ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ ಯೋಜನೆಯಡಿಯಲ್ಲಿ(ಎನ್.ಎಫ್.ಎಸ್.ಎಂ) ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 14-09-2020 ರೊಳಗೆ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
ಹುದ್ದೆಯ ವಿವರ:
ಜಿಲ್ಲಾ ಸಲಹೆಗಾರರು -01
ತಾಂತ್ರಿಕ ಸಹಾಯಕರು -02
ಒಟ್ಟು ಹುದ್ದೆಗಳು: 3
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಬಿಸ್ಸಿ(ಅಗ್ರಿಕಲ್ಚರ್) ಹಾಗೂ ಎಂಎಸ್ಸಿ (ಅಗ್ರಿಕಲ್ಚರ್) ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಮೇಲ್ಕಂಡ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು “ಜಂಟಿ ಕೃಷಿ ನಿರ್ದೇಶಕರು, ತುಮಕೂರು” ಇವರ ಕಚೇರಿಯಿಂದ ದಿನಾಂಕ 10-09-2020 ರೊಳಗೆ ಕಚೇರಿ ಸಮಯದಲ್ಲಿ ಪಡೆಯಬೇಕು. ನಂತರ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ದಿನಾಂಕ 14-09-2020 ರೊಳಗಾಗಿ ಜಂಟಿ ಕೃಷಿ ನಿರ್ದೇಶಕರು, ತುಮಕೂರು ರವರಿಗೆ ನೇರವಾಗಿ ಅಥವಾ ಅಂಚೆ ಮುಖಾಂತರ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ: ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಪ್ಲಿಕೇಶನ್ ನೀಡಲು ಕೊನೆಯ ದಿನಾಂಕ 14 ಸೆಪ್ಟೆಂಬರ್ 2020.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ