HOME » NEWS » Lifestyle » INTERNATIONAL TEA DAY 2020 ZP

International Tea Day 2020: ಚಹಾ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು?

International Tea Day 2020: ಚಹಾ ಉತ್ಪಾದನೆ ಮತ್ತು ಸಂಸ್ಕರಣೆಯು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಲಕ್ಷಾಂತರ ಕುಟುಂಬಗಳಿಗೆ ಜೀವನೋಪಾಯದ ಮುಖ್ಯ ಮೂಲ ಮತ್ತು ಲಕ್ಷಾಂತರ ಬಡ ಕುಟುಂಬಗಳಿಗೆ ಜೀವನಾಧಾರವಾಗಿದೆ.

news18-kannada
Updated:May 21, 2020, 5:08 PM IST
International Tea Day 2020: ಚಹಾ ಕುಡಿಯುವುದರಿಂದ ಸಿಗುವ ಪ್ರಯೋಜನಗಳೇನು?
Tea
  • Share this:
International Tea Day 2020: ಇಂದು ವಿಶ್ವ ಅಂತರರಾಷ್ಟ್ರೀಯ ಚಹಾ ದಿನ. ಮೇ 21 ಅನ್ನು ಪ್ರತಿವರ್ಷ ವಿಶ್ವದಾದ್ಯಂತ ಚಹಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಹಿಂದೆ ಚಹಾ ಉತ್ಪಾದನಾ ರಾಷ್ಟ್ರಗಳಾದ ಭಾರತ, ಶ್ರೀಲಂಕಾ, ನೇಪಾಳ, ವಿಯೆಟ್ನಾಂ, ಇಂಡೋನೇಷ್ಯಾ, ಬಾಂಗ್ಲಾದೇಶ, ಕೀನ್ಯಾ, ಮಲಾವಿ, ಮಲೇಷ್ಯಾ, ಉಗಾಂಡಾ ಮತ್ತು ತಾಂಜಾನಿಯಾ ಅಂತರರಾಷ್ಟ್ರೀಯ ಚಹಾ ದಿನವನ್ನು ಆಚರಿಸುತ್ತಿದ್ದವು.

2015 ರಲ್ಲಿ ಮಿಲನ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಆಹಾರ ಮತ್ತು ಕೃಷಿ ಸಂಸ್ಥೆ (ಎಫ್‌ಎಒ) ಸಭೆಯಲ್ಲಿ ಭಾರತವು ಪ್ರತಿ ವರ್ಷ ಮೇ 21 ಅನ್ನು ಅಂತರರಾಷ್ಟ್ರೀಯ ಚಹಾ ದಿನವಾಗಿ ಆಚರಿಸಬೇಕೆಂಬ ಪ್ರಸ್ತಾಪ ಮುಂದಿಟ್ಟಿತ್ತು. ಅದರಂತೆ 15 ಡಿಸೆಂಬರ್ 2019 ರಂದು ವಿಶ್ವಸಂಸ್ಥೆಯು ಮೇ 21 ಅನ್ನು 'International Tea Day' ಎಂದು ಘೋಷಿಸಿತು.

ಚಹಾ ಉತ್ಪಾದನೆ ಮತ್ತು ಸಂಸ್ಕರಣೆಯು ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿನ ಲಕ್ಷಾಂತರ ಕುಟುಂಬಗಳಿಗೆ ಜೀವನೋಪಾಯದ ಮುಖ್ಯ ಮೂಲ ಮತ್ತು ಲಕ್ಷಾಂತರ ಬಡ ಕುಟುಂಬಗಳಿಗೆ ಜೀವನಾಧಾರವಾಗಿದೆ. ಚಹಾ ಉದ್ಯಮವು ಕೆಲವು ಬಡ ದೇಶಗಳಿಗೆ ರಫ್ತು ಆದಾಯದ ಮುಖ್ಯ ಮೂಲವಾಗಿದೆ. ಹಾಗೆಯೇ ಅನೇಕರಿಗೆ ಉದ್ಯೋಗವನ್ನು ಒದಗಿಸುತ್ತದೆ. ಅಷ್ಟೇ ಅಲ್ಲ, ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ಗ್ರಾಮೀಣಾಭಿವೃದ್ಧಿ, ಬಡತನ ನಿವಾರಣೆ ಮತ್ತು ಆಹಾರ ಸುರಕ್ಷತೆಯಲ್ಲಿ ಚಹಾ ಪ್ರಮುಖ ಪಾತ್ರ ವಹಿಸುತ್ತದೆ.

ಚಹಾ ಕುಡಿಯುವುದರಿಂದ ಸಿಗುವ ಲಾಭಗಳು:

ಚಹಾದಲ್ಲಿ ಆಂಟಿಆಕ್ಸಿಡೆಂಟ್‌ಗಳು, ಆಂಟಿ ಕ್ಯಾಟೆಚಿನ್‌ಗಳು ಮತ್ತು ಪಾಲಿಫಿನಾಲ್‌ ಅಂಶಗಳಿವೆ. ಇದು ನಮ್ಮ ದೇಹದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಗ್ರೀನ್ ಟೀ ದೇಹದಲ್ಲಿ ರೋಗ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಕೊಲೊರೆಕ್ಟಲ್ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಗಟ್ಟುವಲ್ಲಿ ಸಹಕಾರಿಯಾಗಿದೆ. ಅಪಧಮನಿಗಳ ಅಡಚಣೆಯನ್ನು ತಡೆಯಲು, ಕೊಬ್ಬನ್ನು ಕಡಿಮೆ ಮಾಡಲು, ಮೆದುಳಿನ ಮೇಲೆ ಆಕ್ಸಿಡೇಟಿವ್ ಒತ್ತಡದ ಕಡಿಮೆ ಮಾಡಲು, ಆಲ್ಜೈಮರ್ ಮತ್ತು ಪಾರ್ಕಿನ್ಸನ್​ನಂತಹ ಮೆದುಳಿನ ಕಾಯಿಲೆಗಳ ಅಪಾಯವನ್ನು ಕಡಿಮೆಗೊಳಿಸಲು ಚಹಾ ಪರಿಣಾಮಕಾರಿ. ಹಾಗೆಯೇ ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುವಲ್ಲಿ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು ಗ್ರೀನ್ ಟೀ ಸಹಾಯ ಮಾಡುತ್ತದೆ.

ಬ್ಲ್ಯಾಕ್ ಟೀಯಲ್ಲಿ ಅತಿ ಹೆಚ್ಚು ಕೆಫಿನ್ ಅಂಶವಿದೆ. ಇದು ಶ್ವಾಸಕೋಶವನ್ನು ಹಾನಿಯಾಗೊಳಗಾದಂತೆ ರಕ್ಷಿಸುತ್ತದೆ ಎಂಬುದು ಅಧ್ಯಯನದಿಂದ ತಿಳಿದು ಬಂದಿದೆ. ಹಾಗೆಯೇ ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಆದರೆ ಇದು ಕಾಫಿಗಿಂತ ಕಡಿಮೆ ಕೆಫಿನ್ ಅಂಶ ಹೊಂದಿರುತ್ತದೆ. ಇದನ್ನು ಕುಡಿಯುವುದರಿಂದ ನಿಮ್ಮ ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಸೋಂಕಿನ ವಿರುದ್ಧ ಹೋರಾಡಲು ಸಾಕಷ್ಟು ಸಹಾಯ ಮಾಡುತ್ತದೆ. ಚಹಾ ಕುಡಿಯುವುದರಿಂದ ಶೀತ ಮತ್ತು ಇನ್ನಿತರ ಸಾಮಾನ್ಯ ಸಮಸ್ಯೆಗಳು ದೂರವಾಗುತ್ತವೆ.
First published: May 21, 2020, 5:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories