Indian Army: ಭಾರತೀಯ ಸೇನೆಯಲ್ಲಿ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಜುಲೈ 1, 2020ರ ಅನ್ವಯ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಭಾರತೀಯ ಸೇನೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.


Updated:January 15, 2020, 5:43 PM IST
Indian Army: ಭಾರತೀಯ ಸೇನೆಯಲ್ಲಿ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
.
  • Share this:
ಭಾರತೀಯ ಸೇನೆ ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್ ಮೂಲಕ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 55 ಎಸ್​ಎಸ್​ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 2, 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:

ಭಾರತೀಯ ಸೇನೆ ಹೊರಡಿಸಿರುವ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಪಡೆದಿರಬೇಕು. ಮಾತ್ರವಲ್ಲದೆ,  ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಜುಲೈ 1, 2020ರ ಅನ್ವಯ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಭಾರತೀಯ ಸೇನೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನದ ವಿವರ: 

ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 2,50,000/-ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ joinindianarmy.nic.in ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ಅಬ್ಬಾ..ಈ ದೇಶದಲ್ಲಿ ಒಂದು ಜಿಬಿ ಇಂಟರ್ನೆಟ್ ಬೆಲೆ ಕೇಳಿದ್ರೆ ಶಾಕ್​ ಆಗ್ತೀರಾ; ಭಾರತವೇ ಬೆಸ್ಟ್!

ಇದನ್ನೂ ಓದಿ: ಜಿಯೋ ವೈ-ಫೈ ಕರೆ; ಯಾವ ಯಾವ ಸ್ಮಾರ್ಟ್​ಫೋ​ನ್​ಗಳಿಗೆ ಲಭ್ಯ; ಇಲ್ಲಿದೆ ಮಾಹಿತಿ
Published by: Harshith AS
First published: January 15, 2020, 5:06 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading