JOB: ಮೈಸೂರು ವಿಶ್ವವಿದ್ಯಾಲಯದಲ್ಲಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿ

ಗರಿಷ್ಠ 30 ವರ್ಷದ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ. ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

news18-kannada
Updated:November 26, 2019, 11:40 AM IST
JOB: ಮೈಸೂರು ವಿಶ್ವವಿದ್ಯಾಲಯದಲ್ಲಿ ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿ
university of mysore recruitment 2019 for junior research fellow posts Mysore,
  • Share this:
ಮೈಸೂರು ವಿಶ್ವವಿದ್ಯಾನಿಲಯವು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.  ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗೆ ತಿಳಿದು ಡಿಸೆಂಬರ್ 3, 2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:
ಜ್ಯೂನಿಯರ್​ ರಿಸರ್ಚ್​​​ ಫೆಲೋ ಹುದ್ದೆಗಳನ್ನು ಭರ್ತಿ ಮಾಡುವ ಅಭ್ಯರ್ಥಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಶಿಕ್ಷಣ ಪೂರೈಸಿರಬೇಕು. ಎಂ.ಎ/ಎಂಎಸ್​ಡಬ್ಲ್ಯೂ/ಎಂ.ಎಡ್​ ವಿದ್ಯಾರ್ಹತೆಯನ್ನು ಹೊಂದಿದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ:

ಗರಿಷ್ಠ 30 ವರ್ಷದ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪರಿಶಿಷ್ಟ ಜಾತಿ. ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ ವಿವರ:

ಜ್ಯೂನಿಯರ್​ ರಿಸರ್ಚ್​​​ ಫೆಲೋ ಹುದ್ದೆಗೆ ಆಯ್ಕೆಯಾದ ಆಭ್ಯರ್ಥಿಗೆ ತಿಂಗಳಿಗೆ 25 ಸಾವಿರ ರೂ. ವೇತನವನ್ನು ನೀಡಲಾಗುವುದು.
Loading...

ಆಯ್ಕೆ ಪ್ರಕ್ರಿಯೆ:

ಆಭ್ಯರ್ಥಿಗಳನ್ನು ಮೆರಿಟ್​ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು  ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ. ನಂತರ ಅಲ್ಲಿರುವ ನಿಗದಿತ ಅರ್ಜಿಯನ್ನು ಡೌನ್​ಲೋಡ್​ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಯನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಅಂಚೆ ಅಥವಾ ಕೊರಿಯರ್​ ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಡಿಸೆಂಬರ್​ 3, 2019.

ಕಚೇರಿಯ ವಿಳಾಸ:

ಡಾ. ಡಿ.ಸಿ ನಂಜುಂಡ

ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳಉವಿಕೆ ನೀತಿ ಅಧ್ಯಯನ ಕೇಂದ್ರ,

ಮಾನವಿಕ ವಿಭಾಗ,

ಮಾನಸಗಂಗೋತ್ರಿ, ಮೈಸೂರು-570006

ಹುದ್ದೆಯ ಬಗೆಗಿನ ಅಧಿಸೂಚನೆ
First published:November 26, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...