• Home
  • »
  • News
  • »
  • kalburgi
  • »
  • Kalaburagi: ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

Kalaburagi: ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯು ಒಂದು ಬ್ಯಾಚ್‌ನಲ್ಲಿ 25 ರೈತರಿಗೆ ತರಬೇತಿ ನೀಡಲಾಗುತ್ತದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು

  • News18 Kannada
  • Last Updated :
  • Gulbarga, India
  • Share this:

    ಕಲಬುರಗಿ: ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿ ಹೊಂದಿದ ರೈತರಿಗಾಗಿ ಸರ್ಕಾರದಿಂದ ರೈತರಿಗಾಗಿ ಉಚಿತ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು ರೈತರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಅಧಿಕಾರಿಗಳು ಕೋರಿದ್ದಾರೆ. ಇಲ್ಲಿನ ಸೇಡಂ ರಸ್ತೆಯಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕಲಬುರಗಿ (Kalaburagi News) ಯಾದಗಿರಿ ಹಾಗೂ ರಾಯಚೂರ ಜಿಲ್ಲೆಯ ರೈತರಿಗಾಗಿ (Raichur Farmers) ನವೆಂಬರ್ 3ಮತ್ತು 4ರಂದು ಎರಡು ದಿನಗಳ ಕಾಲ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತರಬೇತಿ ಕೇಂದ್ರದ (Training To Farmers) ಉಪ ನಿರ್ದೇಶಕರು ಮಾಹಿತಿ ನೀಡಿದ್ದಾರೆ.


    ತರಬೇತಿಯ ರೂಲ್ಸ್
    ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯು ಒಂದು ಬ್ಯಾಚ್‌ನಲ್ಲಿ 25 ರೈತರಿಗೆ ತರಬೇತಿ ನೀಡಲಾಗುತ್ತದೆ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಆಯಾ ದಿನಗಳಂದು ಬೆಳಿಗ್ಗೆ 10 ಗಂಟೆಯ ಒಳಗೆ ಹಾಜರಿರಬೇಕು. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದವರಿಗೆ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.


    ಇದನ್ನೂ ಓದಿ: Rotti Jatre: ರೊಟ್ಟಿ ಜಾತ್ರೆ! 24 ಗಂಟೆ ಎಷ್ಟು​ ಬೇಕೋ ಅಷ್ಟು ರೊಟ್ಟಿ ಸವಿಯಿರಿ!


    ಯಾವ ರೈತರು ಅರ್ಜಿ ಸಲ್ಲಿಸಬಹುದು?
    ಪಶುಪಾಲನಾ ಮತ್ತು ಪಶುವೈದ್ಯಕೀಯ ಕೇಂದ್ರದಿಂದ ಹಮ್ಮಿಕೊಳ್ಳಲಾದ ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕೇವಲ ಕಲಬುರಗಿ ‌ಭಾಗದ ಕಲಬುರಗಿ, ಯಾದಗಿರಿ ಹಾಗೂ ರಾಯಚೂರ ಜಿಲ್ಲೆಯ ರೈತರಿಗೆ ಮಾತ್ರ ಅನ್ವಯಿಸುತ್ತದೆ. ಈ ಭಾಗದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


    ಇದನ್ನೂ ಓದಿ: Kalaburagi: ಈ ಪುರಾತನ ದೇಗುಲ ದರ್ಶನದಿಂದಲೇ ಶುಭವಾಗುತ್ತಂತೆ!


    ಹೀಗೆ ಅರ್ಜಿ ಸಲ್ಲಿಸಿ
    ರೈತರು ಅರ್ಜಿಯ ಜೊತೆಗೆ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಆಧಾರ ಕಾರ್ಡ್ ಪ್ರತಿ ಲಗತ್ತಿಸುವುದು ಕಡ್ಡಾಯ. ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472 220576ಗೆ ಸಂಪರ್ಕಿಸಬಹುದಾಗಿ ಉಪನಿರ್ದೇಶಕರು ತಿಳಿಸಿದ್ದಾರೆ.

    Published by:ಗುರುಗಣೇಶ ಡಬ್ಗುಳಿ
    First published: