ಸ್ತನ ಕ್ಯಾನ್ಸರ್ ಈ ಜಗತ್ತಿನಲ್ಲಿ ಇತ್ತೀಚೆಗೆ ಹೆಚ್ಚಾಗಿ ಮಹಿಳೆಯರನ್ನು ಕಾಡುತ್ತಿರುವ ಸಾಮಾನ್ಯ ಕಾಯಿಲೆಯಾಗಿದೆ. ಸ್ತನ ಕ್ಯಾನ್ಸರ್ ಬಗ್ಗೆ ಎಷ್ಟೇ ಮಾಹಿತಿ ನೀಡುತ್ತಿದ್ದರೂ, ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಂತ ಈ ರೋಗದ ಬಗ್ಗೆ ಆನ್ಲೈನ್ನಲ್ಲಿ ಲಭ್ಯವಿರುವ ಮಾಹಿತಿ ಎಲ್ಲವೂ ಸತ್ಯ ಎಂದು ಹೇಳಲೂ ಆಗುವುದಿಲ್ಲ. ಸ್ತನ ಕ್ಯಾನ್ಸರ್ ಬಗ್ಗೆ ಜನರಲ್ಲಿ ಕೆಲವು ತಪ್ಪು ಕಲ್ಪನೆಗಳಿವೆ. ಜೊತೆಗೆ ವದಂತಿಗಳನ್ನು ಹರಡಲಾಗುತ್ತಿದೆ. ಆದ್ದರಿಂದ ಸ್ತನ ಕ್ಯಾನ್ಸರ್ ಮತ್ತು ಅದರ ವಾಸ್ತವತೆಯ ಬಗ್ಗೆ ಅರಿಯಬೇಕಾದದ್ದು ಮುಖ್ಯವಾಗಿದೆ. ಹಾರ್ಮೋನ್, ಜೀವನ ಶೈಲಿ ಮತ್ತು ಪರಿಸರದ ಅಂಶಗಳು ಸ್ತನ ಕ್ಯಾನ್ಸರ್ ಸಾಧ್ಯತೆಯನ್ನು ಹೆಚ್ಚಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಹೀಗಾಗಿ ಮಹಿಳೆಯರು ಸದಾ ಎಚ್ಚರಿಕೆಯಿಂದ ಇರಬೇಕು.
ಸ್ತನ ಕ್ಯಾನ್ಸರ್ನ ಮೊದಲ ಲಕ್ಷಣವೆಂದರೆ, ಸ್ತನ ಪ್ರದೇಶದ ಸುತ್ತಲೂ ಕಾಣಿಸುವ ಗಡ್ಡೆ. ಇದು ಮಹಿಳೆಯರ ಋತುಚಕ್ರಕ್ಕೆ ಸಂಬಂಧಿಸಿಲ್ಲದಿರಬಹುದು. ಹೀಗಾಗಿ ಸ್ತನದಲ್ಲಿ ಗಡ್ಡೆ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ಕೂಡಲೇ ವೈದ್ಯರನ್ನು ಭೇಟಿಯಾಗಬೇಕು.
ಅನುವಂಶೀಯತೆಯಿಂದಲೂ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಇದೆ. ಅಂದರೆ ಕುಟುಂಬದಲ್ಲಿ ಯಾರಿಗಾದರೂ ಗರ್ಭಾಶಯ, ಅಂಡಾಶಯ ಹಾಗೂ ದೊಡ್ಡ ಕರುಳಿನ ಕ್ಯಾನ್ಸರ್ ಬಂದಿದ್ದರೆ, ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಶೇ.5-6ರಷ್ಟು ಜನರು ಅನುವಂಶೀಯತೆಯಿಂದ ಸ್ತನ ಕ್ಯಾನ್ಸರ್ಗೆ ಒಳಗಾಗುತ್ತಾರೆ ಎಂದು ವೈದ್ಯರು ಹೇಳುತ್ತಾರೆ.
ಕಲ್ಯಾಣ ಕರ್ನಾಟಕದಲ್ಲಿ ಭಾರೀ ಪ್ರವಾಹ; ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ಕೇಂದ್ರಕ್ಕೆ ಮನವಿ; ಆರ್.ಅಶೋಕ್
ಸ್ತನ ಕಸಿ ಮಾಡುವುದು ಸ್ತನ ಕ್ಯಾನ್ಸರ್ ಬರುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಸ್ತನ ಕಸಿ ಮಾಡಿಸಿಕೊಂಡವರಲ್ಲಿ ಸ್ತನ ಕ್ಯಾನ್ಸರ್ ಬರುವುದು ಹೆಚ್ಚಾಗಿರುತ್ತದೆ.
ಮಹಿಳೆಯರು ಹೆಚ್ಚಾಗಿ ಹೇರ್ ಡೈ ಮತ್ತು ಮೊಬೈಲ್ ಬಳಸುವುದರಿಂದ ಸ್ತನ ಕ್ಯಾನ್ಸರ್ ಬರುವ ಸಾಧ್ಯತೆ ಇರುತ್ತದೆ. ಆದರೆ ಈ ವಸ್ತುಗಳನ್ನು ಉಪಯೋಗಿಸುವುದರಿಂದ ಸ್ತನ ಕ್ಯಾನ್ಸರ್ ಬರುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ.
ಯುವತಿಯರಿಗೆ ಸ್ತನ ಕ್ಯಾನ್ಸರ್ ಬರುವುದು ಕಡಿಮೆ. ಅಂದರೆ ಸಂಶೋಧನೆಯ ಪ್ರಕಾರ, 40 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ.
ಚಿಕ್ಕ ಎದೆಯುಳ್ಳ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಬರುವುದು ಬಹುತೇಕ ಕಡಿಮೆ. ಆದರೆ ವೈಜ್ಞಾನಿಕ ಪುರಾವೆ ಇಲ್ಲ.
ಮಹಿಳೆಯರು ಬ್ರಾ ಧರಿಸುವುದರಿಂದ ಸ್ತನ ಕ್ಯಾನ್ಸರ್ ಬರುತ್ತದೆ ಎನ್ನಲಾಗುತ್ತದೆ. ಆದರೆ ಬ್ರಾ ಧರಿಸುವುದರಿಂದ ಸ್ತನ ಕ್ಯಾನ್ಸರ್ ಬರುತ್ತದೆ ಎಂಬ ಯಾವ ಅಧ್ಯಯನವೂ ಸಾಬೀತುಪಡಿಸಿಲ್ಲ.
ಪುರುಷರಲ್ಲೂ ಅಪರೂಪಕ್ಕೆ ಸ್ತನ ಕ್ಯಾನ್ಸರ್ ಕಾಣಿಸಿಕೊಳ್ಳುತ್ತದೆ. ಆದರೆ ಹೆಚ್ಚಾಗಿ ಇಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ