ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2814 ಹುದ್ದೆಗಳಿಗೆ ಅರ್ಜಿ ಆಹ್ವಾನ

NWKRTC Recruitment 2020: ಸಂಸ್ಥೆಯ ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಘಟಕಗಳಲ್ಲಿ ಕಾರ್ಯ ನಿರ್ವಹಿಸಲು ಇಚ್ಚಿಸುವ ಅಭ್ಯರ್ಥಿಗಳು www.nwkrtc.in  ವೆಬ್​ಸೈಟ್​ಗೆ ಭೇಟಿ ನೀಡಿ ಆನ್​ಲೈನ್​ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.

news18-kannada
Updated:December 10, 2019, 5:11 PM IST
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2814 ಹುದ್ದೆಗಳಿಗೆ ಅರ್ಜಿ ಆಹ್ವಾನ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
  • Share this:
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಛೇರಿ ಹುಬ್ಬಳ್ಳಿ ಖಾಲಿ ಇರುವ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ.

ಬಾಗಲಕೋಟೆ, ಬೆಳಗಾವಿ, ಚಿಕ್ಕೋಡಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ, ಹಾವೇರಿ ಮತ್ತು ಉತ್ತರ ಕನ್ನಡ ವಿಭಾಗ, ಶಿರಶಿ ಘಟಕ ಸೇರಿದಂತೆ ಒಟ್ಟು 2814 ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಿದೆ.

ಹುದ್ದೆಗಳು:

ಚಾಲಕ-2500

ಚಾಲಕ(ಪಜಾ-ಹಿಂಬಾಕಿ)-55

ಚಾಲಕ-ಕಂ-ನಿರ್ವಾಹಕ(ಪಜಾ-ಹಿಂಬಾಕಿ)-259

ವಿದ್ಯಾರ್ಹತೆ:-ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಪಾಸ್‌ ಆಗಿರಬೇಕು

-ಹೆವಿ ವೆಹಿಕಲ್ ಡ್ರೈವಿಂಗ್ ಲೈಸನ್ಸ್ ಹೊಂದಿರಬೇಕು.

-ಪಿಎಸ್‌ವಿ ಬ್ಯಾಡ್ಜ್‌ ಮತ್ತು ಪಾಸೆಂಜರ್ ವೆಹಿಕಲ್ ಲೈಸನ್ಸ್‌ ಹೊಂದಿರಬೇಕು.

ಅರ್ಜಿ ಸಲ್ಲಿಸುವುದ ಹೇಗೆ:

ಸಂಸ್ಥೆಯ ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಘಟಕಗಳಲ್ಲಿ ಕಾರ್ಯ ನಿರ್ವಹಿಸಲು ಇಚ್ಚಿಸುವ ಅಭ್ಯರ್ಥಿಗಳು www.nwkrtc.in  ವೆಬ್​ಸೈಟ್​ಗೆ ಭೇಟಿ ನೀಡಿ ಆನ್​ಲೈನ್​ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ದಿನಾಂಕ:

ಅಭ್ಯರ್ಥಿಗಳು ದಿನಾಂಕ 10.12.2019ರಿಂದ 08.01.2019 ರಂದು ಸಂಜೆ 6:30ರ ಒಳಗೆ ಸರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: 5ನೇ ಮದುವೆಯಾಗಲು ಹೊರಟಿದ್ದಾಳೆ ಹಾಲಿವುಡ್​​ನ ಈ ನಟಿ!

ಇದನ್ನೂ ಓದಿ:  ಈರುಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ; ಬೆಂಗಳೂರು ವ್ಯಾಪಾರಿಗಳಿಗೆ ದೊಡ್ಡ ಶಾಕ್!
First published: December 10, 2019, 4:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading