KSP Recruitment 2020: ಸಬ್ ಇನ್​​​​​ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

KSP Recruitment 2020: ಪದವಿ ವಿದ್ಯಾರ್ಹತೆ ಮತ್ತು ದೈಹಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

news18-kannada
Updated:May 30, 2020, 10:41 PM IST
KSP Recruitment 2020: ಸಬ್ ಇನ್​​​​​ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Job
  • Share this:
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 162 ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ವಿಶೇಷ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್ ಮತ್ತು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಮೇ 26, 2020 ರಿಂದ ಜೂನ್ 26, 2020ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ:

ಪದವಿ ವಿದ್ಯಾರ್ಹತೆ ಮತ್ತು ದೈಹಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಬ್‌ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಖಾಲಿ ಇರುವ ಹುದ್ದೆಗಳ ವಿವರ:

ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ 45 ಹುದ್ದೆಗಳು

ವಿಶೇಷ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ 40 ಹುದ್ದೆಗಳು

ಸಬ್ ಇನ್‌ಸ್ಪೆಕ್ಟರ್ 51 ಹುದ್ದೆಗಳುಪೊಲೀಸ್ ಸಬ್ ಇನ್‌ಸ್ಪೆಕ್ಟರ್ 26 ಹುದ್ದೆಗಳು

ವಯೋಮಿತಿ:

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ ನಿಯಮಾನುಸಾರ ಅರ್ಹ ಅಭ್ಯರ್ಥಿಗಳು ವಯೋಮಿತಿ ಆಧಾರ ಮೇಲೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:

ಮೊದಲಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

 ಅರ್ಜಿ ಶುಲ್ಕ:

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿದಾರರು ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಅನ್​ಲೈನ್​ನಲ್ಲಿ ಅಧಿಕೃತ ವೆಬ್​ಸೈಟ್​​  ಭೇಟಿ ನೀಡಿ. ಅಲ್ಲಿ ನೀಡಿರುವ ಮಾಹಿತಿಯನ್ನು ಓದ, ಭರ್ತಿ ಮಾಡಬೇಕು. ಜೂನ್​ 26ರೊಳಗೆ ಅರ್ಜಿಯನ್ನು ಆನ್​ಲೈನ್​ ಮೂಲಕ ಸಲ್ಲಿಬೇಕು.

ಆನ್​ಲೈನ್​​ನಲ್ಲಿ ಅಧಿಕೃತ ವೆಬ್​ಸೈಟ್​ಗೆ http://rec20.ksp-online.in/ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 26, 2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

‘ಖೇಲ್​ ರತ್ನ‘ ಪ್ರಶಸ್ತಿಗೆ ಹಿಟ್​ ಮ್ಯಾನ್​ ರೋಹಿತ್​​ ನಾಮನಿರ್ದೇಶನ; ಅರ್ಜುನ ಪ್ರಶಸ್ತಿಗೆ ಈ ಮೂರು ಪ್ಲೇಯರ್ಸ್​​
First published: May 30, 2020, 10:39 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading