BSF ನೇಮಕಾತಿ: ಖಾಲಿ ಇರುವ 317 ಹುದ್ದೆಗಳಿಗೆ ಅರ್ಜಿ ಆಹ್ವಾನ

BSF Recruitment 2020: ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇನ್ನು ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

jobs

jobs

  • Share this:
    ಬಿಎಸ್ಎಫ್ ಎಸ್ಐ (ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಮತ್ತು ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ಗೆ  ಭೇಟಿ ನೀಡಿ ಮಾರ್ಚ್ 16, 2020 ರೊಳಗೆ  ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಓದಿ.

    ಒಟ್ಟು ಖಾಲಿ ಇರುವ ಹುದ್ದೆಗಳು: 317

    ಶೈಕ್ಷಣಿಕ ವಿದ್ಯಾರ್ಹತೆ:

    ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ 10ನೇತರಗತಿ/ಎಸ್ಎಸ್ಎಲ್ಸಿ ಅಥವಾ ತತ್ಸಮಾನ. 12ನೇ ತರಗತಿ/ಇಂಟರ್ಮೀಡಿಯೇಟ್ / ತತ್ಸಮಾನ. ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ /ವಿಶ್ವವಿದ್ಯಾಲಯ ಹೊಂದಿರಬೇಕು.

    ವಯೋಮಿತಿ:

    ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಇನ್ನು ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವೇತನದ ವಿವರ:

    ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ 25,500/-ರಿಂದ 1,12,400/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

    ಆಯ್ಕೆ ಪ್ರಕ್ರಿಯೆ:

    ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ನಡೆಸಿ ಆ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಅರ್ಜಿ ಶುಲ್ಕ:

    -ಎಸ್ಐ ಹುದ್ದೆಗಳಿಗೆ 200/-ರೂ

    -ಎಚ್​ಸಿ ಹಾಗೂ ಸಿಟಿ ಹುದ್ದೆಗಳಿಗೆ 100/-ರೂ

    ಅರ್ಜಿ ಶುಲ್ಕವನ್ನು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಡಿಮ್ಯಾಂಡ್ಡ್ರಾಫ್ಟ್ /ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ.

    ಅರ್ಜಿ ಸಲ್ಲಿಸುವ ವಿಧಾನ:

    ಬಿಎಸ್ಎಫ್ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ http://bsf.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು.ನಂತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕಿರುತ್ತದೆ. ಅರ್ಜಿ ಸಲ್ಲಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ನಮೂದಿಸತಕ್ಕದ್ದು. ಮಾರ್ಚ್ 16, 2020ರೊಳಗೆ ಅರ್ಜಿಯನ್ನು ಸಲ್ಲಿಬೇಕು.

    ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಈ ಲಿಂಕ್​​ ಮಾಡಿ
    First published: