburagi: ಕಲಬುರಗಿಯಲ್ಲಿ ಯಾರೂ ಅನಾಥರಲ್ಲ, ಕಾರಣ ಈ ಮಹಿಳೆಯರು!
ನೇಮಕಾತಿ ಅಧಿಸೂಚನೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ದಿನಾಂಕ 7/3/2012ರ ಅಧಿಸೂಚನೆಯಲ್ಲಿ ಸೂಚನೆ ನೀಡಲಾಗಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಪರಿವೀಕ್ಷಣಾ ಅವಧಿ ಪೂರೈಸುವುದರ ಒಳಗಾಗಿ ಶೇಕಡಾ 50 ರಂತೆ ಅಂಕಗಳನ್ನು ಪಡೆದು ಉತ್ತೀರ್ಣವಾಗಿರಬೇಕಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ