UPSC Recruitment 2020: ಸ್ನಾತಕೋತ್ತರ ಪದವೀಧರರಿಗೆ ಇಲ್ಲಿದೆ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳುವ ಅವಕಾಶ

ಅರ್ಜಿ ಸಲ್ಲಿಸುವ ಅಭರ್ಥಿಗಳು ಎಂ.ಎಸ್ಸಿ, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೆಲಸ

ಕೆಲಸ

  • Share this:
    ಕೇಂದ್ರ ಲೋಕ ಸೇವಾ ಆಯೋಗ ಜ್ಯೂನಿಯರ್ ಸೈಂಟಿಫಿಕ್ ಅಧಿಕಾರಿ, ಸೈಂಟಿಫಿಕ್ -ಬಿ ಮತ್ತು ರೀಜನಲ್ ಹೋಂ ಎಕನಾಮಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ತಿಳಿಸಿದೆ.  ಆನ್‌ಲೈನ್ ಮೂಲಕ ಮಾರ್ಚ್ 12,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

    ಖಾಲಿ ಇರುವ ಹುದ್ದೆಗಳು:41

    ವಿದ್ಯಾರ್ಹತೆ:

    ಅರ್ಜಿ ಸಲ್ಲಿಸುವ ಅಭರ್ಥಿಗಳು ಎಂ.ಎಸ್ಸಿ, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

    ವಯೋಮಿತಿ:

    ಗರಿಷ್ಟ 30, 35 ಮತ್ತು 38 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.

    ಆಯ್ಕೆ ಪ್ರಕ್ರಿಯೆ:

    ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ:

    ಅರ್ಜಿದಾರರು 25 ರೂ. ಅರ್ಜಿ ಶುಲ್ಕವನ್ನು ಎಸ್‌ಬಿಐ ಶಾಖೆಯಲ್ಲಿ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ.

    ಅರ್ಜಿ ಸಲ್ಲಿಸುವ ವಿಧಾನ:

    ಆಸಕ್ತ ಅಭ್ಯರ್ಥಿಗಳು ಕೇಂದ್ರಿಯ ಲೋಕ ಸೇವಾ ಆಯೋಗದ https://www.upsconline.nic.in/ora/VacancyNoticePub.php ವೆಬ್​ಸೈಟ್​ಗೆ ಭೇಟಿ ನೀಡಿ ಅಲ್ಲಿರುವ ಅರ್ಜಿಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಇಲ್ಲಿದೆ
    First published: