Health Tips: ಆರೋಗ್ಯಕರ ಹೃದಯಕ್ಕಾಗಿ ಜೀವನ ಶೈಲಿಯಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಿ..!

ನೀವು ಹೃದಯ ರಕ್ತನಾಳದ ಕಾಯಿಲೆಯನ್ನು ದೂರವಿಡಲು ಬಯಸಿದರೆ ನಿಮ್ಮ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಮೊದಲೆಲ್ಲಾ ವಯಸ್ಸಾದವರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವುದನ್ನು ನಾವು ಕೇಳುತ್ತಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಈ ಹೃದಯ ರಕ್ತನಾಳದ ಕಾಯಿಲೆ, ಹೃದಯಾಘಾತ ಆಗಿ ಸಾವನ್ನಪ್ಪುತ್ತಿರುವುದು ನಿಜಕ್ಕೂ ಒಂದು ಗಂಭೀರವಾದ ಸಂಗತಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಪ್ರಕಾರ ಪ್ರಪಂಚದಾದ್ಯಂತ ಸಂಭವಿಸುವ ಸಾವಿಗೆ ಪ್ರಮುಖ ಕಾರಣವೇ ಈ ಹೃದಯ ರಕ್ತನಾಳ ಕಾಯಿಲೆ ಮತ್ತು ಹೃದಯಾಘಾತ ಆಗಿವೆ ಎಂದು ಹೇಳಲಾಗುತ್ತಿದೆ. ಏಕೆ ಹೀಗೆ ಆಗುತ್ತಿದೆ, ಯುವಕರು ಏಕೆ ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಕಾರಣ ತಿಳಿಯಲು ಅನೇಕ ಅಧ್ಯಯನಗಳನ್ನು ಮಾಡಿದ್ದಾರೆ.

ಅನೇಕ ತಜ್ಞರು ಮತ್ತು ಹಲವಾರು ಅಧ್ಯಯನಗಳು ಯುವ ರೋಗಿಗಳ ಸಂಖ್ಯೆಯಲ್ಲಿ ಈ ಹಠಾತ್ ಏರಿಕೆಗೆ ಅನಾರೋಗ್ಯಕರ ಜೀವನಶೈಲಿ ಅಭ್ಯಾಸಗಳೇ ಕಾರಣವಾಗಿವೆ ಎಂದು ತಿಳಿಸಿದ್ದಾರೆ. ಸರಿಯಾದ ಆಹಾರ ಕ್ರಮ  ಅನುಸರಿಸುವುದು ಮತ್ತು ಆರೋಗ್ಯಕರ ಅಭ್ಯಾಸಗಳನ್ನು ಆಶ್ರಯಿಸುವುದು ದೀರ್ಘಾವಧಿಯಲ್ಲಿ ನಿಮ್ಮ ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ ಎಂದು ಹೇಳಿದ್ದಾರೆ. ಆದ್ದರಿಂದ, ನೀವು ಹೃದಯ ರಕ್ತನಾಳದ ಕಾಯಿಲೆ ದೂರವಿಡಲು ಬಯಸಿದರೆ ನೀವು ಅಳವಡಿಸಿಕೊಳ್ಳಬೇಕಾದ ಕೆಲವು ಜೀವನಶೈಲಿ ಬದಲಾವಣೆಗಳು ಇಲ್ಲಿವೆ.

ನಿಮ್ಮ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಆಗಾಗ್ಗೆ ಪರೀಕ್ಷಿಸಿಕೊಳ್ಳಿ: ನಿಮ್ಮ ಹೃದಯದ ಆರೋಗ್ಯಕರ ಕಾರ್ಯನಿರ್ವಹಣೆಗಾಗಿ ನಿಮ್ಮ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನೀವು ಆಗಾಗ್ಗೆ ಪರೀಕ್ಷಿಸಿಕೊಳ್ಳುವುದು ತುಂಬಾ ಮುಖ್ಯ. ಅಧಿಕ ರಕ್ತದೊತ್ತಡ ಮತ್ತು ಹೆಚ್ಚಿನ ಕೊಲೆಸ್ಟ್ರಾಲ್ ಮಟ್ಟ ಪಾರ್ಶ್ವವಾಯು, ಹೃದಯಾಘಾತ ಮತ್ತು ಹೃದಯ ಕಾಯಿಲೆಗಳ ಅಪಾಯ ಹೆಚ್ಚಿಸಬಹುದು.

ಇದನ್ನೂ ಓದಿ: Heart Attack: ಹೃದಯಾಘಾತ ಹೆಚ್ಚಾಗಿ ಆಗಿರುವುದು ಈ ದಿನವೇ ಅಂತೆ: ಕಾರಣ ಇಲ್ಲಿದೆ..!

ಅಧಿಕ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ಎರಡಕ್ಕೂ ನೀವು ಚಿಕಿತ್ಸೆ ಪಡೆಯದೆ ಹಾಗೆ ಇರುವುದು ದೀರ್ಘಾವಧಿಯಲ್ಲಿ ಅನೇಕ ತೊಡಕುಗಳನ್ನು ಉಂಟು ಮಾಡಬಹುದು. ರಕ್ತದೊತ್ತಡ ಮಾನಿಟರ್‌ಗಳ ಸಹಾಯದಿಂದ ಮನೆಯಲ್ಲಿಯೇ ರಕ್ತದೊತ್ತಡ ಪರೀಕ್ಷಿಸಬಹುದು. ನೀವು ನಿಮ್ಮ ಕೊಲೆಸ್ಟ್ರಾಲ್ ಅನ್ನು ರಕ್ತ ಪರೀಕ್ಷೆಯ ಮೂಲಕ ಪರೀಕ್ಷಿಸಬಹುದು.

ಪ್ರತಿದಿನ ತಪ್ಪದೆ ವ್ಯಾಯಾಮ ಮಾಡಿ: ದೈಹಿಕವಾಗಿ ನೀವು ಏನು ಮಾಡದೆ ಇರುವುದು ನಿಮ್ಮ ಹೃದ್ರೋಗಗಳ ಅಪಾಯ ಹೆಚ್ಚಿಸುತ್ತದೆ. ‘ಆ್ಯನಲ್ಸ್ ಆಫ್ ಇಂಟರ್ನಲ್ ಮೆಡಿಸಿನ್’ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ದೀರ್ಘಕಾಲದವರೆಗೆ ಕುಳಿತುಕೊಳ್ಳುವುದು ಹೃದ್ರೋಗ, ಟೈಪ್ 2 ಮಧುಮೇಹ ಮತ್ತು ಕ್ಯಾನ್ಸರ್ ಸೇರಿದಂತೆ ದೀರ್ಘಕಾಲದ ಆರೋಗ್ಯ ಪರಿಸ್ಥಿತಿಗಳಿಗೆ ಕಾರಣವಾಗಬಹುದು ಎಂದು ಕಂಡುಬಂದಿದೆ. ಆದ್ದರಿಂದ, ಪ್ರತಿದಿನ ನಿಯಮಿತವಾಗಿ ವ್ಯಾಯಾಮ ಮಾಡಲು ಪ್ರಾರಂಭಿಸಿ.

ಉತ್ತಮ ಪೌಷ್ಟಿಕ ಆಹಾರ ಸೇವಿಸಿ: ಹೆಚ್ಚಿನ ಕೊಬ್ಬಿನಾಂಶ ಹೊಂದಿರುವ ಆಹಾರಗಳನ್ನು ತಿನ್ನುವುದನ್ನು ಬಿಡಬೇಕು. ಈ ರೀತಿಯ ಕೊಬ್ಬಿನಾಂಶವಿರುವ ಆಹಾರ ಪಾರ್ಶ್ವವಾಯು ಸೇರಿದಂತೆ ಹೃದ್ರೋಗದ ಅಪಾಯ ಹೆಚ್ಚಿಸುತ್ತದೆ. ಇದು ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸಿ ನಿಮ್ಮ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ನಿಮ್ಮ ಹೃದಯದ ಮೇಲೆ ಅನೇಕ ರೀತಿಯ ಪರಿಣಾಮ ಬೀರುತ್ತದೆ. ಹೃದಯ-ಆರೋಗ್ಯಕರ ಆಹಾರವು ಹಣ್ಣುಗಳು, ತರಕಾರಿಗಳು, ಧಾನ್ಯ ಮತ್ತು ನಾರಿನಂಶ ಭರಿತ ಆಹಾರಗಳನ್ನು ಒಳಗೊಂಡಿದೆ.

ಇದನ್ನೂ ಓದಿ: ಹೆಚ್ಚುತ್ತಿದೆ ಹೃದಯಾಘಾತ: ನೀವು ಹೇಗಿರಬೇಕು, ಏನು ಮಾಡಬೇಕು?

ಆರೋಗ್ಯಕರ ತೂಕ ಹೊಂದಿರಿ: ಈ ದೇಹದಲ್ಲಿ ಅತಿಯಾದ ಬೊಜ್ಜಿನಿಂದ ತೂಕ ಹೆಚ್ಚಿದ್ದರೆ ಮೊದಲು ಅದನ್ನು ಕಡಿಮೆ ಮಾಡಿಕೊಳ್ಳಿ. ಇದು ನಿಮ್ಮ ಹೃದಯ ರಕ್ತನಾಳದ ಕಾಯಿಲೆಗಳ ಅಪಾಯ ಹೆಚ್ಚಿಸುತ್ತದೆ. ನೀವು ಅಧಿಕ ತೂಕ ಹೊಂದಿದ್ದರೆ, ನಿಯಮಿತ ವ್ಯಾಯಾಮ ಮತ್ತು ನೀವು ಸೇವಿಸುವ ಆಹಾರದ ಮೇಲೆ ನಿಮ್ಮ ಗಮನ ಇರುವುದು ತುಂಬಾ ಮುಖ್ಯವಾಗುತ್ತದೆ.

ಧೂಮಪಾನ, ಮದ್ಯಪಾನ ತ್ಯಜಿಸಿ ಒತ್ತಡ ಕಡಿಮೆ ಮಾಡಿಕೊಳ್ಳಿ: ನೀವು ಧೂಮಪಾನ ಅಥವಾ ಮದ್ಯಪಾನ ಮಾಡುತ್ತಿದ್ದರೆ ಮೊದಲು ಅದನ್ನು ಬಿಡಿ. ಇದು ನಿಮ್ಮ ಹೃದಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಇವು ನಿಮ್ಮ ರಕ್ತದೊತ್ತಡ ಮತ್ತು ರಕ್ತದಲ್ಲಿನ ಟ್ರೈಗ್ಲಿಸರೈಡ್ ಗಳ ಮಟ್ಟವನ್ನು ಹೆಚ್ಚಿಸುತ್ತವೆ, ಇದು ನಿಮ್ಮನ್ನು ಪಾರ್ಶ್ವವಾಯು ಮತ್ತು ಹೃದಯ ವೈಫಲ್ಯಕ್ಕೆ ಹೆಚ್ಚು ಒಳಗಾಗುವಂತೆ ಮಾಡುತ್ತದೆ. ಇದಲ್ಲದೆ, ಸಾಕಷ್ಟು ಮಾನಸಿಕ ಒತ್ತಡ ತೆಗೆದುಕೊಳ್ಳುವುದು ಸಹ ನಿಮ್ಮ ಹೃದಯದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಆದ್ದರಿಂದ, ಒತ್ತಡ ಕಡಿಮೆ ಮಾಡಿಕೊಳ್ಳಲು ಯೋಗ ಅಥವಾ ಧ್ಯಾನ ಮಾಡಿ.
Published by:Anitha E
First published: