ಮಡಿಕೇರಿಯಲ್ಲಿ ಸೇನಾ ನೇಮಕಾತಿ: ಇಂದೇ ಹೆಸರು ನೋಂದಣಿ ಮಾಡಿಕೊಳ್ಳಿ

ಎಸ್. ಎಸ್. ಎಲ್. ಸಿ, ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು.

news18-kannada
Updated:September 19, 2019, 8:24 AM IST
ಮಡಿಕೇರಿಯಲ್ಲಿ ಸೇನಾ ನೇಮಕಾತಿ: ಇಂದೇ ಹೆಸರು ನೋಂದಣಿ ಮಾಡಿಕೊಳ್ಳಿ
Jobs
  • Share this:
ಭಾರತೀಯ ಸೇನಾಪಡೆಯ ವಿವಿಧ ಹುದ್ದೆಗಳ ನೇಮಕಾತಿ ಅಕ್ಟೋಬರ್ 13 ರಿಂದ 18ರ ತನಕ ಮಡಿಕೇರಿಯಲ್ಲಿ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 29ರೊಳಗೆ ತಮ್ಮ ಹೆಸರನ್ನು ಸೇನೆಯ ಅಧಿಕೃತ ವೆಬ್​ಸೈಟ್ www.joinindianarmy.nic.in  ನೋಂದಣಿ ಮಾಡಿಸಬೇಕು. ಈ ಭರ್ತಿ ಪ್ರಕ್ರಿಯೆಯಲ್ಲಿ ಭಾರತೀಯ ಸೇನಾ ಪಡೆ ಸೋಲ್ಜರ್ ಜನರಲ್ ಡ್ಯೂಟಿ, ಟಿಕ್ನಿಕಲ್, ಕ್ಲರಿಕಲ್, ಎಸ್. ಕೆ. ಟಿ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ನೇಮಕಾತಿಯ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆ:
ಎಸ್. ಎಸ್. ಎಲ್. ಸಿ, ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:
ಇಲ್ಲಿ ಕೆಲ ಹುದ್ದೆಗಳಿಗೆ ವಯೋಮಿತಿ ನಿಗದಿಪಡಿಸಲಾಗಿದ್ದು, ಹೀಗಾಗಿ 17 ರಿಂದ 21 ವರ್ಷ ಮತ್ತು 17 ರಿಂದ 23 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಕೊನೆಗೂ ಮೌನ ಮುರಿದ ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದ ಆರೋಪಿ ನಟ ಸೂರಜ್

ನೇಮಕಾತಿ ನಡೆಯುವ ಸ್ಥಳ:ಕೊಡಗು ಜಿಲ್ಲೆಯ ಮಡಿಕೇರಿ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ನೇಮಕಾತಿಯನ್ನು ಆಯೋಜಿಸಲಾಗುತ್ತದೆ.

ಇದನ್ನೂ ಓದಿ: ನಿಮ್ಮ ಮೊಬೈಲ್ ಕಳುವಾದರೆ ಏನು ಮಾಡಬೇಕು: ಈಗ ಫೋನ್​ಗಳನ್ನು ಪತ್ತೆ ಹಚ್ಚುವುದು ಮತ್ತಷ್ಟು ಸುಲಭ

ವಿಶೇಷ ಸೂಚನೆ:
ನೇಮಕಾತಿಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು www.joinindianarmy.nic.in ವೆಬ್‌ಸೈಟ್‌ನಲ್ಲಿ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳುವುದು ಕಡ್ಡಾಯ. ಹೆಸರು ನೊಂದಾಯಿಸದೆ ನೇಮಕಾತಿಗೆ ಬರುವ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿ:
ಹೆಸರು ನೋಂದಣಿ ಮಾಡಿಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

First published:September 19, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ