Jobs In Kodagu: ಕೊಡಗಿನಲ್ಲಿ ಉದ್ಯೋಗಾವಕಾಶ; ‌ತಡಮಾಡದೇ ಇಲ್ಲಿ ಅಪ್ಲೈ ಮಾಡಿ

ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೇ ಯಾವುದೇ ರೂಪದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ. ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ ನೋಡಿ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 9 ಅಂಗನವಾಡಿ ಸಹಾಯಕಿಯರು (Anganwadi Helpers) ಸೋಮವಾರಪೇಟೆ ತಾಲ್ಲೂಕಿನ 16 ಅಂಗನವಾಡಿ ಸಹಾಯಕಿಯರು ಮತ್ತು ಪೊನ್ನಂಪೇಟೆ ತಾಲ್ಲೂಕಿನ 9 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 25 ಅಂಗನವಾಡಿ ಸಹಾಯಕಿಯರ ಹುದ್ದೆಯನ್ನು ಆನ್‍ಲೈನ್ ಮೂಲಕ ಭರ್ತಿ ಮಾಡಲು (Jobs In Kodagu) ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಈ ಕೆಲಸಗಳ ವಿವರಗಳೇನು? ಸಂಬಳ ಎಷ್ಟಿರುತ್ತೆ? ಏನೆಲ್ಲ ಜವಾಬ್ದಾರಿಗಳಿರುತ್ತೆ? ಎಲ್ಲ ವಿವರ ಇಲ್ಲಿದೆ ನೋಡಿ.































    ಹುದ್ದೆಯ ಹೆಸರುಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
    ಸ್ಥಳಮಡಿಕೇರಿಯ ಸೋಮವಾರಪೇಟೆ ಮತ್ತು ಪೊನ್ನಂಪೇಟೆ
    ಕೊನೆಯ ದಿನಾಂಕಸೆಪ್ಟೆಂಬರ್ 15
    ಅರ್ಹತೆಕಾರ್ಯಕರ್ತೆ ಹುದ್ದೆಗ 10ನೇ ತರಗತಿ, ಸಹಾಯಕಿ ಹುದ್ದೆಗೆ 4ರಿಂದ 9ನೇ ತರಗತಿ
    ವಯೋಮಿತಿ18 ರಿಂದ 35 ವರ್ಷದ ಸ್ಥಳೀಯರು
    ಹೇಗೆ ಅರ್ಜಿ ಸಲ್ಲಿಸಬೇಕು?ಇಲ್ಲಿ ಕ್ಲಿಕ್ ಮಾಡಿ
    ಸಂಪರ್ಕ ಸಂಖ್ಯೆಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ- 08272-298379

    ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕಾರ್ಯಕರ್ತೆ ಹುದ್ದೆಗೆ 10ನೇ ತರಗತಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 4 ರಿಂದ 9 ನೇ ತರಗತಿಯೊಳಗೆ ವ್ಯಾಸಂಗ ಮಾಡಿರಬೇಕು.

    ಏನೆಲ್ಲ ನಿಯಮಗಳಿವೆ?
    18 ರಿಂದ 35 ವರ್ಷ ವಯೋಮಿತಿಯೊಳಗಿರುವ ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ.

    ಇದನ್ನೂ ಓದಿ: Kodagu Recipe: ಕೊಡವರ ಆರೋಗ್ಯದ ಗುಟ್ಟು ಆಟಿ ಪಾಯಸ! ಇಲ್ಲಿದೆ ನೋಡಿ ರೆಸಿಪಿ

    ಹೇಗೆ ಅರ್ಜಿ ಸಲ್ಲಿಸಬೇಕು?
    ಆದರೆ ಸಹಾಯಕಿ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವೆಬ್‍ಸೈಟ್​ನಲ್ಲಿ ಅರ್ಜಿಯನ್ನು ಭರ್ತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

    ಆನ್‍ಲೈನ್‍ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕಾಗಿದ್ದು, ಇತರೇ ಯಾವುದೇ ರೂಪದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ.

    ಇದನ್ನೂ ಓದಿ: Abbi Falls Kodagu: ಅಬ್ಬಬ್ಬಾ 'ಅಬ್ಬಿ'! ಮಿಸ್ ಮಾಡ್ದೇ ಈ ಅದ್ಭುತ ವಿಡಿಯೋ ನೋಡಿ

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆಗಳು ಇಲ್ಲಿವೆ
    ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ- 08272-298379, ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ-7406296645, ಸೋಮವಾರಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08276-282281, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ-08274-249010 ನ್ನು ದೂರವಾಣಿ ಸಂಖ್ಯೆಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್ ಅವರು ತಿಳಿಸಿದ್ದಾರೆ.

    ವರದಿ: ಸ್ಟ್ಯಾನ್ಲಿ.ಡಿ, ಕೊಡಗು
    Published by:guruganesh bhat
    First published: