news18-kannada Updated:September 8, 2020, 5:35 PM IST
ಸಂಜನಾ ಗಲ್ರಾನಿ
ಬೆಂಗಳೂರು(ಸೆ.08): ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸಂಜನಾರನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಈಗಷ್ಟೇ ಸಿಸಿಬಿ ಪೊಲೀಸರು ನಟಿ ಸಂಜನಾರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 8ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಮಾಡಿದರು. ಈ ವೇಳೆ ಸಿಸಿಬಿ ಪೊಲೀಸರ ಮನವಿಯನ್ನು ಪುರಸ್ಕರಿಸಿದ ನ್ಯಾಯಧೀಶರು ವಿಚಾರಣೆ ನಡೆಸಿದರು. ಈಗ 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ.
ನಟಿ ರಾಗಿಣಿ ಬೆನ್ನಲ್ಲೀಗ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ನಟಿ ಸಂಜನಾ ಗಲ್ರಾನಿ ಅವರನ್ನು ಬಂಧಿಸಿದ್ದಾರೆ. ಡ್ರಗ್ಸ್ ದಂಧೆ ಸಂಬಂಧ ರಾಹುಲ್ ಶೆಟ್ಟಿ ಎಂಬುವವರನ್ನು ಸಿಸಿಬಿ ಬಂಧಿಸಿದ್ದರು. ಈ ವೇಳೆ ಸಂಜನಾ ಬಗ್ಗೆ ಪೊಲೀಸರ ರಾಹುಲ್ ಶೆಟ್ಟಿ ಬಾಯಿಬಿಟ್ಟಿದ್ದ. ರಾಹುಲ್ ಜೊತೆ ಹಲವು ಪಾರ್ಟಿಗಳಲ್ಲಿ ಸಹ ಸಂಜನಾ ಕಾಣಿಸಿಕೊಳ್ಳುತ್ತಿದ್ದರು ಎನ್ನಲಾಗಿತ್ತು. ಹೀಗಾಗಿ ಸಂಜನಾರನ್ನು ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಿಗ್ಗೆಯೇ ಸಂಜನಾರನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದರು. ಸತತ ವಿಚಾರಣೆ ಬಳಿಕ ಸಿಸಿಬಿ ಅಧಿಕಾರಿಗಳು ಸಂಜನಾರನ್ನು ಬಂಧಿಸಿದ್ದರು. ಬಳಿಕ ಸಂಜನಾಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಟ್ಗೆ ಹಾಜರುಪಡಿಸಿದ್ದರು.
ಮಂಗಳೂರು ಮೂಲದ ಡ್ರಗ್ ಪೆಡ್ಲರ್ ಪೃಥ್ವಿ ಶೆಟ್ಟಿ ಹಾಗೂ ರಾಹುಲ್ ನೀಡಿದ್ದ ಹೇಳಿಕೆಯ ಆಧಾರದಲ್ಲಿ ನಟಿ ಸಂಜನಾ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು ಎನ್ನಲಾಗಿದೆ.
Published by:
Ganesh Nachikethu
First published:
September 8, 2020, 5:03 PM IST