Sarkari Naukri: ಇಸ್ರೋ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

Sarkari Naukri: ಈ ಹುದ್ದೆಗಳಿಗೆ ಆನ್​ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಇಸ್ರೋ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಪ್ಲಿಕೇಶನ್ ಹಾಕಬಹುದು.

zahir | news18-kannada
Updated:September 12, 2019, 2:43 PM IST
Sarkari Naukri: ಇಸ್ರೋ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ
ಸಾಂದರ್ಭಿಕ ಚಿತ್ರ
zahir | news18-kannada
Updated: September 12, 2019, 2:43 PM IST
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತಂತ್ರಜ್ಞ ಮತ್ತು ಇತರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ನೂತನ ನೇಮಕಾತಿ ಪ್ರಕಟಣೆಯಲ್ಲಿ ಒಟ್ಟು 86 ಹುದ್ದೆಗಳು ಖಾಲಿಯಿದ್ದು, ಸೆ.13ರೊಳಗೆ ಅರ್ಜಿ ಸಲ್ಲಿಸಬೇಕೆಂದು ಇಸ್ರೋ ತಿಳಿಸಿದೆ. ಇನ್ನು ಈ ಹುದ್ದೆಗಳಿಗೆ ಆನ್​ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತರು ಇಸ್ರೋ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಪ್ಲಿಕೇಶನ್ ಹಾಕಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

ಹುದ್ದೆಯ ಹೆಸರು ಮತ್ತು ಒಟ್ಟು ಸಂಖ್ಯೆ
ಫಿಟ್ಟರ್ - 20 ಹುದ್ದೆಗಳು

ಎಲೆಕ್ಟ್ರಿಷಿಯನ್ ಮೆಕ್ಯಾನಿಕ್ - 15 ಹುದ್ದೆಗಳು
ಪ್ಲಂಬರ್ - 2 ಹುದ್ದೆಗಳು
ವೆಲ್ಡರ್ - 01 ಹುದ್ದೆ
ಮೆಕಾನಿಸ್ಟ್​ - 01 ಹುದ್ದೆ
Loading...

ಡ್ರೌಟ್​ನೈನ್ ಬಿ - 12 ಹುದ್ದೆಗಳು
ತಾಂತ್ರಿಕ ಸಹಾಯಕ - 35 ಹುದ್ದೆಗಳು

ಅರ್ಹತೆ:
ತಂತ್ರಜ್ಞ / ಡ್ರಾಫ್ಟ್‌ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ 10 ಅಥವಾ 12ನೇ ತರಗತಿ ಪಾಸ್ ಆಗಿರಬೇಕು. ಅಲ್ಲದೆ, ಐಟಿಐ / ಎಂಟಿಸಿ / ಎಂಎಸಿ ಪ್ರಮಾಣಪತ್ರವನ್ನು ಹೊಂದಿರಬೇಕು. ಅದೇ ಸಮಯದಲ್ಲಿ, ತಾಂತ್ರಿಕ ಸಹಾಯಕನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು  ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 35 ವರ್ಷಗಳು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವೇತನ:
ತಂತ್ರಜ್ಞ / ಡ್ರಾಫ್ಟ್‌ಮ್ಯಾನ್ - 21,700 ರೂ.
ತಾಂತ್ರಿಕ ಸಹಾಯಕ - 44,900 ರೂ.

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಇಸ್ರೋ ಸಂಸ್ಥೆಯ ಅಧಿಕೃತ ವೆಬ್‌ಸೈಟ್ www.isro.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
First published:September 12, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...