ಇಂಡಿಯನ್ ಬ್ಯಾಂಕ್ ಉದ್ಯೋಗಾವಕಾಶ: ಪದವಿ ಹೊಂದಿದವರಿಗೆ ಸುವರ್ಣಾವಕಾಶ

Indian Bank SO Recruitment: ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂ. ಹಾಗೆಯೇ ಉಳಿದ ವರ್ಗದ ಅಭ್ಯರ್ಥಿಗಳು 600 ರೂ. ಎಂದು ನಿಗದಿಪಡಿಸಲಾಗಿದೆ.

zahir | news18-kannada
Updated:January 24, 2020, 2:53 PM IST
ಇಂಡಿಯನ್ ಬ್ಯಾಂಕ್ ಉದ್ಯೋಗಾವಕಾಶ: ಪದವಿ ಹೊಂದಿದವರಿಗೆ ಸುವರ್ಣಾವಕಾಶ
Jobs
  • Share this:
Indian Bank SO Recruitment: ಇಂಡಿಯನ್ ಬ್ಯಾಂಕ್​ನಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇಲ್ಲಿ ಒಟ್ಟು 138 ವಿಶೇಷ ಅಧಿಕಾರಿಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಈ ನೇಮಕಾತಿಯಡಿಯಲ್ಲಿ ಸಹಾಯಕ ವ್ಯವಸ್ಥಾಪಕ, ವ್ಯವಸ್ಥಾಪಕ ಮತ್ತು ಹಿರಿಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ವಿದ್ಯಾರ್ಹತೆ:
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು, ಅರ್ಜಿದಾರರು ಪದವಿ ಪಡೆದಿರಬೇಕು. ಹಾಗೆಯೇ ಅರ್ಜಿದಾರರು ಈ ಹುದ್ದೆಗೆ ಬೇಕಾದ ಅನುಭವ ಹೊಂದಿರಬೇಕು.

ಅರ್ಜಿ ಶುಲ್ಕ:
ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂ. ಹಾಗೆಯೇ ಉಳಿದ ವರ್ಗದ ಅಭ್ಯರ್ಥಿಗಳು 600 ರೂ. ಎಂದು ನಿಗದಿಪಡಿಸಲಾಗಿದೆ.

ವಯೋಮಿತಿ:
ಆಯಾ ಹುದ್ದೆಗಳಿಗೆ ಆಯಾ ವಯೋಮಿತಿಯನ್ನು ಇಲ್ಲಿ ನಿಗದಿಪಡಿಸಲಾಗಿದ್ದು, ಅರ್ಜಿದಾರನ ಕನಿಷ್ಠ ವಯಸ್ಸು 20 ಹಾಗೂ ಗರಿಷ್ಠ 37 ವರ್ಷದವರೆಗೆ ಮಿತಿಗೊಳಿಸಲಾಗಿದೆ.ಆಯ್ಕೆ ಪ್ರಕ್ರಿಯೆ:
ಮ್ಯಾನೇಜರ್ (ಸೆಕ್ಯುರಿಟಿ) ಆಯ್ಕೆಗಾಗಿ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಸಂದರ್ಶನ ಮಾಡಲಾಗುತ್ತದೆ. ಉಳಿದ ಇತರ ಹುದ್ದೆಗಳಿಗೆ ಪರೀಕ್ಷೆಗಳು ಮತ್ತು ಸಂದರ್ಶನಗಳನ್ನು ನಡೆಸಲಾಗುವುದು.
ಸ್ಕೇಲ್ 1 ಮತ್ತು ಸ್ಕೇಲ್ 2 ಹುದ್ದೆಗಳಿಗೆ, 2 ಗಂಟೆಗಳ ಕಾಲ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇಲ್ಲಿ 200 ಅಂಕಗಳ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಇನ್ನು ಸ್ಕೇಲ್ 3 ಗೆ 100 ಅಂಕಗಳ ಪರೀಕ್ಷೆ ಇರುತ್ತದೆ. ಇದಕ್ಕಾಗಿ ಅಭ್ಯರ್ಥಿಗಳಿಗೆ ಒಂದು ಗಂಟೆ ಸಮಯ ನೀಡಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ವರ್ಗದ ಅಭ್ಯರ್ಥಿಗಳು 40 ಪ್ರತಿಶತ ಅಂಕ ಪಡೆಯಬೇಕು. ಇನ್ನು ಮೀಸಲಾತಿ ವರ್ಗದ ಅಭ್ಯರ್ಥಿಗಳು ಶೇ. 35 ರಷಗ್ಟು ಅಂಕಗಳನ್ನು ಗಳಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ indianbank.in/career ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 10, 2020

ಇದನ್ನೂ ಓದಿ: Bigg Boss Kannada 7: ಬಿಗ್ ಬಾಸ್​ ಸ್ಪರ್ಧಿ ಅಸ್ವಸ್ಥ: ಬೆಚ್ಚಿ ಬಿದ್ದ ವೀಕ್ಷಕರು..!

 

(ವಿ.ಸೂ: ಕೆಲವೊಂದು ಆ್ಯಪ್​ಗಳಲ್ಲಿ ಲಿಂಕ್ ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ News18 Kannada App ಡೌನ್​ಲೋಡ್​ ಮಾಡುವ ಮೂಲಕ ನಿಮ್ಮ ಲಿಂಕ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು)

ಇದನ್ನೂ ಓದಿ: ಮುಗಿಲ್​​ಪೇಟೆಯ ಮೂಗುತಿ ಸುಂದರಿ ಇವರೇ ನೋಡಿ

First published:January 24, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ