IOCL recruitment 2019: ಪಿಯುಸಿ ಪಾಸಾದವರಿಗೆ ಇಂಡಿಯನ್ ಆಯಿಲ್ ಕಾರ್ಪೊರೇಶನ್​ನಲ್ಲಿ ಉದ್ಯೋಗಾವಕಾಶ

ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ವಸ್ತುನಿಷ್ಠ ಪ್ರಕಾರದ ಪ್ರಶ್ನೆಗಳು ಇರುತ್ತವೆ. ಪರೀಕ್ಷೆಯಲ್ಲಿ 100 ಅಂಕಗಳಿಗೆ 100 ಪ್ರಶ್ನೆಗಳನ್ನು ಕೇಳಲಾಗುತ್ತದೆ.

zahir | news18-kannada
Updated:November 15, 2019, 2:55 PM IST
IOCL recruitment 2019: ಪಿಯುಸಿ ಪಾಸಾದವರಿಗೆ ಇಂಡಿಯನ್ ಆಯಿಲ್ ಕಾರ್ಪೊರೇಶನ್​ನಲ್ಲಿ ಉದ್ಯೋಗಾವಕಾಶ
jobs
  • Share this:
IOCL recruitment 2019: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (Indian Oil) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ 380 ಹುದ್ದೆಗಳು ಖಾಲಿಯಿದ್ದು, ಈಗಾಗಲೇ ಅಪ್ಲಿಕೇಶನ್ ಸಲ್ಲಿಕೆ ಆರಂಭವಾಗಿದೆ.

ಈ ಹುದ್ದೆಗಳಿಗೆ ಪಿಯುಸಿ( 12ನೇ ತರಗತಿ) ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು 1 ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಗೆ ಒಳಪಡಿಸಲಾಗುತ್ತದೆ. ಈ ನೇಮಕಾತಿ ಪ್ರಕ್ರಿಯೆಯ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಗಳ ಸಂಖ್ಯೆ:

380 ಪೋಸ್ಟ್​ಗಳು

ವಿದ್ಯಾರ್ಹತೆ:
ಪಿಯುಸಿ (12ನೇ ತರಗತಿ) ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
Loading...

ಅರ್ಜಿದಾರನ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ ವಯಸ್ಸು 24 ವರ್ಷಗಳಾಗಿರಬೇಕು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಲಿಖಿತ ಪರೀಕ್ಷೆಯಲ್ಲಿ ವಸ್ತುನಿಷ್ಠ ಪ್ರಕಾರದ ಪ್ರಶ್ನೆಗಳು ಇರುತ್ತವೆ.
ಪರೀಕ್ಷೆಯಲ್ಲಿ 100 ಅಂಕಗಳಿಗೆ 100 ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಪರೀಕ್ಷೆಯನ್ನು ಪೂರ್ಣಗೊಳಿಸಲು ಅಭ್ಯರ್ಥಿಗಳಿಗೆ 2 ಗಂಟೆ ಕಾಲಾವಕಾಶ ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್​ನ ಅಧಿಕೃತ ವೆಬ್‌ಸೈಟ್ indianoilpipelines.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ನವೆಂಬರ್ 22, 2019

ಮತ್ತಷ್ಟು ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

(ವಿ.ಸೂ: ಕೆಲವೊಂದು ಆ್ಯಪ್​ಗಳಲ್ಲಿ ಲಿಂಕ್ ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ News18 Kannada App ಡೌನ್​ಲೋಡ್​ ಮಾಡುವ ಮೂಲಕ ನಿಮ್ಮ ಲಿಂಕ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು)

First published:November 15, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...