IBPS Clerk 2020: 1557 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕೊರೋನಾ ಸಮಯದಲ್ಲಿ ಅನೇಕರು ಉದ್ಯೋಗ ಹುಡುಕುತ್ತಿದ್ದಾರೆ. ಇದೀಗ ಅಂತಹವರಿಗಾಗಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 1557 ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.

JOB

JOB

  • Share this:
    ಕೊರೋನಾ ಸಮಯದಲ್ಲಿ ಅನೇಕರು ಉದ್ಯೋಗ ಹುಡುಕುತ್ತಿದ್ದಾರೆ. ಇದೀಗ ಅಂತಹವರಿಗಾಗಿ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ಸೆಲೆಕ್ಷನ್‌ ಬೋರ್ಡ್ 1557 ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.

    ವಿದ್ಯಾರ್ಹತೆ:

    ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

    ವಯೋಮಿತಿ:

    -ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    -ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ (ಎನ್ಸಿಎಲ್) ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಮಾಜಿ ಸೈನಿಕ ಅಭ್ಯರ್ಥಿಗೆ 8 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಿದೆ.

    ಆಯ್ಕೆ ಪ್ರಕ್ರಿಯೆ:

    ಆನ್​​ಲೈನ್​ ಪರೀಕ್ಷೆಯ ಮೂಲಕ ಮೊದಲು ಆಯ್ಕೆ ಮಾಡಲಾಗುವುದು. ನಂತರ ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸಲಾಗುವುದು. ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್​ಲೈನ್​ ಮುಖ್ಯ ಪರೀಕ್ಷೆಯನ್ನು ಮಾಡುತ್ತಾರೆ. ಅದರಲ್ಲಿ ತೇರ್ಗಡೆಗೊಂಡ ಅಭ್ಯರ್ಥಿಗಳು ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿನ್ನುಪಡೆಯಲಿದ್ದಾರೆ.

    ಅರ್ಜಿ ಶುಲ್ಕದ ವಿವರ:

    ಆನ್​ಲೈನ್​​​ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 100/-ರೂ ಮತ್ತು ಸಾಮಾನ್ಯ ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಎಂದು ತಿಳಿಸಿದೆ.

    ಅರ್ಜಿ ಸಲ್ಲಿಸುವುದು ಹೇಗೆ....

    ಅರ್ಜಿ ಸಲ್ಲಿಸುವುದು ಹೇಗೆ:

    ಐಬಿಪಿಎಸ್​ ಹುದ್ದೆ ಅರ್ಜಿ ಸಲ್ಲಿಸ ಬಯಸುವ ಆಸಕ್ತರು ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನೆಲ್ ನ ಅಧಿಕೃತ ವೆಬ್​ಸೈಟ್​ಗೆ https://www.ibps.in/ ಗೆ ಭೇಟಿ ನೀಡಬೇಕು. ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿಬೇಕು. ಆನ್​​ಲೈನ್​ ಮೂಲಕ ಸೆಪ್ಟೆಂಬರ್ 2 ರಿಂದ ಸೆಪ್ಟೆಂಬರ್ 23,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
    Published by:Harshith AS
    First published: