HOME » NEWS » Lifestyle » KARNATAKA PSI RECRUITMENT 2021 ONLINE APPLICATION EXTENDED FOR 402 SI POSTS HG

KSP Recruitment 2021: 402 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಸೇವೆಯಲ್ಲಿರುವವರು ಒಳಗೊಂಡಂತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

news18-kannada
Updated:May 5, 2021, 8:53 PM IST
KSP Recruitment 2021: 402 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
JOB
  • Share this:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 402 ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೇವೆಯಲ್ಲಿರುವವರು ಒಳಗೊಂಡಂತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ: ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಟ 21 ರಿಂದ ಇತರೆ ವರ್ಗದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸೇವಾನಿರತ ಅಭ್ಯರ್ಥಿಗಳಿಗೆ: ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಟ 40 ವರ್ಷ ಇತರೆ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷಗಳು.

ವೇತನ: ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 37,900-ರಿಂದ 70,850-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ ಹೇಗೆ?: ಸಬ್‌-ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 500-ರೂ  ನೀಡಬೇಕುಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 250-ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ಅನ್ನು ಇಟ್ಟುಕೊಂಡಿರತಕ್ಕದ್ದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಕೊನೆಯ ದಿನಾಂಕ ಅರ್ಜಿ ಶುಲ್ಕವನ್ನು ಪಾವತಿಸಲು ಮೇ 24,2021 ಕೊನೆಯ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?: ಆಸಕ್ತರು ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್  https://recruitment.ksp.gov.in/index ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಮೇ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
First published: May 5, 2021, 8:50 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories