10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ: 3026 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

KSP Recruitment: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ 18 ವರ್ಷಗಳಿಂದ 25 ವರ್ಷದೊಳಗಿನವರು ಅರ್ಜಿ ಸಲ್ಲಸಬಹುದು. ಎಸ್​ಟಿ/ಎಸ್​ಸಿ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇದೆ.

zahir | news18-kannada
Updated:September 24, 2019, 11:42 AM IST
10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ: 3026 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs
zahir | news18-kannada
Updated: September 24, 2019, 11:42 AM IST
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ವಿಭಾಗದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR ) ಮತ್ತು ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಹುದ್ದೆಗಳ ನೇರ ನೇಮಕಾತಿ ನಡೆಯಲಿದ್ದು, ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರ:
ಒಟ್ಟು ಹುದ್ದೆಗಳು- 3026

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR /DAR) ಪುರುಷ : 1013
ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಪುರುಷ ಮತ್ತು ಮಹಿಳಾ: 2013

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ- 250 ರೂ.
Loading...

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ- 100 ರೂ.

ವಯೋಮಿತಿ:
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ 18 ವರ್ಷಗಳಿಂದ 25 ವರ್ಷದೊಳಗಿನವರು ಅರ್ಜಿ ಸಲ್ಲಸಬಹುದು. ಎಸ್​ಟಿ/ಎಸ್​ಸಿ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ಇದೆ. ಅದೇ ರೀತಿ 30 ವರ್ಷದೊಳಗಿನ ಬುಡಕಟ್ಟು ಜನಾಂಗ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಹುದ್ದೆಗಳಿಗೆ 19 ವರ್ಷದಿಂದ 25 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಇನ್ನು ಎಸ್​ಟಿ/ಎಸ್​ಸಿ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷಗಳವರೆಗೆ ಮತ್ತು ಬುಡಕಟ್ಟು ಜನಾಂಗ ಅಭ್ಯರ್ಥಿಗಳಿಗೆ 30 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವಿದ್ಯಾರ್ಹತೆ:
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಪ್ರಮಾಣ ಪತ್ರ ಪಡೆದಿರಬೇಕು.
ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಪ್ರಮಾಣ ಪತ್ರ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಹಾಗೂ ದೇಹದಾರ್ಡ್ಯತೆ ಪರೀಕ್ಷೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆಗಳ ಪರಿಶೀಲನೆಯೊಂದಿಗೆ ನೇಮಕಾತಿ ನಡೆಯಲಿದೆ.

ಇದನ್ನೂ ಓದಿ:  ಮತ್ತೊಮ್ಮೆ ಮಾದಕ ಮೈಮಾಟದಿಂದ ಪಡ್ಡೆಗಳ ನಿದ್ದೆಗೆಡಿಸಿದ ಸನ್ನಿ ಲಿಯೋನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭ: ಸೆಪ್ಟೆಂಬರ್ 23, 2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 17, 2019
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 19, 2019

ಹೆಚ್ಚಿನ ಮಾಹಿತಿ:
ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ವೆಬ್​ಸೈಟ್​ www.ksp.gov.in ಗೆ ಭೇಟಿ ನೀಡಬಹುದು.
First published:September 24, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...