ಸರ್ಕಾರಿ ನೌಕರಿ ಹುಡುಕಾಟದಲ್ಲಿ ಇರುವವರಿಗೆ ಇಲ್ಲಿದೆ 12 ಸಾವಿರ ಉದ್ಯೋಗಾವಕಾಶ

zahir | news18-kannada
Updated:September 26, 2019, 10:35 AM IST
ಸರ್ಕಾರಿ ನೌಕರಿ ಹುಡುಕಾಟದಲ್ಲಿ ಇರುವವರಿಗೆ ಇಲ್ಲಿದೆ 12 ಸಾವಿರ ಉದ್ಯೋಗಾವಕಾಶ
ಸಾಂದರ್ಭಿಕ ಚಿತ್ರ
  • Share this:
ಸರ್ಕಾರಿ ಉದ್ಯೋಗಗಳ ಹುಡುಕಾಟದಲ್ಲಿ ಇರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಹಲವು ಬ್ಯಾಂಕ್​ಗಳು ತಮ್ಮ ಖಾಲಿ​ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಸಾವಿರಾರು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಇತ್ತೀಚೆಗೆ ಐಬಿಪಿಎಸ್ ಕ್ಲರ್ಕ್ ನೇಮಕಾತಿ ಪರೀಕ್ಷೆಗೆ (IBPS Clerk Exam) ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ವಿಭಾಗದಲ್ಲಿ ದೇಶಾದ್ಯಂತ 12 ಸಾವಿರ ಕ್ಲರ್ಕ್​ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಇದಲ್ಲದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹ ಭರ್ತಿ ಪ್ರಕಟಣೆ ಹೊರಡಿಸಿದ್ದು, ಎಸ್‌ಬಿಐನ 700 ಹುದ್ದೆಗಳನ್ನು ನೇಮಕಾತಿ ನಡೆಯಲಿದೆ. ಅದೇ ರೀತಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ಬಿ ಗ್ರೇಡ್ 199 ಹುದ್ದೆಗಳಿಗೆ ಖಾಲಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಮೂರು ಸಂಸ್ಥೆಗಳನ್ನು ಒಳಗೊಂಡಂತೆ ಒಟ್ಟು 12899 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಎಲ್ಲಾ ನೇಮಕಾತಿಗಳ ಬಗ್ಗೆ ಹೆಚ್ಚಿನ ಮಾಹಿತಿ ಕೆಳಗಿನಂತಿವೆ.

IBPS 12 ಸಾವಿರ ಕ್ಲರ್ಕ್​ ಹುದ್ದೆಗಳು:

ಐಬಿಪಿಎಸ್ ಕ್ಲರ್ಕ್ ನೇಮಕಾತಿ ಪರೀಕ್ಷೆಗೆ (IBPS Clerk Registration) ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ www.ibps.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಐಬಿಪಿಎಸ್ ಕ್ಲರ್ಕ್​ ಭರ್ತಿ ಮೂಲಕ ದೇಶದ ವಿವಿಧ ಬ್ಯಾಂಕುಗಳಲ್ಲಿ 12 ಸಾವಿರಕ್ಕೂ ಹೆಚ್ಚಿನ ಹುದ್ದೆಗಳಲ್ಲಿ ನೇಮಕಾತಿ ನಡೆಯಲಿದೆ.

ಈ ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

SBIನ 700 ಹುದ್ದೆಗಳಿಗೆ ಅರ್ಜಿ ಆಹ್ವಾನ:
ಎಸ್‌ಬಿಐ 700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯನ್ನು ಪಂಜಾಬ್, ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಮಾಡಲಾಗುತ್ತಿದೆ. ಪಂಜಾಬ್‌ನಲ್ಲಿ 400, ಹರಿಯಾಣದಲ್ಲಿ 150 ಮತ್ತು ಹಿಮಾಚಲ ಪ್ರದೇಶದ 150 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಗ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತರು 6 ಅಕ್ಟೋಬರ್ 2019 ರೊಳಗೆ sbi.co.in/career ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.ಈ ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಧೋನಿ ನಿವೃತ್ತಿ ಘೋಷಿಸದಿರಲು ಟೀಂ ಇಂಡಿಯಾದ ಈ ಆಟಗಾರನೇ ಕಾರಣ..!

RBI Grade B ಹುದ್ದೆಗಳ ನೇಮಕಾತಿ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 199 ಹುದ್ದೆಗಳ ನೇಮಕಾತಿ ಆದೇಶ ಹೊರಡಿಸಿದೆ. ಈಗಾಗಲೇ ಈ ಹುದ್ದೆಗಳ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 11 ರೊಳಗೆ ಅರ್ಜಿ ಸಲ್ಲಿಸಬಹುದು. ಆರ್​ಬಿಐನ ಅಧಿಕೃತ ವೆಬ್​ಸೈಟ್​ rbi.org.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
First published:September 26, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ