40 ಸಾವಿರಕ್ಕಿಂತ ಹೆಚ್ಚಿನ ವೇತನ: ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

SBI Recruitment 2019: ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ನಲ್ಲಿ ಹಲವು ಹುದ್ದೆಗಳಿದ್ದು, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇನ್ನು ಕೆಲವು ಪೋಸ್ಟ್‌ಗಳಿಗೆ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

zahir | news18-kannada
Updated:September 14, 2019, 2:53 PM IST
40 ಸಾವಿರಕ್ಕಿಂತ ಹೆಚ್ಚಿನ ವೇತನ: ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
interview
  • Share this:
ಸ್ಟೇಟ್​ ಬ್ಯಾಂಕ್ ಆಫ್ ಇಂಡಿಯಾ ನೂತನ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿ ಇರುವವರಿಗೆ ಇಲ್ಲಿ ಒಟ್ಟು 477 ಹುದ್ದೆಗಳಿಗೆ ಖಾಲಿ ಇದೆ. ಎಸ್‌ಬಿಐ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (ನಿಯಮಿತ) ವಿಭಾಗದಲ್ಲಿ ನಡೆಯಲಿರುವ ಈ ಭರ್ತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ. ಆಸಕ್ತರು sbi.co.in ಎಂಬ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ನಲ್ಲಿ ಹಲವು ಹುದ್ದೆಗಳಿದ್ದು, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇನ್ನು ಕೆಲವು ಪೋಸ್ಟ್‌ಗಳಿಗೆ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಪೋಸ್ಟ್ ಹೆಸರು:
ಸ್ಪೆಷಲಿಸ್ಟ್ ಕೇಡರ್ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ:
477 ಹುದ್ದೆಗಳು

ಅರ್ಹತೆ:ಬಿಇ / ಬಿಟೆಕ್ ಪದವಿ ಪಡೆದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ವಿಭಿನ್ನ ಹುದ್ದೆಗಳಲ್ಲಿ ವಿಭಿನ್ನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಅರ್ಹತೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

ವೇತನ:
ಜೂನಿಯರ್ ಮ್ಯಾನೇಜರ್ - 42,020 ರೂ.
ಮ್ಯಾನೇಜರ್ ಸ್ಕೇಲ್ II - 45,950 ರೂ.
ಮ್ಯಾನೇಜರ್ ಸ್ಕೇಲ್ III - 51,490 ರೂ.
ಹಿರಿಯ ವ್ಯವಸ್ಥಾಪಕ ಗ್ರೇಡ್ IV- 59,170 ರೂ.

ಇದನ್ನೂ ಓದಿ: ಸೌತ್ ಸಿನಿರಂಗದ ಸ್ಟಾರ್ ನಟನ ಮುದ್ದಿನ ಮಡದಿ ಯುವರತ್ನನ ಯುವರಾಣಿ..!

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ - 750 ರೂ
ಮೀಸಲಾತಿ ಅಭ್ಯರ್ಥಿಗಳಿಗೆ - 125 ರೂ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 25, 2019

ವಿಜಯ್ ದೇವರಕೊಂಡ ತಮ್ಮನಿಗೂ ಕೊಡಗಿನ ಚೆಂದುಳ್ಳಿ ಚೆಲುವೆ ನಾಯಕಿ: ಆದರೆ ರಶ್ಮಿಕಾ ಅಲ್ಲ..!

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತರು ಕೆಳಗೆ sbi.co.in ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದು.
First published: September 14, 2019, 2:49 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading