Railway Recruitment: 10ನೇ ತರಗತಿ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ

Railway Recruitment: ಈ ನೇಮಕಾತಿ ಅಡಿಯಲ್ಲಿ 2,562 ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 22 ರವರೆಗೆ ಅರ್ಜಿ ಸಲ್ಲಿಸಬಹುದು.

zahir | news18-kannada
Updated:January 6, 2020, 3:00 PM IST
Railway Recruitment: 10ನೇ ತರಗತಿ ಪಾಸಾದವರಿಗೆ ಇಲ್ಲಿದೆ ಉದ್ಯೋಗಾವಕಾಶ
ಪ್ರಾತಿನಿಧಿಕ ಚಿತ್ರ
  • Share this:
ಕೇಂದ್ರ ರೈಲ್ವೆ ಇಲಾಖೆಯು ಇತ್ತೀಚೆಗೆ ಅಪ್ರೆಂಟಿಸ್ ಕಾಯ್ದೆಯಡಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ 2,562 ಹುದ್ದೆಗಳ ಭರ್ತಿ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 22 ರವರೆಗೆ ಅರ್ಜಿ ಸಲ್ಲಿಸಬಹುದು. ಈ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳು ಹೆಸರು:
ಫಿಟ್ಟರ್

ವೆಲ್ಡರ್
ಕಾರ್ಪೆಂಟರ್
ಪೈಂಟರ್
ಟೈಲರ್ಎಲೆಕ್ಟ್ರಿಷಿಯನ್
ಟರ್ನರ್
ಮೆಕ್ಯಾನಿಕ್ ಮತ್ತು ಇತರರು

ಒಟ್ಟು ಹುದ್ದೆಗಳ ಸಂಖ್ಯೆ:
2562 ಹುದ್ದೆಗಳು

ವಿದ್ಯಾರ್ಹತೆ:
10ನೇ ತರಗತಿ ಪಾಸಾದ ಮತ್ತು ಐಟಿಐ ಪ್ರಮಾಣ ಪತ್ರ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಅರ್ಜಿದಾರನ ಕನಿಷ್ಠ ವಯಸ್ಸು 15 ವರ್ಷ ಹಾಗೂ ಗರಿಷ್ಠ ವಯೋಮಿತಿ 24 ವರ್ಷ

ಅರ್ಜಿ ಶುಲ್ಕ:
100 ರೂ.

ಆಯ್ಕೆ ಪ್ರಕ್ರಿಯೆ:
10ನೇ ತರಗತಿ ಮತ್ತು ಐಟಿಐ ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು www.rrccr.com ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳ ಕುರಿತಾದ ಮತ್ತಷ್ಟು ಮಾಹಿತಿಗಾಗಿ http://www.rrccr.com/PDF-Files/Act_Appr/Act_Appr_2019-20.pdf ಈ ಲಿಂಕ್​ನ್ನು ಕ್ಲಿಕ್ ಮಾಡಿ.

 
(ವಿ.ಸೂ: ಕೆಲವೊಂದು ಆ್ಯಪ್​ಗಳಲ್ಲಿ ಲಿಂಕ್ ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ News18 Kannada App ಡೌನ್​ಲೋಡ್​ ಮಾಡುವ ಮೂಲಕ ನಿಮ್ಮ ಲಿಂಕ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು)



First published: January 6, 2020, 2:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading