ಮೈಸೂರು: ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು  ಪರೀಕ್ಷೆಯಲ್ಲಿ ಉತ್ತೀರ್ಣರಾಬೇಕು. ಅರ್ಜಿದಾರನಿಗೆ ಕಂಪ್ಯೂಟರ್​ ಜ್ನಾನ ಕಡ್ಡಾಯವಾಗಿದೆ.

news18-kannada
Updated:February 26, 2020, 1:02 PM IST
ಮೈಸೂರು: ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
North Eastern Railway Recruitment 2019
  • Share this:
ಮೈಸೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ. ಏಪ್ರಿಲ್​ 1,2020 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಹತೆ:

ಶೀಘ್ರಲಿಪಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ ಹೇಗೆ?:

ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆಯ ಶೀಘ್ರಲಿಪಿ ಮತ್ತು ಬೆರಳಚ್ಚು  ಪರೀಕ್ಷೆಯಲ್ಲಿ ಉತ್ತೀರ್ಣರಾಬೇಕು. ಅರ್ಜಿದಾರನಿಗೆ ಕಂಪ್ಯೂಟರ್​ ಜ್ನಾನ ಕಡ್ಡಾಯವಾಗಿದೆ.

ವೇತನ :

ಶೀಘ್ರಲಿಪಿಕಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650 ರೂ. ನಿಂದ 52,650 ರೂ. ವೇತನ ಸಿಗಲಿದೆ.ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ/ 2ಬಿ/3ಎ/3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ:

ಸಾಮಾನ್ಯ ವರ್ಗದವರು 300 ರೂ. ಪಾವತಿಸುವ ಮೂಲಕ ಅರ್ಜಿ ಸಲ್ಲಿಸಬೇಕು. ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳು 150 ರೂ. ಶುಲ್ಕ ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತರು ಮೈಸೂರು ಜಿಲ್ಲಾ ನ್ಯಾಯಾಲಯದ https://districts.ecourts.gov.in/mysuru ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಈ ಲಿಂಕ್​ ಕ್ಲಿಕ್​ ಮಾಡಿ

ಇದನ್ನೂ ಓದಿ: Reliance Jio Phone Plans: ಕೇವಲ 49 ಮತ್ತು 69 ರೂ.ವಿನ ಪ್ಲಾನ್​​ನಲ್ಲಿದೆ ಇಷ್ಟೆಲ್ಲಾ ಬೆನಿಫಿಟ್ಸ್​​​!

ಇದನ್ನೂ ಓದಿ: ಲಟಿಕೆ ತೆಗೆಯುವ ಅಭ್ಯಾಸವಿದೆಯೇ?; ಜೀವಕ್ಕೆ ಕುತ್ತು ತರಬಹುದು ಈ ಚಟ ಹುಷಾರ್..!
First published:February 25, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading