Karnataka Forest Department 2020: ದ್ವಿತೀಯ ಪಿಯುಸಿ ಪಾಸಾದವರಿಗೆ ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಉದ್ಯೋಗವಕಾಶ

ಅರಣ್ಯ ರಕ್ಷಕ ಹುದ್ದೆಗಳನ್ನು ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

job

job

 • Share this:
  ಕರ್ನಾಟಕ ಅರಣ್ಯ ಇಲಾಖೆ ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗ್ಗೆ ತಿಳಿದು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 327+12(ಬ್ಯಾಕ್​ಲಾಗ್​)= 399 ಅರಣ್ಯ ರಕ್ಷಕ ಹುದ್ದೆಗಳಿಗೆ ಖಾಲಿ ಇವೆ. ಏಪ್ರಿಲ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿ ತಿಳಿಸಿದೆ.

  ವಿದ್ಯಾರ್ಹತೆ:

  ಅರಣ್ಯ ರಕ್ಷಕ ಹುದ್ದೆಗಳನ್ನು ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

  ವಯೋಮಿತಿ:

  ಕನಿಷ್ಟ 18 ರಿಂದ ಗರಿಷ್ಟ 32 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

  ವೇತನದ ವಿವರ:

  ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

  ಆಯ್ಕೆ ಪ್ರಕ್ರಿಯೆ:

  ಅಭ್ಯರ್ಥಿಗಳನ್ನು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿಧ್ಯಾರ್ಃತೆ ಪಡೆದ ಅಂಕಗಳ ಮೆರಿಟ್​​ ಮತ್ತು ಪ್ರವರ್ ವಾರು ಮೀಸಲಾತಿ ಆಧಾರದ ಆಯ್ಕೆ ನಡೆಸಲಾಗುತ್ತದೆ. ಜೊತೆಗೆ ಅರ್ಹ ಆಭ್ಯರ್ಥಿಗಳನ್ನು ದೇಹದಾಡ್ಯತೆ ಮತ್ತು ದೈಹಿಕ ಕಾರ್ಯಸಮರ್ಥತೆ ಮೇಲೆ ಪರೀಕ್ಷೆಗಳಿಗೆ ಪ್ರವೇಶ್ ಪತ್ರ ನೀಡಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.

  ಅರ್ಜಿ ಶುಲ್ಕ:

  ಸಾಮಾನ್ಯ ವರ್ಗ 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100ರೂ+ಸೇವಾ ಶುಲ್ಕ 20 ರೂ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಮತ್ತು ಕುಷ್ಠ ರೋಗದಿಂದ ಗುಣಮುಖಹೊಂದಿದ ಅಂಗವಿಕಲ ಅಭ್ಯರ್ಥಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 25 ರೂ + ಸೇವಾ ಶುಲ್ಕ 20 ರೂ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಮುದ್ರಿತ ಅಂಚೆ ಚಲನ್ ಪ್ರತಿಯನ್ನು ತೆಗೆದುಕೊಂಡು, ಇ-ಪಾವತಿ ಸೌಲಭ್ಯವಿರುವ ಅಂಚೆ ಕಚೇರಿಯಲ್ಲಿ ತೋರಿಸಿ, ಈ ಮೇಲೆ ತಿಳಿಸಿರುವ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸತಕ್ಕದ್ದು. ಅರ್ಜಿ ಶುಲ್ಕವನ್ನು ಏಪ್ರಿಲ್ 17, 2020ರ ಮಧ್ಯಾಹ್ನ 2:30ರೊಳಗೆ ಪಾವತಿಸಬೇಕಿರುತ್ತದೆ.

  ಅರ್ಜಿ ಸಲ್ಲಿಕೆ:

  ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಏಪ್ರಿಲ್​ 15, 2020ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

  ಹೆಚ್ಚಿನ ಮಾಹಿತಿಗೆ ಈ ಲಿಂಕ್​ ಕ್ಲಿಕ್​ ಮಾಡಿ
  First published: