ಸ್ಯಾಂಡಲ್ವುಡ್ ಡ್ರಗ್ಸ್ ಕೇಸ್: ನಟಿ ರಾಗಿಣಿ ಪರಪ್ಪನ ಅಗ್ರಹಾರ ಜೈಲಿಗೆ - ಕೋರ್ಟ್ ಆದೇಶ
Sandalwood Drug Scandal:ಈ ನಡುವೆಯೇ ಸಿಸಿಬಿ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈಗ ವಿಚಾರಣೆ ನಡೆಸಿದ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಸಂಜನಾರನ್ನು ಪೊಲೀಸ್ ಕಸ್ಟಡಿಗೆ ನೀಡಿ ರಾಗಿಣಿ ಜತೆ ಐವರಿಗೆ ಪರಪ್ಪನ ಅಗ್ರಹಾರ ಕಳಿಸುವಂತೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
news18-kannada Updated:September 14, 2020, 5:04 PM IST

ನಟಿ ರಾಗಿಣಿ.
- News18 Kannada
- Last Updated: September 14, 2020, 5:04 PM IST
ಬೆಂಗಳೂರು(ಸೆ.14): ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ನಟಿ ರಾಗಿಣಿ ಮತ್ತು ಚಿತ್ರ ನಟಿ ಸಂಜನಾರನ್ನು ಬಂಧಿಸಿದ್ದಾರೆ. ಈ ಇಬ್ಬರು ನಟಿಯರನ್ನು ಈಗಾಗಲೇ ಕೋರ್ಟ್ ವಿಚಾರಣೆಗಾಗಿ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ. ಹೀಗಾಗಿ ಸಿಸಿಬಿ ಪೊಲೀಸರು ಇಬ್ಬರು ನಟಿಯರನ್ನು ಕಳೆದ ಎರಡು ವಾರಗಳಿಂದ ತೀವ್ರ ವಿಚಾರಣೆ ನಡೆಸುತ್ತಿದ್ದರು. ಈ ಮಧ್ಯೆ ಇಂದು ಮತ್ತೆ ಕೋರ್ಟ್, ಪ್ರಕರಣದ ಪ್ರಮುಖ ಆರೋಪಿ ನಟಿ ರಾಗಿಣಿ ದ್ವಿವೇದಿ ಸೇರಿದಂತೆ ಐವರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಹೀಗಾಗಿ ಎಲ್ಲರನ್ನೂ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡುತ್ತಿದ್ದಾರೆ. ಹಾಗೆಯೇ ಸಂಜನಾರನ್ನು ಮಾತ್ರ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಇಂದು ಸಿಸಿಬಿ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈಗ ವಿಚಾರಣೆ ನಡೆಸಿದ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಸಂಜನಾರನ್ನು ಪೊಲೀಸ್ ಕಸ್ಟಡಿಗೆ ನೀಡಿ ರಾಗಿಣಿ ಜತೆ ಐವರಿಗೆ ಪರಪ್ಪನ ಅಗ್ರಹಾರ ಕಳಿಸುವಂತೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ನಟಿ ರಾಗಿಣಿ ಹಾಗೂ ಸಂಜನಾಗೆ ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇನ್ನೊಂದೆಡೆ ಸಂಜನಾ ಗಲ್ರಾನಿ ಮತ್ತು ರಾಗಿಣಿ ಸೇರಿದಂತೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗೆ ಸಿಸಿಬಿ ಪೊಲೀಸರು ಆಕ್ಷೇಪಣೆಯೂ ಸಲ್ಲಿಸಿದ್ದರು. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಕೋರ್ಟ್ ಮುಂದೂಡಿದೆ. ಇದೇ ವೇಳೆ ಡ್ರಗ್ ಪೆಡ್ಲರ್ ರಾಹುಲು, ಶಿವಪ್ರಕಾಶ್, ವಿನಯ್ ಕುಮಾರ್, ವೈಭವ್ ಜೈನ್ ಅವರ ಜಾಮೀನು ವಿಚಾರಣೆಯ ಕೂಡ ಮುಂದೂಡಲಾಗಿದೆ.
ಇನ್ನು, ಆರೋಪಿ ರವಿ ಶಂಕರ್ ನೀಡಿರುವ ಮಾಹಿತಿ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿರುವ ಹೇಳಿಕೆಗಳಿಗೆ ನಟಿ ಸಂಜನಾ ಮತ್ತು ರಾಗಿಣಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ. ವಿಚಾರಣೆಗೂ ಸಹಕಾರ ನೀಡುತ್ತಿಲ್ಲ. ಉದ್ದೇಶ ಪೂರ್ವಕವಾಗಿ ತನಿಖೆ ವಿಳಂಬ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಕೊರೋನಾ ನಿಯಂತ್ರಣ: ಅದ್ಭುತ ಕೆಲಸ ಮಾಡಿದ್ದೀರಿ ಎಂದ ಪ್ರಧಾನಿ ಮೋದಿ - ಡೊನಾಲ್ಡ್ ಟ್ರಂಪ್
ನಟಿ ರಾಗಿಣಿ ಮತ್ತು ಸಂಜನಾ ಇಷ್ಟು ದಿನವಾದರೂ ಯಾವ ವಿಷಯವನ್ನೂ ಬಾಯಿಬಿಟ್ಟಿಲ್ಲ. ಇಬ್ಬರನ್ನು ವಿಚಾರಣೆ ಮಾಡೋದು ತನಿಖಾಧಿಕಾರಿಗಳಿಗೆ ದೊಡ್ಡ ಸವಾಲಾಗಿದೆ. ಏನೇ ಪ್ರಶ್ನೆ ಮಾಡಿದರೂ ನನಗೇನೂ ಗೊತ್ತಿಲ್ಲ, ಮರೆತಿದ್ದೇನೆ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ. ಡಿಲೀಟ್ ಆಗಿರುವ ಸಂದೇಶಗಳನ್ನು ಮುಂದಿಟ್ಟುಕೊಂಡು ವಿಚಾರಣೆ ಮಾಡಿದರೂ ಇವರು ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ.
ಇಂದು ಸಿಸಿಬಿ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈಗ ವಿಚಾರಣೆ ನಡೆಸಿದ ಕೋರ್ಟ್ ಅಂತಿಮ ತೀರ್ಪು ನೀಡಿದೆ. ಸಂಜನಾರನ್ನು ಪೊಲೀಸ್ ಕಸ್ಟಡಿಗೆ ನೀಡಿ ರಾಗಿಣಿ ಜತೆ ಐವರಿಗೆ ಪರಪ್ಪನ ಅಗ್ರಹಾರ ಕಳಿಸುವಂತೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ನಟಿ ರಾಗಿಣಿ ಹಾಗೂ ಸಂಜನಾಗೆ ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.