RRB Recruitment: 10ನೇ ತರಗತಿ ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ: ಯಾವುದೇ ಪರೀಕ್ಷೆ ಇರುವುದಿಲ್ಲ

RRB Recruitment: ಅಭ್ಯರ್ಥಿಯ ಕನಿಷ್ಠ ವಯಸ್ಸು 15 ವರ್ಷಗಳು ಮತ್ತು ಗರಿಷ್ಠ ವಯಸ್ಸು 23 ವರ್ಷಗಳಾಗಿರಬೇಕು. ಇನ್ನು ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು ಸಡಿಲಿಕೆ ನೀಡಲಾಗಿದೆ.

zahir | news18-kannada
Updated:December 5, 2019, 2:33 PM IST
RRB Recruitment: 10ನೇ ತರಗತಿ ಪಾಸಾದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ: ಯಾವುದೇ ಪರೀಕ್ಷೆ ಇರುವುದಿಲ್ಲ
jobs
  • Share this:
RRB Recruitment: ಭಾರತೀಯ ರೈಲ್ವೆ ಇಲಾಖೆಯು ಮತ್ತೊಮ್ಮೆ ಅಪ್ರೆಂಟಿಸ್ ಹುದ್ದೆಗಳಿಗೆ ಬಂಪರ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ದಕ್ಷಿಣ ರೈಲ್ವೆ ವಿಭಾಗದಲ್ಲಿ ಒಟ್ಟು 667 ಹುದ್ದೆಗಳು ಖಾಲಿಯಿದ್ದು, ಡಿಸೆಂಬರ್ 31 ರೊಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ ಮತ್ತು ಇತರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ಹೆಸರು:

ಫಿಟ್ಟರ್‌ಗಳು, ವೆಲ್ಡರ್‌ಗಳು, ಎಲೆಕ್ಟ್ರಿಷಿಯನ್‌ಗಳು, ಮೆಕ್ಯಾನಿಕ್ಸ್ ಮತ್ತು ಇತರರು

ಹುದ್ದೆಗಳ ಸಂಖ್ಯೆ:
667

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪಾಸಾಗಿರಬೇಕು ಮತ್ತು ಐಟಿಐ ಪ್ರಮಾಣ ಪತ್ರ ಹೊಂದಿರಬೇಕು. ಇನ್ನು ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿಜ್ಞಾನ ವಿಭಾಗದಲ್ಲಿ ಪಿಯುಸಿ ಉತೀರ್ಣರಾಗಿರಬೇಕು.ವಯೋಮಿತಿ:
ಅಭ್ಯರ್ಥಿಯ ಕನಿಷ್ಠ ವಯಸ್ಸು 15 ವರ್ಷಗಳು ಮತ್ತು ಗರಿಷ್ಠ ವಯಸ್ಸು 23 ವರ್ಷಗಳಾಗಿರಬೇಕು. ಇನ್ನು ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:
100 ರೂಪಾಯಿ

ಆಯ್ಕೆ ಪ್ರಕ್ರಿಯೆ:
10ನೇ ತರಗತಿ ಮತ್ತು ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಮಾಡಲಾಗುತ್ತದೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೆ ಯಾವುದೇ ಪರೀಕ್ಷೆ ಇರುವುದಿಲ್ಲ.

ಇದನ್ನೂ ಓದಿ: ಡಿಸೆಂಬರ್ ತಿಂಗಳಲ್ಲಿ ಸಿನಿಪ್ರಿಯರಿಗೆ ಪ್ಯಾನ್ ಇಂಡಿಯಾ ಸಿನಿಮಾ ಸುಗ್ಗಿ

ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ srindianrailways.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Airtel-Vodafone: ಪ್ರತಿದಿನ 1GB ಡೇಟಾ ಪ್ಲ್ಯಾನ್ ನಿಲ್ಲಿಸಿದ ಏರ್​ಟೆಲ್-ವೊಡಾಫೋನ್

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಡಿಸೆಂಬರ್ 2019.

(ವಿ.ಸೂ: ಕೆಲವೊಂದು ಆ್ಯಪ್​ಗಳಲ್ಲಿ ಲಿಂಕ್ ಕಾಣಿಸಿಕೊಳ್ಳುವುದಿಲ್ಲ. ಹೀಗಾಗಿ News18 Kannada App ಡೌನ್​ಲೋಡ್​ ಮಾಡುವ ಮೂಲಕ ನಿಮ್ಮ ಲಿಂಕ್ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು)

 

ಇದನ್ನೂ ಓದಿ: ಮುಗಿಲ್​​ಪೇಟೆಯ ಮೂಗುತಿ ಸುಂದರಿ ಇವರೇ ನೋಡಿ

First published: December 5, 2019, 2:33 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading