DRDO Recruitment 2019: ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

DRDO Recruitment 2019: ಮಲ್ಟಿ ಟಾಸ್ಕಿಂಗ್ ಸ್ಟಾಪ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಐಟಿಐ ಶಿಕ್ಷಣ ಪಡೆದಿರಬೇಕು.

news18-kannada
Updated:December 16, 2019, 7:26 AM IST
DRDO Recruitment 2019: ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
DRDO
  • Share this:
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ (DRDO) ಅಗತ್ಯ ಗ್ರೂಪ್ ಸಿ ನಾನ್‌ ಗೆಜೆಟೆಡ್, ಮಲ್ಟಿ ಟಾಸ್ಕಿಂಗ್ ಸ್ಟಾಪ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. . ಒಟ್ಟು 1817 ಹುದ್ದೆಗಳಿಗೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ, ಅರ್ಜಿ ಸಲ್ಲಿಕೆ ಹೇಗೆ, ವಯೋಮಿತಿ ಮತ್ತು ಇತರೆ ಹಲವು ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

ಹುದ್ದೆಗಳ ವಿಂಗಡಣೆ

SC-163, ST-114, OBC-503, EWS-188, UR-849, ESM-135, MSP-50, PWD Cat A - 18, PWD Cat B - 18, PWD Cat C - 18, PWD Cat D - 19 ವರ್ಗವಾರು ಹುದ್ದೆಗಳ ವಿಂಗಡಣೆ ಮಾಡಲಾಗಿದೆ

ವಿದ್ಯಾರ್ಹತೆ:

ಮಲ್ಟಿ ಟಾಸ್ಕಿಂಗ್ ಸ್ಟಾಪ್‌ ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಥವಾ ಐಟಿಐ ಶಿಕ್ಷಣ ಪಡೆದಿರಬೇಕು. ಅರ್ಜಿ ಸಲ್ಲಿಸುವ ವೇಳೆ ಶೈಕ್ಷಣಿಕ ಅರ್ಹತೆಯ ಅಂಕ ಪಟ್ಟಿಗಳ ಜೊತೆ ನಗದು ಕಾಪಿಗಳನ್ನು ಅಪ್‌ಲೋಡ್‌ ಮಾಡಬೇಕು.

 ಅರ್ಜಿ ಸಲ್ಲಿಸಲು ದಿನಾಂಕ:

ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್‌ ಮೂಲಕ ಅರ್ಜಿಸಲು ಆರಂಭಿಕ ದಿನಾಂಕ : ಡಿಸೆಂಬರ್ 23, 2020ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 23, 2020

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ. ಅಂತೆಯೇ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಅಭ್ಯರ್ಥಿಗಳು ಡಿಆರ್​​ಡಿಒ ಅಧಿಕೃತ ವೆಬ್‌ಸೈಟ್ www.drdo.gov.in ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಈ ವೇಳೆ ಅಭ್ಯರ್ಥಿಗೆ ಟೈಯರ್-1 ಪರೀಕ್ಷೆ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಇರುತ್ತದೆ.

ಹೆಚ್ಚಿನ ಮಾಹಿತಿಗೆ ಈ ಲಿಂಕ್​ ಮೇಲೆ ಕ್ಲಿಕ್​ ಮಾಡಿ

ಇದನ್ನೂ ಓದಿ: 50 ಪೈಸೆ ಸಾಲಕ್ಕೆ ನೋಟಿಸ್​ ಕಳುಹಿಸಿದ ಎಸ್​ಬಿಐ ಬ್ಯಾಂಕ್​!

ಇದನ್ನೂ ಓದಿ: IAF Recruitment 2019: ಏರ್​ಮೆನ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

 
First published:December 16, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ