HOME » NEWS » Lifestyle » SURPRISING HEALTH BENEFITS OF LITCHI THE WONDER FRUIT ZP

Health Tips: ಲಿಚ್ಚಿ ಹಣ್ಣು ತಿನ್ನುವುದರಿಂದ ಸಿಗುತ್ತೆ ಹಲವು ಆರೋಗ್ಯಕಾರಿ ಪ್ರಯೋಜನಗಳು

ಈ ಹಣ್ಣಿನಲ್ಲಿ ಸಕ್ಕರೆಯ ಅಂಶ ಹೆಚ್ಚಿರುವುದರಿಂದ ಮಧುಮೇಹದ ಸಮಸ್ಯೆಯಿಂದ ಬಳಲುತ್ತಿರುವವರು ಸೇವಿಸದಿರುವುದು ಉತ್ತಮ. ಹೀಗಾಗಿ ಮಧುಮೇಹಿಗಳು ಈ ಹಣ್ಣನ್ನು ಸೇವಿಸದಂತೆ ಎಚ್ಚರವಹಿಸಿ.

news18-kannada
Updated:April 5, 2021, 7:19 AM IST
Health Tips: ಲಿಚ್ಚಿ ಹಣ್ಣು ತಿನ್ನುವುದರಿಂದ ಸಿಗುತ್ತೆ ಹಲವು ಆರೋಗ್ಯಕಾರಿ ಪ್ರಯೋಜನಗಳು
lychee
  • Share this:
ಲಿಚ್ಚಿ ಹಣ್ಣು ಹೆಚ್ಚಿನವರಿಗೆ ಇಷ್ಟವಾದರೆ, ಮತ್ತೆ ಕೆಲವರು ಈ ಹಣ್ಣಿನಿಂದ ಬಲು ದೂರ. ಆದರೆ ಈ ಹಣ್ಣನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಏಕೆಂದರೆ ಈ ಹಣ್ಣಿನಲ್ಲಿ ಹೇರಳವಾಗಿರುವ ವಿಟಮಿನ್ ಸಿ ಇದ್ದು, ಇದು ಸಾಂಕ್ರಾಮಿಕ ರೋಗಗಳು ಬರದಂತೆ ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇನ್ನು ಈ ಹಣ್ಣಿನ ನಿಯಮಿತ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಅದರಲ್ಲೂ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಈ ಹಣ್ಣು ಉತ್ತಮ ಮನೆಮದ್ದು ಎಂದು ಹೇಳಲಾಗಿದೆ.

ಲಿಚ್ಚಿ ಹಣ್ಣಿನಲ್ಲಿ ಕರಗುವ ನಾರುಗಳಿದ್ದು, ಇದು ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ ಸಮಸ್ಯೆಗಳಾದ ನೆಗಡಿ-ಶೀತ ಮುಂತಾದ ಸಮಸ್ಯೆಗಳು ಬರದಂತೆ ತಡೆಯುತ್ತದೆ.

ಹಾಗೆಯೇ ಸೌಂದರ್ಯ ಹೆಚ್ಚಿಸಲು ಕೂಡ ಈ ಹಣ್ಣು ಪ್ರಯೋಜನಕಾರಿಯಾಗಿದ್ದು, ಇದನ್ನು ನಿಯಮಿತವಾಗಿ ತಿನ್ನುವುದರಿಂದ ಮುಖದ ಮೊಡವೆ ಹಾಗೂ ಇನ್ನಿತರ ಗುಳ್ಳೆಗಳು ಮಾಯವಾಗುತ್ತದೆ. ಅಲ್ಲದೆ ಮುಖವನ್ನು ಕಾಂತಿಯುತವಾಗಿ ರೂಪಿಸುತ್ತದೆ.

ಈ ಹಣ್ಣಿನಲ್ಲಿ ಪೊಟ್ಯಾಷಿಯಂ ಅಂಶಗಳು ಹೇರಳವಾಗಿದ್ದು, ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಅದರೊಂದಿಗೆ ಚಯಾಪಚಯ ಕ್ರಿಯೆಯನ್ನು ಚುರುಕುಗೊಳಿಸಿ ಮಲಬದ್ಧತೆ ಮತ್ತು ಜೀರ್ಣಕ್ರಿಯೆ ಸಮಸ್ಯೆಯನ್ನು ದೂರ ಮಾಡುತ್ತದೆ.

ಈ ಬಗ್ಗೆ ಎಚ್ಚರವಿರಲಿ: ಈ ಹಣ್ಣಿನಲ್ಲಿ ಸಕ್ಕರೆಯ ಅಂಶ ಹೆಚ್ಚಿರುವುದರಿಂದ ಮಧುಮೇಹದ ಸಮಸ್ಯೆಯಿಂದ ಬಳಲುತ್ತಿರುವವರು ಸೇವಿಸದಿರುವುದು ಉತ್ತಮ. ಹೀಗಾಗಿ ಮಧುಮೇಹಿಗಳು ಈ ಹಣ್ಣನ್ನು ಸೇವಿಸದಂತೆ ಎಚ್ಚರವಹಿಸಿ.

ಈ ಬಗ್ಗೆ ಎಚ್ಚರವಿರಲಿ: ಈ ಹಣ್ಣಿನಲ್ಲಿ ಸಕ್ಕರೆಯ ಅಂಶ ಹೆಚ್ಚಿರುವುದರಿಂದ ಮಧುಮೇಹದ ಸಮಸ್ಯೆಯಿಂದ ಬಳಲುತ್ತಿರುವವರು ಸೇವಿಸದಿರುವುದು ಉತ್ತಮ. ಹೀಗಾಗಿ ಮಧುಮೇಹಿಗಳು ಈ ಹಣ್ಣನ್ನು ಸೇವಿಸದಂತೆ ಎಚ್ಚರವಹಿಸಿ.
Published by: zahir
First published: April 5, 2021, 7:19 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories