HOME » NEWS » Lifestyle » JOIN INDIAN NAVY 2021 APPLY FOR 2500 A2500 SAILOR POSTS HG

Indian Navy Recruitment 2021: 2500 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪಿಯುಸಿ ಉತ್ತೀರ್ಣರಾದವರಿಗೆ ಅವಕಾಶ

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

news18-kannada
Updated:April 23, 2021, 1:31 PM IST
Indian Navy Recruitment 2021: 2500 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪಿಯುಸಿ ಉತ್ತೀರ್ಣರಾದವರಿಗೆ ಅವಕಾಶ
Indian Navy (ಫೋಟೋ: ಗೂಗಲ್)
  • Share this:
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 2500 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಆರ್ಜಿ ಸಲ್ಲಿಸಲು ತಿಳಿಸಿದೆ. ಏಪ್ರಿಲ್ 30,2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ: 12ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವೇತನ:
ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ:ಭಾರತೀಯ ನೌಕಾಪಡೆಯ ನಾವಿಕ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ತೆರಳಿ ಅಧಿಕೃತ ವೆಬ್‌ಸೈಟ್ https://www.joinindiannavy.gov.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು. ಏಪ್ರಿಲ್ 26 ರಿಂದ ಅರ್ಜಿಸಲ್ಲಿಸಲು ಅವಕಾಶ ನೀಡಲಾಗಿದೆ. ಏಪ್ರಿಲ್ 30,2021 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
Published by: Harshith AS
First published: April 23, 2021, 1:31 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories