ಇಂಡಿಯನ್ ಆಯಿಲ್ ಸಂಸ್ಥೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

IOCL Recruitment 2019: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್ iocl.com ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

zahir | news18-kannada
Updated:October 9, 2019, 4:17 PM IST
ಇಂಡಿಯನ್ ಆಯಿಲ್ ಸಂಸ್ಥೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
  • Share this:
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (IOCL) ಜೂನಿಯರ್ ಇಂಜಿನಿಯರಿಂಗ್ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಕ್ಟೋಬರ್ 10 ರಿಂದ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು ಅಕ್ಟೋಬರ್ 30 ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಇದಕ್ಕಾಗಿ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್​ನ ಅಧಿಕೃತ ವೆಬ್​ಸೈಟ್ iocl.com ಗೆ ಭೇಟಿ ನೀಡಿ ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

ಹುದ್ದೆಯ ಹೆಸರು:

ಜೂನಿಯರ್ ಇಂಜಿನಿಯರಿಂಗ್ ಸಹಾಯಕ

ಒಟ್ಟು ಹುದ್ದೆಗಳ ಸಂಖ್ಯೆ:
38 ಹುದ್ದೆಗಳು.

ಇದನ್ನೂ ಓದಿ: ಕನ್ನಡ ಚಿತ್ರನಟನ ಮಗಳೊಂದಿಗೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಲವ್ವಿ-ಡವ್ವಿ?
Loading...

ವಿದ್ಯಾರ್ಹತೆ:
ಅರ್ಜಿದಾರನು ಕೆಮಿಕಲ್ / ರಿಫೈನಿಂಗ್ ಮತ್ತು ಪೆಟ್ರೋಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ ಅಥವಾ ಗಣಿತ, ವಿಜ್ಞಾನ, ಭೌತಶಾಸ್ತ್ರ, ರಸಾಯನಶಾಸ್ತ್ರ ಅಥವಾ ಕೈಗಾರಿಕಾ ರಸಾಯನಶಾಸ್ತ್ರದಲ್ಲಿ ಬಿಎಸ್ಸಿ ಪದವಿ ಪಡೆದಿರಬೇಕು.

ವಯೋಮಿತಿ:
ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ ವಯಸ್ಸು 26 ವರ್ಷಗಳು ಆಗಿರಬೇಕು. ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನಲ್ಲಿ ವಿನಾಯಿತಿ ನೀಡಲಾಗುತ್ತದೆ.

ಆಯ್ಕೆ ಹೇಗೆ?
ಲಿಖಿತ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯನ್ನು 10 ನವೆಂಬರ್ 2019 ರಂದು ನಡೆಸುವ ಸಾಧ್ಯತೆಯಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಅಧಿಕೃತ ವೆಬ್‌ಸೈಟ್ www.iocl.com ಗೆ ಭೇಟಿ ನೀಡಿ ಅಕ್ಟೋಬರ್ 10 ರಿಂದ ಅ.30ರೊಳಗೆ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
First published:October 9, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...