KPSC Recruitment 2020: ಕರ್ನಾಟಕ ಲೋಕಸೇವಾ ಆಯೋಗವು ಲೋಕೋಪಯೋಗಿ ಇಲಾಖೆಯಲ್ಲಿನ 990 ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್ಸೈಟ್ಗೆ ತೆರಳಿ ಅಧಿಸೂಚನೆಗಳನ್ನು ಓದಿ ನಂತರ ಅರ್ಜಿ ಸಲ್ಲಿಸಬೇಕಾಗಿ ತಿಳಿಸಿದೆ. ಸೆಪ್ಟೆಂಬರ್ 16ರವರೆಗೆ ಅರ್ಜಿಸಲ್ಲಿಸಲು ಸಮಯವಕಾಶವನ್ನು ನೀಡಿದೆ.
ವಿದ್ಯಾರ್ಹತೆ:
ಲೋಕೋಪಯೋಗಿ ಇಲಾಖೆಯಲ್ಲಿನ 990 ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ವೃಂದದ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಆಭ್ಯರ್ಥಿಗಳು ಬಿ.ಇ/ಬಿ.ಟೆಕ್/ಪದವಿ/ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಪಡೆದಿರಬೇಕು.
ವಯೋಮಿತಿ:
ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು ಎಮದು ಅಧಿಸೂಚನೆಯಲ್ಲಿ ತಿಳಿಸಿದೆ. ಹಿಂದುಳಿದ ವರ್ಗಗಳಿಗೆ ಗರಿಷ್ಟ 38 ವರ್ಷ ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದಾಗಿದೆ.
ವೇತನದ ವಿವರ:
-ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,100/- ರಿಂದ 83,900/-ರೂ ವೇತನ ಸಿಗಲಿದೆ
-ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 600/-ರೂ ಪಾವತಿಸಬೇಕು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಸೆಪ್ಟೆಂಬರ್ 18,2020ರೊಳಗೆ ಪಾವತಿಸಬೇಕು. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್
http://www.kpsc.kar.nic.in/indexk.html ಗೆ ಭೇಟಿ ನೀಡುವ ಮೂಲಕ ಅಲ್ಲಿ ನೀಡಲಾಡಗಿರು ಅಧಿಸೂಚನೆಯನ್ನು ಓದಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು:
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 16,2020
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 18,2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ