• Home
  • »
  • News
  • »
  • lifestyle
  • »
  • Health Tips: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್​ನ್ನು ಕಡಿಮೆ ಮಾಡಿಕೊಳ್ಳಬೇಕೇ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

Health Tips: ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್​ನ್ನು ಕಡಿಮೆ ಮಾಡಿಕೊಳ್ಳಬೇಕೇ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

ನಾವು ದಿನನಿತ್ಯ ಸೇವಿಸುವ ಆಹಾರ ಮತ್ತು ನಾವು ಅನುಸರಿಸುವ ಜೀವನಶೈಲಿಯ ಮೇಲೆ ನಮ್ಮ ಆರೋಗ್ಯವು ಹೇಗಿರುತ್ತದೆ ಎಂದು ನಿರ್ಧಾರವಾಗುತ್ತದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ನಂತಹ ಅಸ್ವಸ್ಥತೆಗಳ ಸಂದರ್ಭಗಳು ಹೃದಯಾಘಾತ ಮತ್ತು ಹೃದಯ ಸ್ತಂಭನಗಳ ಅಪಾಯವನ್ನು ಹೆಚ್ಚಿಸುತ್ತವೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೈಸರ್ಗಿಕವಾಗಿ ಸಹಾಯ ಮಾಡುವ ಕೆಲವು ಆಹಾರಗಳು ಇಲ್ಲಿವೆ ನೋಡಿ.

ಮುಂದೆ ಓದಿ ...
  • Share this:

ನಾವು ದಿನನಿತ್ಯ ಸೇವಿಸುವ ಆಹಾರ (Food) ಮತ್ತು ನಾವು ಅನುಸರಿಸುವ ಜೀವನಶೈಲಿಯ ಮೇಲೆ ನಮ್ಮ ಆರೋಗ್ಯವು (Health) ಹೇಗಿರುತ್ತದೆ ಎಂದು ನಿರ್ಧಾರವಾಗುತ್ತದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ (Cholesterol) ನಂತಹ ಅಸ್ವಸ್ಥತೆಗಳ ಸಂದರ್ಭಗಳು ಹೃದಯಾಘಾತ ಮತ್ತು ಹೃದಯ ಸ್ತಂಭನಗಳ ಅಪಾಯವನ್ನು ಹೆಚ್ಚಿಸುತ್ತವೆ. ಆತಂಕ ಪಡಬಹುದಾದ ಸಂಗತಿಯೆಂದರೆ, ಕಳೆದ ಕೆಲವು ವರ್ಷಗಳಲ್ಲಿ, ಭಾರತವು ಹೃದಯ ಸಂಬಂಧಿ ಕಾಯಿಲೆಗಳು (Cardiovascular disease) ಮತ್ತು ಸಾವುಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ಕಂಡಿದೆ, ಆದ್ದರಿಂದ ರಕ್ತದ (Blood) ಹರಿವಿನ ಮೂಲಕ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸರಿಪಡಿಸುವುದು ಹೆಚ್ಚು ಮುಖ್ಯವಾಗುತ್ತಿದೆ.


ಅಪಧಮನಿಗಳ ಮುಚ್ಚುವಿಕೆಯನ್ನು ನಿಯಂತ್ರಿಸುವ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಎಲ್‌ಡಿಎಲ್ ಮಟ್ಟವನ್ನು ಕಡಿಮೆ ಮಾಡುವ ವಿಷಯಕ್ಕೆ ಬಂದಾಗ ವಿಶ್ವದಾದ್ಯಂತ ತಜ್ಞರು, ಆಹಾರ ಮತ್ತು ಜೀವನಶೈಲಿಯ ಮಾರ್ಪಾಡುಗಳನ್ನು ಮಾಡಿಕೊಳ್ಳಲು ಹೇಳುತ್ತಾರೆ.


ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೈಸರ್ಗಿಕವಾಗಿ ಸಹಾಯ ಮಾಡುವ ಕೆಲವು ಆಹಾರಗಳು ಇಲ್ಲಿವೆ ನೋಡಿ.


1. ಓಟ್ಸ್ ಸೇವಿಸಿರಿ
ನಾಲ್ಕು ವಾರಗಳ ಕಾಲ ಪ್ರತಿದಿನ ಓಟ್ಸ್ ತಿನ್ನುವುದರಿಂದ ನಿಮ್ಮ ಎಲ್‌ಡಿಎಲ್ ಮಟ್ಟವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂದು ನಂಬಲಾಗಿದೆ. ಪ್ರತಿದಿನ 25 ರಿಂದ 35 ಗ್ರಾಂ ಓಟ್ಸ್ ಸೇವನೆಯು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಏಕೆಂದರೆ ಓಟ್ಸ್ ಕರಗುವ ನಾರಿನಂಶದಿಂದ ಸಮೃದ್ಧವಾಗಿದೆ, ಇದು ರಕ್ತಪ್ರವಾಹದಲ್ಲಿ ಕೊಲೆಸ್ಟ್ರಾಲ್ ಹೀರಿಕೊಳ್ಳುವಿಕೆಯನ್ನು ಕಡಿಮೆ ಮಾಡುತ್ತದೆ.


ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಇದು ಅತ್ಯುತ್ತಮ ಆಹಾರವಾಗಿದೆ. ಸ್ಮೂಥಿಗಳು, ಚಿಯಾ ಪುಡ್ಡಿಂಗ್ ಗಳು, ಓಟ್ಸ್ ಪ್ಯಾನ್ ಕೇಕ್ ಗಳು ಮತ್ತು ಓಟ್ ಅನ್ನು ಆಹಾರದಲ್ಲೂ ಭಾಗವಾಗಿಸುವ ಮೂಲಕ ನೀವು ಎಲ್‌ಡಿಎಲ್ ಮಟ್ಟವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು.


2. ಸಿಟ್ರಸ್ ಹಣ್ಣುಗಳು
ಕಿತ್ತಳೆ, ನಿಂಬೆ, ದ್ರಾಕ್ಷಿಯಂತಹ ಹಣ್ಣುಗಳು ಎಲ್‌ಡಿಎಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಏಕೆಂದರೆ ಸಿಟ್ರಸ್ ಹಣ್ಣುಗಳಲ್ಲಿ ಕರಗುವ ನಾರುಗಳು, ಉತ್ಕರ್ಷಣ ನಿರೋಧಕಗಳು ಮತ್ತು ಪೆಕ್ಟಿನ್ ಎಂಬ ಸಂಯುಕ್ತವು ಸಮೃದ್ಧವಾಗಿದೆ, ಇದು ನೈಸರ್ಗಿಕವಾಗಿ ಎಲ್‌ಡಿಎಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಇದನ್ನೂ ಓದಿ: World Brain Tumor Day: ಬ್ರೈನ್‌ ಟ್ಯೂಮರ್​ನಿಂದ ಬಚಾವ್​ ಆಗಲು ಈ ಅಂಶಗಳ ಬಗ್ಗೆ ತಿಳಿಯಲೇಬೇಕು


3. ನಟ್ಸ್ ಎಂದರೆ ಬೀಜಗಳನ್ನು ಸೇವಿಸಿ
ನೀವು ಸೇವಿಸುವ ಬೀಜಗಳು ಎಲ್‌ಡಿಎಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ಪೋಷಕಾಂಶಗಳಿಂದ ತುಂಬಿರುತ್ತವೆ. ಹಾರ್ವರ್ಡ್ ನ ಒಂದು ವರದಿಯು ಪ್ರತಿದಿನ 56 ಗ್ರಾಂ ಬೀಜಗಳನ್ನು ತಿನ್ನುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳುತ್ತದೆ. ಏಕೆಂದರೆ ಬೀಜಗಳು ಉತ್ಕರ್ಷಣ ನಿರೋಧಕಗಳು, ಕರಗುವ ನಾರು, ಜೀವಸತ್ವಗಳು, ಖನಿಜಗಳು ಮತ್ತು ಒಮೆಗಾ 3 ಕೊಬ್ಬಿನಾಮ್ಲಗಳಿಂದ ತುಂಬಿರುತ್ತವೆ, ಇದು ಹೃದಯದ ಆರೋಗ್ಯವನ್ನು ಸುಧಾರಿಸಲು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


4. ಮೀನು
ಕೊಬ್ಬಿನ ಮೀನು ಒಮೆಗಾ 3 ಕೊಬ್ಬಿನಾಮ್ಲಗಳನ್ನು ಹೊಂದಿರುತ್ತದೆ. ದೈನಂದಿನ ಆಹಾರದಲ್ಲಿ ಕೊಬ್ಬಿನಂಶವಿರುವ ಮೀನುಗಳನ್ನು ತಿನ್ನುವುದರಿಂದ ನಿಮ್ಮ ಎಲ್‌ಡಿಎಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಕೊಬ್ಬಿನ ಮೀನುಗಳು ನೈಸರ್ಗಿಕವಾಗಿ ಟ್ರೈಗ್ಲಿಸರೈಡ್ ಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ರಕ್ತಪ್ರವಾಹಕ್ಕೆ ಸಕ್ಕರೆಯ ಬಿಡುಗಡೆಯಾಗುವುದನ್ನು ನಿಯಂತ್ರಿಸುತ್ತದೆ ಮತ್ತು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಟ್ರೈಗ್ಲಿಸರೈಡ್ ಮಟ್ಟವನ್ನು ನಿರ್ವಹಿಸುವುದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.


ಇದನ್ನೂ ಓದಿ:  Health Care: ಉತ್ತಮ ಆರೋಗ್ಯಕ್ಕಾಗಿ ನಿಮ್ಮ ಊಟದ ಕಾಳಜಿ ಹೀಗಿರಲಿ, ತಜ್ಞರು ಶಿಫಾರಸು ಮಾಡಿದ ಸಲಹೆ


5. ಸಂಪೂರ್ಣ ಧಾನ್ಯಗಳು
ಬಾರ್ಲಿ, ರಾಗಿ, ಬಕ್ವೀಟ್ ಮತ್ತು ಓಟ್ಸ್ ನಂತಹ ಸಂಪೂರ್ಣ ಧಾನ್ಯಗಳು ಆಹಾರದ ನಾರುಗಳಿಂದ ಸಮೃದ್ಧವಾಗಿರುವ ಎಲ್ಲಾ ಧಾನ್ಯಗಳನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಿಸಬಹುದು. ಇವು ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತವೆ. ಇದಲ್ಲದೆ ಈ ಇಡೀ ಧಾನ್ಯಗಳು ಒಟ್ಟಾರೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ಚಯಾಪಚಯ ಕ್ರಿಯೆಯನ್ನು ಸುಧಾರಿಸುವ ಪೋಷಕಾಂಶಗಳಿಂದ ಸಮೃದ್ಧವಾಗಿವೆ.

Published by:Ashwini Prabhu
First published: