ವಿಶ್ವ ರಕ್ತದಾನ ದಿನ : ರಕ್ತಹೀನತೆಯ ಸಮಸ್ಯೆಗೆ ಈ ಪೌಷ್ಟಿಕ ಆಹಾರಗಳೇ ಪರಿಹಾರ

news18
Updated:June 14, 2018, 2:20 PM IST
ವಿಶ್ವ ರಕ್ತದಾನ ದಿನ : ರಕ್ತಹೀನತೆಯ ಸಮಸ್ಯೆಗೆ ಈ ಪೌಷ್ಟಿಕ ಆಹಾರಗಳೇ ಪರಿಹಾರ
news18
Updated: June 14, 2018, 2:20 PM IST
-ನ್ಯೂಸ್ 18 ಕನ್ನಡ

ಜೂನ್​ 14 ಅನ್ನು  ವಿಶ್ವ ರಕ್ತದಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ರಕ್ತದಾನವನ್ನು ಜೀವದಾನ ಎಂದು ಪರಿಗಣಿಸಲಾಗುತ್ತದೆ. ಒಂದು ಬಾರಿ ರಕ್ತದಾನ ಮಾಡಿದರೆ ಕನಿಷ್ಠ ಪಕ್ಷ ಎರಡು ಅಥವಾ ಮೂರು ಜೀವಗಳನ್ನು ಉಳಿಸಿಕೊಳ್ಳಬಹುದು. ಆದರೆ ಇಂದು ರಕ್ತಹೀನತೆ ಎಂಬುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ದೇಹದಲ್ಲಿ ರಕ್ತದ ಕೊರತೆಯಾದರೆ ಅನೇಕ ಸಮಸ್ಯೆಗಳು ತಲೆದೂರುತ್ತವೆ. ಇದು ಪೋಷಕಾಂಶಗಳ ಕೊರತೆ ಅಥವಾ ವಂಶ ಪಾರಂಪರ್ಯದ ಕಾರಣಗಳಿಂದ ಉಂಟಾಗುತ್ತದೆ. ರಕ್ತದಲ್ಲಿ ಹಿಮೊಗ್ಲೊಬಿನ್ ಮಟ್ಟ ಕಡಿಮೆಯಾದರೆ ದಣಿವು, ನಿರಾಸಕ್ತಿ, ಆರೋಗ್ಯದಲ್ಲಿ ಏರು ಪೇರು ಮುಂತಾದ ರಕ್ತಹೀನತೆಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಕೆಲ ಆಹಾರಗಳನ್ನು ಪ್ರತಿ ನಿತ್ಯ ಸೇವಿಸುವುದರಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಬೀಟ್​ ರೂಟ್​ : ಬೀಟ್​ ರೂಟ್​ ಎನ್ನುವುದು ರಕ್ತಹೀನತೆಗೆ ಪರಿಣಾಮಕಾರಿ ಆಹಾರ. ಸಾಮಾನ್ಯ ರಕ್ತ ಕೊರತೆ ಉಂಟಾದರೆ ವೈದ್ಯರು ಕೂಡ ಮೊದಲು ಬೀಟ್ ರೂಟ್​ ಸೇವನೆಗೆ ಸಲಹೆ ನೀಡುತ್ತಾರೆ. ಇದರಲ್ಲಿ ಕಂಡು ಬರುವ ಕಬ್ಬಿಣಾಂಶ, ಫೋಲಿಕ್ ಆ್ಯಸಿಡ್, ಫೈಬರ್ ಮತ್ತು ಪೊಟಾಶಿಯಂ ಅಂಶಗಳು ದೇಹದಲ್ಲಿ ರಕ್ತವನ್ನು ಹೆಚ್ಚಿಸುತ್ತದೆ.


ಸೇಬು (ಆ್ಯಪಲ್) : ಪ್ರತಿನಿತ್ಯ ಸೇಬನ್ನು ತಿನ್ನುವುದರಿಂದ ಹಿಮೋಗ್ಲೊಬಿನ್ ಮಟ್ಟವನ್ನು ಹೆಚ್ಚಿಸಬಹುದು. ಆ್ಯಪಲ್ ತಿನ್ನುವುದರಿಂದ ಆರೋಗ್ಯ ಕೂಡ ಉತ್ತಮಗೊಳ್ಳುತ್ತದೆ. ಇದರ ಸೇವನೆಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಬಹುದು.


ದಾಳಿಂಬೆ : ದಾಳಿಂಬೆ ತಿಂದರೆ ಶೀಘ್ರದಲ್ಲೇ ರಕ್ತಹೀನತೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದರಲ್ಲಿರುವ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಕಾರ್ಬೋಹೈಡ್ರೇಟ್​ಗಳು ಮತ್ತು ಫೈಬರ್ ಅಂಶಗಳು ಹಿಮೋಗ್ಲೊಬಿನ್ ಪ್ರಮಾಣವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.


ನೆಲ್ಲಿಕಾಯಿ : ವಿಟಮಿನ್​ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಗಳು ಕೂಡ ರಕ್ತಹೀನತೆಯ ಸಮಸ್ಯೆಗೆ ಪ್ರಮುಖ ಆಹಾರವಾಗಿದೆ. ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಆಗಿರುವ ನೆಲ್ಲಿಕಾಯಿಯಲ್ಲಿ ಕ್ಯಾಲ್ಸಿಯಂ, ವಿಟಮಿನ್, ಕಬ್ಬಿಣಾಂಶ ಹೆಚ್ಚಾಗಿದ್ದು, ಇದನ್ನು ಪ್ರತಿನಿತ್ಯ ತಿಂದರೆ ರಕ್ತದ ಕೊರತೆಗೆ ಪರಿಹಾರ ಕಂಡುಕೊಳ್ಳಬಹುದು.
First published:June 14, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...