High Court Of Karnataka Recruitment 2020: ಸಿವಿಲ್ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಆಹ್ವಾನ

High Court Of Karnataka Recruitment 2020: ಉಚ್ಚ ನ್ಯಾಯಾಲಯವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುವುದು.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

 • Share this:
  ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ 53 ಸಿವಿಲ್ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 26,2020 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  ಶೈಕ್ಷಣಿಕ ವಿದ್ಯಾರ್ಹತೆ:

  ಸಿವಿಲ್​ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನು ಪದವಿಯನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ವಕೀಲರಾಗಿ ನೋಂದಣಿ ಆಗಿರಬೇಕು.

  ವಯೋಮಿತಿ:

  ಮಾರ್ಚ್ 26,2020ರ ಅನ್ವಯ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ ಮತ್ತು ಅನುಸೂಚಿತ ಜಾತಿ/ಅನುಸೂಚಿತ ಪಂಗಡಕ್ಕೆ ಸೇರಿದ 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮಾಜಿ ಸೈನಿಕ ಅಭ್ಯರ್ಥಿಗಳಿಗಾಗಿ, ಗರಿಷ್ಟ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ನೀಡಲಾಗಿರುತ್ತದೆ.

  ವೇತನದ ಶ್ರೇಣಿ:

  ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,700/- ರಿಂದ 44,700/-ರೂ ವೇತನವನ್ನು ನೀಡಲಾಗುವುದು.

  ಆಯ್ಕೆ ಪ್ರಕ್ರಿಯೆ:

  ಉಚ್ಚ ನ್ಯಾಯಾಲಯವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದ ಒಟ್ಟು ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯನ್ನು ಮಾಡಲಾಗುವುದು.

  ಅರ್ಜಿ ಶುಲ್ಕ:

  -ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ. ಸಾಮಾನ್ಯ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 500/-ರೂ
  -ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಸಲ್ಲಿಸಬೇಕು. ಮಾರ್ಚ್ 30,2020ರೊಳಗೆ ಆನ್‌ಲೈನ್ ಅಥವಾ ಚಲನ್ ಮೂಲಕ ಪಾವತಿಸಬೇಕು.

  ಅರ್ಜಿ ಸಲ್ಲಿಸುವುದು ಹೇಗೆ:

  ಸಿವಿಲ್ ನ್ಯಾಯಾಧೀಶ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ https://karnatakajudiciary.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವನ್ನು ಮಾರ್ಚ್ 30,2020ರೊಳಗೆ ಪಾವತಿಸಲು ಅವಕಾಶವಿರುತ್ತದೆ.

  ಹೆಚ್ಚಿನ ಮಾಹಿತಿಗೆ ಈ ಲಿಂಕ್​ ಕ್ಲಿಕ್​ ಮಾಡಿರಿ
  First published: