SSC Recruitment: ಸಿಬ್ಬಂದಿ ನೇಮಕಾತಿ ಆಯೋಗ: ಪೊಲೀಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಯು 20 ರಿಂದ 25 ವರ್ಷಗಳ ಒಳಗಿರಬೇಕು. ಇನ್ನು ವಯೋಮಿತಿ ವಿನಾಯಿತಿ ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ನೀಡಲಾಗುತ್ತದೆ.

zahir | news18-kannada
Updated:October 4, 2019, 11:03 AM IST
SSC Recruitment: ಸಿಬ್ಬಂದಿ ನೇಮಕಾತಿ ಆಯೋಗ: ಪೊಲೀಸ್​ ಹುದ್ದೆಗಳಿಗೆ ಅರ್ಜಿ ಆಹ್ವಾನ
Jobs
  • Share this:
SSC Recruitment 2019: ಸಿಬ್ಬಂದಿ ನೇಮಕ ಆಯೋಗ(ಎಸ್‌ಎಸ್‌ಸಿ) ದೆಹಲಿ ಪೊಲೀಸ್, ಸಿಎಪಿಎಫ್ ಮತ್ತು ಸಿಐಎಸ್‌ಎಫ್​ನ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಮತ್ತು ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಉದ್ಯೋಗ ಭರ್ತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದ್ದು, ಆಸಕ್ತರು ಅಕ್ಟೋಬರ್ 16 ರಕ್ಕಿಂತ ಮೊದಲು ಎಸ್‌ಎಸ್‌ಸಿ ಅಧಿಕೃತ ವೆಬ್‌ಸೈಟ್ ssc.nic.in ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಯಾವ ಹುದ್ದೆಗಳ ಭರ್ತಿ:
CAPFs ಮತ್ತು ದೆಹಲಿ ಪೊಲೀಸ್​ನ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಮತ್ತು ಸಿಐಎಸ್‌ಎಫ್‌ನಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಪರೀಕ್ಷಾ ದಿನಾಂಕ:
ಸಿಬಿಟಿ (ಪೇಪರ್ -1): ಪರೀಕ್ಷೆಯ ದಿನಾಂಕ - 11 ಡಿಸೆಂಬರ್ 2019 ರಿಂದ 13 ಡಿಸೆಂಬರ್ 2019
ಸಿಬಿಟಿ (ಪೇಪರ್ -2): ದಿನಾಂಕ ಇನ್ನೂ ನಿಗದಿಪಡಿಸಲಾಗಿಲ್ಲ.

ಅರ್ಜಿ ಶುಲ್ಕ: 100 ರೂ.ಮಹಿಳೆಯರು, ಎಸ್‌ಸಿ, ಎಸ್‌ಟಿ ಮತ್ತು ಮಾಜಿ ಸೈನಿಕರಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು 20 ರಿಂದ 25 ವರ್ಷಗಳ ಒಳಗಿರಬೇಕು. ಇನ್ನು ವಯೋಮಿತಿ ವಿನಾಯಿತಿ ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ:
ಯಾವುದಾದರೂ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಶೀಘ್ರದಲ್ಲೇ 2 ಸೀರಿಯಲ್​ಗಳಿಗೆ ಬ್ರೇಕ್..! ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಡುವವರ ಪಟ್ಟಿ ಇಲ್ಲಿದೆ..!

ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - 16 ಅಕ್ಟೋಬರ್ 2019.
ಆನ್‌ಲೈನ್​ನಲ್ಲಿ ಶುಲ್ಕವನ್ನು ಪಾವತಿಸುವ ಕೊನೆಯ ದಿನಾಂಕ - 18 ಅಕ್ಟೋಬರ್ 2019.

ಹೆಚ್ಚಿನ ಮಾಹಿತಿ:
ಈ ಹುದ್ದೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕ ಆಯೋಗ(ಎಸ್‌ಎಸ್‌ಸಿ)ದ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡಬಹುದು.

ಇದನ್ನೂ ಓದಿ: ಪ್ರಾಣಿ ಪ್ರೀತಿಯ ಯಜಮಾನ: ಕೀನ್ಯಾದಲ್ಲಿ ದರ್ಶನ್ ಫೋಟೋಗ್ರಾಫಿ ಹೇಗಿತ್ತು? ಇಲ್ಲಿದೆ ನೋಡಿ

First published:October 4, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ