ತೂಕವನ್ನು ಇಳಿಸುವುದು(Weight Loss) ಕಷ್ಟಕರವಾದ ವಿಷಯ, ಮತ್ತು ಆಹಾರ(Food) ಮತ್ತು ವ್ಯಾಯಾಮ ಎರಡೂ ತೂಕ ಇಳಿಸುವ ಪ್ರಯಾಣದಲ್ಲಿ ಪ್ರಮುಖ ಪಾತ್ರವಹಿಸುತ್ತವೆ, ಆದರೆ ನಿಮ್ಮ ತೂಕ ಇಳಿಸುವ ಪ್ರಯಾಣದಲ್ಲಿ ಹೆಚ್ಚು ಆಹಾರದ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಕೆಲವು ತಜ್ಞರು ಮತ್ತು ಪೌಷ್ಟಿಕತಜ್ಞರು ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿಯನ್ನು(Garlic) ಹಾಗೂ ಲವಂಗವನ್ನು(Clove) ತಿನ್ನುವುದು ನಿಮಗೆ ಹೆಚ್ಚುವರಿ ತೂಕ ಕಡಿಮೆ ಮಾಡಲು ಮತ್ತು ನಿಮ್ಮ ಆರೋಗ್ಯವನ್ನು ಇತರ ಹಲವು ರೀತಿಯಲ್ಲಿ ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಹೇಳುತ್ತಾರೆ.
ಹಾಗಾದ್ರೆ ತೂಕ ಇಳಿಸಿಕೊಳ್ಳಲು ಬೆಳ್ಳುಳ್ಳಿ ಮತ್ತು ಲವಂಗ ಹೇಗೆ ಸಹಾಯ ಮಾಡುತ್ತದೆ ಎಂಬುದು ಇಲ್ಲಿದೆ
ಬೆಳ್ಳುಳ್ಳಿಯ ಆರೋಗ್ಯ ಪ್ರಯೋಜನಗಳು
ಬೆಳ್ಳುಳ್ಳಿ ಅತ್ಯುತ್ತಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರಗಳಲ್ಲಿ ಒಂದಾಗಿದೆ, ಏಕೆಂದರೆ ಇದು ರಕ್ತನಾಳಗಳಲ್ಲಿ ಸರಾಗವಾಗಿ ರಕ್ತದ ಹರಿವಿಗೆ ಸಹಾಯ ಮಾಡುತ್ತದೆ ಹಾಗೂ ರಕ್ತದೊತ್ತಡವನ್ನು ಕಡಿಮೆ ಮಾಡಿ ರಕ್ತನಾಳಗಳನ್ನು ಹಾನಿಯಿಂದ ರಕ್ಷಿಸುತ್ತದೆ ಮತ್ತು ಹೃದಯ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ ಎಂಬುದು ಸಾಬೀತಾಗಿದೆ. ಇದು ವಿಟಮಿನ್ ಬಿ 6, ವಿಟಮಿನ್ ಸಿ, ಫೈಬರ್, ಕ್ಯಾಲ್ಸಿಯಂ ಮತ್ತು ಮ್ಯಾಂಗನೀಸ್ ನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿದೆ.
ಇದನ್ನೂ ಓದಿ: ನೀವು ತಿಂದ ಆಹಾರ ಜೀರ್ಣವಾಗುತ್ತಿಲ್ಲವೇ? ಈ 5 ಪದಾರ್ಥಗಳನ್ನ ಸೇವಿಸಿ!
ತೂಕ ಇಳಿಸಲು ಹೇಗೆ ಬೆಳ್ಳುಳ್ಳಿ ಪ್ರಯೋಜನ?
ಬೆಳ್ಳುಳ್ಳಿಯಲ್ಲಿರುವ ವಿವಿಧ ಪೋಷಕಾಂಶಗಳಿರುವುದರಿಂದ ಅದನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಹೆಚ್ಚುವರಿ ತೂಕ ಇಳಿಸಲು ಸಹಾಯ ಮಾಡುತ್ತದೆ. ಜೊತೆಗೆ ಆರೋಗ್ಯಕರ ಆಹಾರ ಮತ್ತು ನಿಯಮಿತವಾದ ವ್ಯಾಯಾಮವು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನವೊಂದು ಸಾಬೀತು ಮಾಡಿದೆ. ಬೆಳ್ಳುಳ್ಳಿ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ ಹಾಗಾಗಿ ಇದು ಹೆಚ್ಚುವರಿ ಕ್ಯಾಲೊರಿಗಳನ್ನು ಸುಡುವ ಮೂಲಕ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು ಚಯಾಪಚಯವನ್ನು ಹೆಚ್ಚಿಸಲು ಅಥವಾ ಕೊಬ್ಬನ್ನು ಸುಡಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತಿಂದರೆ ನಿಮಗೆ ಪೂರ್ಣ ಹೊಟ್ಟೆ ತುಂಬಿದಂತೆ ಆಗುತ್ತದೆ ಮತ್ತು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ. ಇದರಿಂದ ತೂಕ ಇಳಿಸುವ ಪ್ರಕ್ರಿಯೆ ಸುಲಭವಾಗುತ್ತದೆ. ಬೆಳ್ಳುಳ್ಳಿ ಹಸಿವನ್ನು ನಿಗ್ರಹಿಸುವ ಕೆಲಸ ಮಾಡುತ್ತದೆ.
ಜರ್ನಲ್ ಆಫ್ ನ್ಯೂಟ್ರಿಷನ್ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಬೆಳ್ಳುಳ್ಳಿ ಕೊಬ್ಬು ಸುಡುವ ಅತ್ಯುತ್ತಮವಾದ ಪದಾರ್ಥ ಮತ್ತು ವಿಷವನ್ನು ತೆಗೆದುಹಾಕುವ ಗುಣಗಳನ್ನು ಹೊಂದಿದೆ ಎಂಬುದು ಸಾಬೀತಾಗಿದೆ. ಇದು ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಹೀಗಾಗಿ ತೂಕ ಇಳಿಸುವುದು ಸುಲಭವಾಗುತ್ತದೆ.
ತೂಕ ಇಳಿಸಲು ಲವಂಗ ಹೇಗೆ ಪ್ರಯೋಜನ?
ಲವಂಗವು ಚಯಾಪಚಯವನ್ನು ಹೆಚ್ಚಿಸುತ್ತದೆ, ಇದು ತೂಕ ಇಳಿಸಲು ಹೆಚ್ಚು ಸಹಾಯ ಮಾಡುತ್ತದೆ. ಆಂಟಿಕೋಲೆಸ್ಟೆರೆಮಿಕ್ ಮತ್ತು ಲಿಪಿಡ್ ವಿರೋಧಿ ಚಟುವಟಿಕೆಗಳು ಕೂಡ ಮಸಾಲೆಯಲ್ಲಿದ್ದು, ಆರೋಗ್ಯದ ಹಲವು ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಇದನ್ನು ಮೆಣಸು, ದಾಲ್ಚಿನ್ನಿ ಮತ್ತು ಜೀರಿಗೆ ಬೀಜಗಳೊಂದಿಗೆ ಸೇರಿದರೆ ಇದು ನಮ್ಮ ಚಯಾಪಚಯ ದರವನ್ನು ಇನ್ನೂ ಹೆಚ್ಚಿಸಲು ಸಹಾಯ ಮಾಡುತ್ತದೆ. ಆದರೆ ಇದನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಹೆಚ್ಚಿನ ಉಪಯೋಗ ನೀಡುತ್ತದೆ.
ಇದನ್ನೂ ಓದಿ: ಅಸಿಡಿಟಿ ಸಮಸ್ಯೆ ಇದ್ರೆ ಈ ಮೂರು ಪದಾರ್ಥಗಳನ್ನು ತಿನ್ನಿ ಮ್ಯಾಜಿಕ್ ನೋಡಿ
ಲವಂಗವು ಆ್ಯಂಟಿ ಆಕ್ಸಿಡೆಂಟ್ ಗುಣಗಳನ್ನು ಹೊಂದಿದ್ದು ಅದು ಆಕ್ಸಿಡೇಟಿವ್ ಹಾನಿಯನ್ನು ತಡೆಯಲು ಸಹಾಯ ಮಾಡುತ್ತದೆ. ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆಗೊಳಿಸುವುದರಿಂದ ದೀರ್ಘಕಾಲದ ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಲವಂಗವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ಎಂದು ಸಾಬೀತಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ