ಕರ್ನಾಟಕ ಲೋಕಸೇವಾ ಆಯೋಗ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ 'ಬಿ' ಮತ್ತು ಗ್ರೂಪ್ 'ಸಿ' ತಾಂತ್ರಿಕ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಸುಮಾರು 990 ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಆನ್ಲೈನ್ ಮೂಲಕ ಸರ್ಜಿ ಸಲ್ಲಿಸಬಹುದಾಗಿದ್ದು, 16/9/2020 ಕೊನೆಯ ದಿನವಾಗಿದೆ.
ಲೋಕೋಪಯೋಗಿ ಇಲಾಖೆಯ ಗ್ರೂಪ್ ‘ಬಿ’ನಲ್ಲಿಸಹಾಯಕ ಇಂಜಿನಿಯರ್ (ಗ್ರೇಡ್ 1) (ಸಿವಿಲ್), ಗ್ರೂಪ್ ‘ಸಿ’ನಲ್ಲಿ ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಒಂದಕ್ಕಿಂತ ಹೆಚ್ಚು ಹುದ್ದೆಗೆ ಅರ್ಜಿ ಸಲ್ಲಿಸುವವರು ಪ್ರತಿ ಹುದ್ದೆಗೆ ಪ್ರತ್ಯೇಕ ಅರ್ಜಿ ಸಲ್ಲಿಸಿ ಒಂದೇ ಶುಲ್ಕವನ್ನು ಪಾವತಿಸಬೇಕಿದೆ.
ವಯೋಮಿತಿ:
ಅರ್ಜಿ ಸಲ್ಲಿಸುವವರ ಕನಿಷ್ಠ ವಯೋಮಿತಿ 18 ವರ್ಷ. ಗರಿಷ್ಠ ವಯೋಮಿತಿ 35 ವರ್ಷದ ಒಳಗಿರಬೇಕು. ಇನ್ನು ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪ.ಜಾ, ಪ.ಪಂಗಡ ಪ್ರವರ್ಗ 1ರ ಅಭ್ಯರ್ಥ್ಯಿಗಳಿಗೆ 40 ವರ್ಷವಾಗಿರಬೇಕು. ನಿರ್ದಿಷ್ಟ ದಿನಾಂಕದ ಒಳಗೆ ಆಸಕ್ತರು ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಹತೆ:
ಅನುಸೂಚಿಯ ಆಧಾರದಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ ಶುಲ್ಕ ನಿಗದಿ ಮಾಡಲಾಗಿದೆ. ಎಸ್ಸಿ/ಎಸ್ಟಿ/ಪ್ರವರ್ಗ 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಮಾಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ