ಹಣ್ಣುಗಳ ರಾಜ ಮಾವಿನ ಹಣ್ಣಿನಿಂದ ಸಿಗುವ ಪ್ರಯೋಜನಗಳು

news18
Updated:May 10, 2018, 6:13 PM IST
ಹಣ್ಣುಗಳ ರಾಜ ಮಾವಿನ ಹಣ್ಣಿನಿಂದ ಸಿಗುವ ಪ್ರಯೋಜನಗಳು
news18
Updated: May 10, 2018, 6:13 PM IST
ನ್ಯೂಸ್ 18 ಕನ್ನಡ

ಹಣ್ಣುಗಳ ರಾಜ ಎಂದೊಡನೆ ನೆನಪಾಗೋದು ಮಾವಿನ ಹಣ್ಣು. ಅದರಲ್ಲೂ ಬೇಸಿಗೆ ಬಂತೆಂದರೆ ಊಟದೊಂದಿಗೆ ಮಾವಿನ ಹಣ್ಣು ಸಾಮಾನ್ಯವಾಗಿ ಇದ್ದೇ ಇರುತ್ತದೆ. ಹೆಚ್ಚಿನವರು ಮಾವಿನ ಹಣ್ಣನ್ನು ಅದರ ರುಚಿಗೆ ತಿಂದರೂ ಅದರಿಂದ ಸಿಗುವ ಪ್ರಯೋಜನಗಳು ಅಪಾರ. ಮಾವಿನಿಂದ ಸಿಗುವ ಪ್ರಯೋಜನಗಳು ಇಂತಿವೆ.

ಮಾವಿನ ಹಣ್ಣಲ್ಲಿ ವಿಟಮಿನ್ ಎ ಪ್ರಮಾಣ ಹೆಚ್ಚಾಗಿ ಕಂಡು ಬರುತ್ತದೆ. ಬೇಸಿಗೆಯಲ್ಲಿ ಇದನ್ನು ಸೇವಿಸುವುದರಿಮದ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಈ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು (antioxidants) ಹೇರಳವಾಗಿರುತ್ತದೆ. ಇದನ್ನು ತಿನ್ನುವುದರಿಂದ ಕ್ಯಾನ್ಸರ್​ನಂತಹ ರೋಗಗಳನ್ನು ತಡೆಗಟ್ಟಬಹುದು.

ಮಾವಿನಲ್ಲಿ ಸಾಮಾನ್ಯವಾಗಿ ವಿಟಮಿನ್ ಸಿ ಹೇರಳವಾಗಿರುತ್ತದೆ. ಇದು ಚರ್ಮದ ಸಮಸ್ಯೆಯನ್ನು ಹೋಗಲಾಡಿಸಲು ಸಹಕಾರಿಯಾಗಿದೆ.

ಫೈಬರ್ ಮತ್ತು ಸಿ ವಿಟಮಿನ್ ಮಾವಿನಲ್ಲಿ ಅಧಿಕ ಪ್ರಮಾಣದಲ್ಲಿದ್ದು, ಇದರ ಸೇವನೆಯಿಂದ ಹೊಟ್ಟೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಮಾವಿನ ಹಣ್ಣಿನಲ್ಲಿ ಫೈಬರ್ ಮತ್ತು ಕ್ಯಾಲೊರಿ ಹೆಚ್ಚಾಗಿರುವುದರಿಂದ ಹಸಿವು ಕಡಿಮೆಯಾಗುತ್ತದೆ. ಅಷ್ಟೇ ಅಲ್ಲದೆ ದೇಹದ ತೂಕವನ್ನು ನಿಯಂತ್ರಿಸಲು ಸಹಕರಿಸುತ್ತದೆ.
Loading...

ಈ ಹಣ್ಣುಗಳಲ್ಲಿ ಕಂಡುಬರುವ ಗ್ಲುಟಮಿನ್ (Glutamine) ಅಂಶವು ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ. ಗರ್ಭಿಣಿಯರು ಸಹ ಮಾವಿನ ಹಣ್ಣನ್ನು ತಿನ್ನಬಹುದೆಂದು ವೈದ್ಯರು ಸಲಹೆ ನೀಡುತ್ತಾರೆ.

ಮಾವಿನಲ್ಲಿ ಹಲವು ಪ್ರಯೋಜನಗಳಿದ್ದರೂ ಇದನ್ನು ಹೆಚ್ಚು ಸೇವಿಸುವುದು ಉತ್ತಮವಲ್ಲ. ಇದರಲ್ಲಿ ಸಕ್ಕರೆ ಮತ್ತು ಕ್ಯಾಲೊರಿ ಪ್ರಮಾಣವನ್ನು ಹೆಚ್ಚಾಗಿರುವುದರಿಂದ ಪ್ರತಿದಿನ ನಿರ್ದಿಷ್ಟ ಸಂಖ್ಯೆಯಷ್ಟು ಸೇವಿಸುವುದು ಉತ್ತಮ.
First published:May 10, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ