ಕರ್ನಾಟಕ ರಾಜ್ಯ ಬಜೆಟ್ 2023ರಲ್ಲಿ (Karnataka Budget 2023) ಪ್ರವಾಸೋದ್ಯಮ ಇಲಾಖೆಗೆ (Tourism Department) ಏನೇನು ಸಿಕ್ಕಿದೆ? ರಾಜ್ಯದ ಯಾವ ಪ್ರದೇಶದಲ್ಲಿ ಯಾವ ಪ್ರವಾಸೋದ್ಯಮ ತಾಣಕ್ಕೆ ಏನೇನು ಘೋಷಿಸಲಾಗಿದೆ? ಯಾವ್ಯಾವ ಪ್ರವಾಸೋದ್ಯಮ ಸ್ಥಳಕ್ಕೆ ಯಾವ್ಯಾವ ಸೌಲಭ್ಯಗಳನ್ನು (Facilities) ಘೋಷಿಸಲಾಗಿದೆ? ಈ ಎಲ್ಲ ಡೀಟೆಲ್ಸ್ ಇಲ್ಲಿದೆ. ಬಹಳಷ್ಟು ನಿರೀಕ್ಷೆಗಳ ಮಧ್ಯೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ (Budget) ಮಂಡಿಸಿದ್ದಾರೆ. ಈ ಸಂದರ್ಭ ಪ್ರವಾಸೋದ್ಯಮಕ್ಕೆ ಏನೇನು ಘೋಷಿಸಿದ್ದಾರೆ? ನಿಮ್ಮ ಊರಿನ ಪ್ರವಾಸಿ ತಾಣಕ್ಕೆ ಏನಾದರೂ ಸಿಕ್ಕಿದೆಯಾ? ಯಾವ್ಯಾವ ಸೌಲಭ್ಯಗಳಿವೆ?
ಕೊಪ್ಪಳ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಏನಿದೆ?
ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಮೂಲ ಸೌಕರ್ಯ ಒದಗಿಸಲು 100 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ ಯೋಜನೆ ಮಾಡಲಾಗಿದೆ. ಇದಕ್ಕೆ ಟೆಂಡರ್ ಕೂಡಾ ಕರೆಯಲಾಗಿದೆ.
ಇದನ್ನೂ ಓದಿ: Karnataka Budget 2023 Live Updates: ಕೊನೆಗೂ ನನಸಾದ ಉತ್ತರ ಕನ್ನಡ ಜನರ ಕನಸು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ
ಕರಾವಳಿಗೆ ಏನು ಸಿಕ್ಕಿದೆ?
ಕರಾವಳಿ ವಲಯ ನಿರ್ವಹಣೆ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಈ ಮೂಲಕ ಧಾರ್ಮಿಕ , ಸಾಹಸ, ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೂಪುರೇಷೆಗಳನ್ನೂ ತಯಾರಿಸಲಾಗುತ್ತದೆ.
ಪ್ರಸಾದ ಯೋಜನೆಯಡಿ ಚಾಮುಂಡಿ ಬೆಟ್ಟದ ಸಮುಗ್ರ ಅಭಿವೃದ್ಧಿ
ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಹಾಗೂ ಸ್ವದೇಶ್ ದರ್ಶನ್ 2.0 ಅಡಿಯಲ್ಲಿ ಹಂಪಿಯ ಸ್ಮಾರಕ ಅಭಿವೃದ್ಧಿ ಮಾಡಲಾಗುತ್ತದೆ. ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಶಾಶ್ವತ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇದಕ್ಕೆ ಬೇಕಾದ ಯೋಜನೆಗಳನ್ನು ಮಂಜೂರು ಮಾಡಲಾಗಿದೆ.
ರಾಮನಗರದಲ್ಲಿ ರಾಮ ಮಂದಿರ
ರಾಮನಗರದಲ್ಲಿರುವಂತಹ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮ ಮಂದಿರನ್ನು ನಿರ್ಮಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿ ಈ ಬಾರಿಯ ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ.
ಮಂಚನಬೆಲೆ ಜಲಾಶಯ ಹಿನ್ನೀರಿನಲ್ಲಿ 10 ಎಕರೆ ಪ್ರದೇಶದಲ್ಲಿ 10 ಕೋಟಿ ವೆಚ್ಚದಲ್ಲಿ ಜಂಗಲ್ ಲಾಡ್ಜಸ್ ಹಾಗೂ ರೆಸಾರ್ಟ್ ಲಿಮಿಟೆಡ್ ಮೂಲಕ ರೆಸಾರ್ಟ್ ನಿರ್ಮಾಣ
ಪ್ರವಾಸಿ ಸರ್ಕಿಟ್
ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕುರುಹುಗಹಳಿರುವ ತಾಣಗಳ ಪ್ರವಾಸಿ ಸರ್ಕಿಟ್ ಅನ್ನು ಈ ವರ್ಷವೇ ಆರಂಭಿಸಲಾಗುತ್ತದೆ.
ದಾವಣಗೆರೆಗೆ ಏನು ಸಿಕ್ತು?
ಸಂತ ಸೇವಾ ಲಾಲ್ ಅವರ ಜನ್ಮಸ್ಥಳವಾದ ದಾವಣಗೆರೆ ಜಿಲ್ಲೆಯ ಸೂರಗೊಂಡನಕೊಪ್ಪವನ್ನು ಅಭಿವೃದ್ಧಿಪಡಿಸಲಾಗುತ್ತದೆ. ಸುಮಾರು 5 ಕೋಟಿ ವೆಚ್ಚದಲ್ಲಿ ಪ್ರವಾಸಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಚನ್ನಗಿರಿ ತಾಲೂಕಿನ ಹೊದಿಗೆರೆಯಲ್ಲಿರುವ ಷಹಾಜಿ ಮಹಾರಾಜ್ ಸಮಾಧಿ ಸ್ಥಳವನ್ನು 5 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಡಿಸಲಾಗುತ್ತದೆ. ಇದರೊಂದಿಗೆ ಮೂಲಸೌಲಭ್ಯಗಳನ್ನು ನೀಡಲಾಗುತ್ತದೆ.
ಚಿಕ್ಕಬಳ್ಳಾಪುರಕ್ಕೆ ಏನಿದೆ?
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣ ಕಾಮಗಾರಿ ಈ ವರ್ಷ ಪೂರ್ಣಗೊಳ್ಳಲಿದೆ.
ಟೂರಿಸ್ಟ್ ಗೈಡ್ಗಳ ಪ್ರೋತ್ಸಾಹ ಧನ 3000 ಹೆಚ್ಚಳ
ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 398 ಜನ ರಿಜಿಸ್ಟರ್ಡ್ ಟೂರಿಸ್ಟ್ ಗೈಡ್ಗಳಿಗೆ 2000 ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಅದರಲ್ಲಿ ಮೂರು ಸಾವಿರ ಹೆಚ್ಚಳ ಮಾಡಿ 5000 ರೂಪಾಯಿ ನೀಡಲಾಗುತ್ತದೆ. ಇದಕ್ಕಾಗಿ 1.10 ಕೋಟಿ ರೂಪಾಯಿ ನೀಡಲಾಗಿದೆ.
ಯಾವ್ಯಾವ ಸ್ಥಳ ಅಭಿವೃದ್ಧಿ
* ವಿಜಯ ವಿಠಲ ದೇವಾಲಯ
* ಪುರಂದರ ಮಂಟಪ
* ವಿಜಯಪುರದ ಗೋಲ್ ಗುಂಬಜ್
* ಚಿಕ್ಕಬಳ್ಳಾಪುರದ ಭೋಗನಂದೀಶ್ವರ ದೇವಾಲಯ
* ಬಾದಾಮಿ ಗುಹೆಗಳು
* ಕಿತ್ತೂರು, ಬೀದರ್ ಕೋಟೆಗಳು
ಪ್ರವಾಸಿ ಸ್ಥಳದಲ್ಲಿ 3D ಪ್ರೊಜೆಕ್ಷನ್ ಮ್ಯಾಪಿಂಗ್, ಲೈಟ್ & ಸೌಂಡ್ ಶೋಗಳನ್ನು ಏರ್ಪಡಿಸುವುದು. ಇದಕ್ಕಾಗಿ 60 ಕೋಟಿ ರೂ ಒದಗಿಸಲಾಗುತ್ತದೆ.
ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ
ಕೊಪ್ಪಳದ ಆನೆಗುಂದಿಯ ಗಗನ್ ಮಹಲ್ ಮತ್ತು ವಿಜಯಪುರದ ತಾಜ್ ಬಾವಡಿ ಸ್ಮಾರಕ ರಕ್ಷಣೆಗೆ ಖಾಸಗಿ ಸಂಸ್ಥೆಗಳೊಂದಿಗೆ ಒಪ್ಪಂದ.
10 ಕೋಟಿ ವೆಚ್ಚದ ವಸ್ತು ಸಂಗ್ರಹಾಲಯ
ಮೈಸೂರಿನ ಪಾರಂಪರಿಕ ಕಟ್ಟಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಚಾಮುಂಡಿ ವಿಹಾರ ಕ್ರೀಡಾಂಗಣದ ಸಮೀಪ ಎರಡೂವರೆ ಎಕರೆ ಜಾಗದಲ್ಲಿ ಇಂಟರ್ನ್ಯಾಷನಲ್ ವಸ್ತು ಸಂಗ್ರಹಾಲಯ ನಿರ್ಮಾಣ ಮಾಡಲಾಗುತ್ತದೆ. ಇದಕ್ಕಾಗಿ 10 ಕೋಟಿ ಬಳಸಲಾಗುತ್ತದೆ.
ಹೊನ್ನಾವರದಲ್ಲಿ ಚೆನ್ನಭೈರಾದೇವಿ ಸ್ಮಾರಕ ಉದ್ಯಾನ ನಿರ್ಮಾಣ ಮಾಡಲಾಗುತ್ತದೆ. ರೋರಿಚ್ ದೇವಿಕಾರಾಣಿ ಎಸ್ಟೇಟ್ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲಾಗುತ್ತದೆ.
ಗಾಣಗಾಪುರ ದತ್ತಾತ್ರೇಯ ದೇವಾಲಯ
ಸನ್ನತಿ-ಚಂದ್ರಲಾಂಬಾ ದೇವಾಲಯ ಹಾಗೂ ಗಾಣಗಾಪುರ ದತ್ತಾತ್ರೇಯ ದೇವಾಲಯ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಬನವಾಸಿಯ ಮಧುಕೇಶ್ವರ ದೇವಾಲಯ ಸಂಕೀರ್ಣಗಳ ಸಮಗ್ರ ಅಭಿವೃದ್ಧಿಗಾಗಿ ಅನುದಾನ ಒದಗಿಸಲಾಗುತ್ತದೆ.
ಮಳಖೇಡ ಕೋಟೆ ಸಂರಕ್ಷಣೆ ಕಾಮಗಾರಿ
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನಲ್ಲಿರುವ ಮಳಖೇಡ ಕೋಟೆ ಸಂರಕ್ಷಣೆ ಕಾಮಗಾರಿಯನ್ನು 20 ಕೋಟಿ ರೂ. ಗಳ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಪ್ರಸಕ್ತ ವರ್ಷದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತದೆ.
ಕರ್ನಾಟಕದ ಇತಿಹಾಸದ ಪ್ರಮುಖ ಘಟನಾವಳಿಗಳಲ್ಲಿ ತಾಳಿಕೋಟೆ ಯುದ್ಧವೂ ಸೇರಿದೆ. ಈ ಹಿನ್ನೆಲೆಯಲ್ಲಿ ರಕ್ಕಸಗಿ, ತಂಗಡಗಿ ಮತ್ತು ತಾಳಿಕೋಟೆ ಸುತ್ತಲಿನ ಐತಿಹಾಸಿಕ ಪ್ರಸಿದ್ಧ ತಾಣಗಳನ್ನು ಯುವಜನರಿಗೆ ಪರಿಚಯಿಸುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ