ಕಾಫಿ ಬೋರ್ಡ್ ಆಫ್ ಇಂಡಿಯಾ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಸಂದರ್ಶನಕ್ಕೆ ಹಾಜರಾಗಬಹುದು ಎಂದು ತಿಳಿಸಿದೆ. ಮಾರ್ಚ್ 23, 2020ರಂದು ನೇರ ಸಂದರ್ಶನ ಇರಲಿದೆ.
ಆಸಕ್ತ ಅಭ್ಯರ್ಥಿಗಳು ಕಾಫಿ ಬೋರ್ಡ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್
https://www.indiacoffee.org/ ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ:
ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಭ್ಯರ್ಥಿಗಳು ಈ ಸಂದರ್ಶನದದಲ್ಲಿ ಭಾಗಿಯಾಗಬಹುದು.
ವಯೋಮಿತಿ:
ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನದ ವಿವರ:
ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಸಂದರ್ಶನ ನಡೆಯುವ ಸಮಯ:
ಮಾರ್ಚ್ 23,2020ರಂದು ಬೆಳಿಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದೆ.
ಸ್ಥಳ:
ಕಾಫಿ ಕ್ವಾಲಿಟಿ ಡಿವಿಷನ್, 3ನೇ ಮಹಡಿ, ಕಾಫಿ ಬೋರ್ಡ್, #1, ಡಾ. ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು-560001 ಕರ್ನಾಟಕ, ಭಾರತ
ಇದನ್ನೂ ಓದಿ: ಒರ್ಮಾಕ್ಸ್ ಮೀಡಿಯಾ 2020; ಮೋಸ್ಟ್ ಅವೈಟಿಂಗ್ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ ಕನ್ನಡದ ಈ ಚಿತ್ರ!
ಇದನ್ನೂ ಓದಿ: ಅಬ್ಬಾ! ಇನ್ಸ್ಟಾಗ್ರಾಂ ಒಂದು ಪೋಸ್ಟ್ಗೆ ಈ ಸ್ಟಾರ್ ನಟರು ಪಡೆಯುತ್ತಿರುವ ಹಣ ಎಷ್ಟು ಗೊತ್ತಾ?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ