ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯು ವಿದ್ಯಾರ್ಹತೆ ನಿಗದಿ

ಗ್ರಾಮ ಲೆಕ್ಕಿಗ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸಿಬಿಎಸ್ಸಿ ಅಥವಾ ಐಸಿಎಸ್ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

Job

Job

 • Share this:
  ಚಿಕ್ಕಮಗಳೂರು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆನ್​ಲೈನ್​  ಮೂಲಕ ಮಾರ್ಚ್ 20, 2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಆನ್​ಲೈನ್​ ಮೂಲಕವೇ ಕಳುಹಿಸಬೇಕು. ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ.

  ಖಾಲಿ ಇರುವ ಹುದ್ದೆಗಳು: 50

  ವಿದ್ಯಾರ್ಹತೆ:

  ಗ್ರಾಮ ಲೆಕ್ಕಿಗ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಸಿಬಿಎಸ್ಸಿ ಅಥವಾ ಐಸಿಎಸ್ಇ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

  ವಯೋಮಿತಿ:

  ಕನಿಷ್ಠ ವಯೋಮಿತಿ 18. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
  2ಎ, 2ಬಿ, 3ಎ ಮತ್ತು 3ಬಿ ವರ್ಗಕ್ಕೆ ಸೇರಿದವರು ಗರಿಷ್ಠ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

  ವೇತನ ಶ್ರೇಣಿ:

  - ತಿಂಗಳಿಗೆ 21,400 ರೂ ರಿಂದ 42,000 ರೂ ವೇತನವನ್ನು ನಿಗದಿಪಡಿಸಲಾಗಿದೆ.

  ಆಯ್ಕೆ ವಿಧಾನ:

  ಗ್ರಾಮ ಲೆಕ್ಕಿಕ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪಿಯುಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯಾಯ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುತ್ತದೆ.

  ಅರ್ಜಿ ಶುಲ್ಕ:

  ಅಭ್ಯರ್ಥಿಗಳಿಗೆ 300 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು 150 ರೂ. ನಿಗದಿಪಡಸಲಾಗಿದೆ. ಅರ್ಜಿ ಶುಲ್ಕವನ್ನು ಆನ್ಲೈನ್ ಅಥವಾ ಅಂಚೆ ಕಛೇರಿಯ ಮೂಲಕ ಪಾವತಿಬೇಕಿದೆ

  ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:

  ಮಾರ್ಚ್ 24, 2020ರೊಳಗೆ ಪಾವತಿಸಬೇಕಿರುತ್ತದೆ.

  ಅಭ್ಯರ್ಥಿಗಳು ಹುದ್ದೆಯ ಬಗ್ಗೆ ತಿಳಿಯಲು ಈ ಲಿಂಕ್​ ಕ್ಲಿಕ್​ ಮಾಡಿ.

  ಅರ್ಜಿ ಸಲ್ಲಿಸಲು ಈ ಲಿಂಕ್​ ಕ್ಲಿಕ್​ ಮಾಡಿ

  ಇದನ್ನೂ ಓದಿ: ಹೆಸರು ಬದಲಾಯಿಸಿಕೊಂಡ ಸ್ಯಾಂಡಲ್​ವುಡ್ ನಟ!; ಯಾವ ಕಾರಣಕ್ಕೆಗೊತ್ತಾ?
  First published: