HOME » NEWS » Lifestyle » SPORTS AUTHORITY OF INDIA RECRUITMENT 2021 NOTIFICATION 7 YOUNG PROFESSIONAL POSTS HG

SAI Recruitment 2021: ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಡೆದವರಿಗೆ ಅವಕಾಶ

ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

news18-kannada
Updated:April 30, 2021, 4:30 PM IST
SAI Recruitment 2021: ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಪಡೆದವರಿಗೆ ಅವಕಾಶ
jobs
  • Share this:
ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಖಾಲಿ ಇರುವ ಏಳು ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ. ಮೇ 10,2021ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಿದೆ.

ವಿದ್ಯಾರ್ಹತೆ: ಪದವಿ, ಡಿಪ್ಲೋಮಾ ಮತ್ತು ಎಂಬಿಎ, ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ: ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ: ಯಂಗ್ ಪ್ರೊಫೆಷನಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000ರಿಂದ 60,000 ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ ಹೇಗೆ?: ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ?:

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ jobs.saibangalore@gmail.com ವಿಳಾಸಕ್ಕೆ ಮೇಲ್ ಮಾಡಬೇಕು.  ಮೇ 10,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
Published by: Harshith AS
First published: April 30, 2021, 4:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories