ಸ್ಟಾರ್ ಫ್ರೂಟ್‌ ಸೇವನೆಯಿಂದ ಸಿಗುವ ಅತ್ಯುತ್ತಮ ಆರೋಗ್ಯಕರ ಪ್ರಯೋಜನಗಳು

ಸ್ಟಾರ್ ಹಣ್ಣು ರಕ್ತದೊತ್ತಡವನ್ನು ನಿಯಂತ್ರಿಸುವ ಸೋಡಿಯಂ ಮತ್ತು ಪೊಟ್ಯಾಸಿಯಮ್ನಂತಹ ಪ್ರಮುಖ ಖನಿಜಗಳಿಂದ ಸಮೃದ್ಧವಾಗಿದೆ. ಇದು ಕ್ಯಾಲ್ಸಿಯಂ ಅನ್ನು ಸಹ ಹೊಂದಿದ್ದು, ಹೃದಯಕ್ಕೆ ತುಂಬಾ ಪ್ರಯೋಜನಕಾರಿ.

starfruit

starfruit

 • Share this:
  ಕ್ಯಾರಂಬೋಲಾ ಅಥಾವಾ ಸ್ಟಾರ್ ಫ್ರೂಟ್ ಎಂಬ ಹುಳಿಮಿಶ್ರಿತ ಸಿಹಿ ಹಣ್ಣು. ಈ ಹಣ್ಣಿನಲ್ಲಿ ಅನೇಕ ಪೋಷಕಾಂಶಗಳಿವೆ. ಇದು ದೇಹವನ್ನು ದೀರ್ಘಕಾಲದವರೆಗೆ ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಸ್ಟಾರ್ ಹಣ್ಣು ಅನೇಕ ಔಷಧೀಯ ಗುಣಗಳನ್ನು ಹೊಂದಿದ್ದು, ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ. ಈ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, ಹಾಗೆಯೇ ಹೆಚ್ಚಿನ ಫೈಬರ್ ಅಂಶ ಕಂಡು ಬರುತ್ತವೆ. ಅದೇ ರೀತಿ ವಿಟಮಿನ್ ಬಿ, ವಿಟಮಿನ್ ಸಿ, ಸೋಡಿಯಂ, ಪೊಟ್ಯಾಸಿಯಮ್, ಕಬ್ಬಿಣ ಮತ್ತು ಅನೇಕ ಪ್ರಮುಖ ಉತ್ಕರ್ಷಣ ನಿರೋಧಕಗಳಿಂದ ಈ ಹಣ್ಣು ಸಮೃದ್ಧವಾಗಿದೆ. ಈ ಹಣ್ಣಿನ ಸೇವನೆಯಿಂದ ಸಿಗುವ ಕೆಲ ಪ್ರಯೋಜನಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ.

  ಉರಿಯೂತ ಕಡಿಮೆ ಮಾಡುತ್ತದೆ: ಸ್ಟಾರ್​ ಫ್ರೂಟ್​ ವಿಟಮಿನ್ ಸಿ ಯ ಉತ್ತಮ ಮೂಲವಾಗಿದೆ. ವಿಟಮಿನ್ ಸಿ ದೇಹದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಹಾಗೆಯೇ ಇದು ಚರ್ಮದ ಉರಿಯೂತವನ್ನು ಕಡಿಮೆ ಮಾಡಲು ಸಹಾಯಕ. ಇದಲ್ಲದೆ, ಜ್ವರ ಮತ್ತು ನೆಗಡಿಯ ಸಮಸ್ಯೆಯನ್ನು ದೂರ ಮಾಡುತ್ತದೆ.

  ಹೃದಯ ಆರೊಗ್ಯ ಹೆಚ್ಚಿಸುತ್ತೆ: ಸ್ಟಾರ್ ಹಣ್ಣು ರಕ್ತದೊತ್ತಡವನ್ನು ನಿಯಂತ್ರಿಸುವ ಸೋಡಿಯಂ ಮತ್ತು ಪೊಟ್ಯಾಸಿಯಮ್ನಂತಹ ಪ್ರಮುಖ ಖನಿಜಗಳಿಂದ ಸಮೃದ್ಧವಾಗಿದೆ. ಇದು ಕ್ಯಾಲ್ಸಿಯಂ ಅನ್ನು ಸಹ ಹೊಂದಿದ್ದು, ಹೃದಯಕ್ಕೆ ತುಂಬಾ ಪ್ರಯೋಜನಕಾರಿ. ದೇಹದಲ್ಲಿ ಸಮತೋಲಿತ ಕ್ಯಾಲ್ಸಿಯಂ ಪಾರ್ಶ್ವವಾಯು ಮತ್ತು ಹೃದಯ ಸ್ತಂಭನದಂತಹ ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

  ಮಧುಮೇಹಕ್ಕೆ ಪ್ರಯೋಜನಕಾರಿ: ಇದು ನಿಮ್ಮ ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ. ಫೈಬರ್ ಭರಿತ ಆಹಾರವನ್ನು ಸೇವಿಸುವುದರಿಂದ ಮಧುಮೇಹವನ್ನು ತಡೆಯಬಹುದು. ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಈ ಹಣ್ಣು ಉತ್ತಮ.

  ಜೀರ್ಣಕ್ರಿಯೆ ಸುಧಾರಿಸುತ್ತದೆ: ಈ ಹಣ್ಣಿನಲ್ಲಿ ಬಹಳಷ್ಟು ಫೈಬರ್ ಇದ್ದು, ಇದು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ನಿಮ್ಮ ಮಲಬದ್ಧತೆಯ ಸಮಸ್ಯೆಯನ್ನು ಪರಿಹರಿಸಲು ಇದು ಸಹಕಾರಿಯಾಗಿದೆ. ಹಾಗೆಯೇ ಮಲಬದ್ಧತೆಯಿಂದ ಬಳಲುತ್ತಿರುವವರು ಇದರ ಸೇವನೆಯಿಂದ ಪರಿಹಾರ ಪಡೆಯಬಹುದು.

  ಚರ್ಮದ ಆರೋಗ್ಯ: ವಿಟಮಿನ್ ಬಿ ಮತ್ತು ಸಿ ಚರ್ಮಕ್ಕೆ ಹೊಳಪನ್ನು ತರುತ್ತದೆ. ಸ್ಟಾರ್ ಫ್ರೂಟ್​ನಲ್ಲಿ ಉತ್ಕರ್ಷಣ ನಿರೋಧಕಗಳ ಸಮೃದ್ಧವಾಗಿದ್ದು, ಇದು ಇನ್ನಷ್ಟು ಉತ್ತಮಗೊಳಿಸುತ್ತದೆ. ಹಾಗೆಯೇ ಇದು ಕೂದಲು ಮತ್ತು ಚರ್ಮಕ್ಕೆ ತುಂಬಾ ಒಳ್ಳೆಯದು.
  Published by:zahir
  First published: